Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ; ಉನ್ನತ ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ; ಉನ್ನತ ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ನವೆಂಬರ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.11: ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಹಾಗೂ ವಿವಿಧ ವಿದ್ಯಾರ್ಥಿವೇತನ ಯೋಜನೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಸಿಗ್ಮ ಪೀಡಿಯಾ (Sigma Pedia) ಮತ್ತು ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಸಿಗ್ಮ ಪೀಡಿಯಾ ಸಂಸ್ಥೆಯ ಸ್ಥಾಪಕ ಹಾಗೂ ಸಿಇಒ ಅಮೀನ್ ಇ. ಮುದಸ್ಸರ್ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ವಿವಿಧ ವಿದ್ಯಾರ್ಥಿವೇತನ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಆರ್ಥಿಕ ಪರಿಸ್ಥಿತಿ ಯಾವುದೇ ವಿದ್ಯಾರ್ಥಿಯ ಉನ್ನತ ಶಿಕ್ಷಣಕ್ಕೆ ಅಡ್ಡಿಯಾಗಬಾರದು. ಪ್ರತಿಭಾವಂತ ಹಾಗೂ ಆಸಕ್ತ ವಿದ್ಯಾರ್ಥಿಗಳಿಗೆ ಸರ್ಕಾರ ಮತ್ತು ವಿವಿಧ ಖಾಸಗಿ ಸಂಸ್ಥೆಗಳಿಂದ ಹಲವಾರು ವಿದ್ಯಾರ್ಥಿವೇತನಗಳು ಲಭ್ಯವಿವೆ. ವಿದ್ಯಾರ್ಥಿಗಳು ಇಂತಹ ಅವಕಾಶಗಳ ಕುರಿತು ಸರಿಯಾದ ಮಾಹಿತಿ ಪಡೆದುಕೊಂಡು, ಅರ್ಹತೆಗೆ ಅನುಗುಣವಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿವೇತನದ ಮೂಲಕ ಒಂದು ಲಕ್ಷ ರೂ.ವರೆಗೂ ಆರ್ಥಿಕ ನೆರವು ಪಡೆಯಲು ಅವಕಾಶವಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

2001ರಿಂದ ಈವರೆಗೆ ಐದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾರ್ಗದರ್ಶನ ನೀಡಿರುವ ತಮ್ಮ ಅನುಭವವನ್ನು ಹಂಚಿಕೊಂಡ ಅವರು, ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ, ಅಗತ್ಯ ದಾಖಲೆಗಳು, ಅರ್ಹತಾ ಮಾನದಂಡಗಳು ಹಾಗೂ ವಿವಿಧ ಯೋಜನೆಗಳ ಕುರಿತು ವಿವರಿಸಿದರು.

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ. ಲೋಕೇಶ್ ಎ.ಜೆ. ಮಾತನಾಡಿ, ಉನ್ನತ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಭವಿಷ್ಯ ರೂಪಿಸುವ ಪ್ರಮುಖ ಹಂತವಾಗಿದೆ. ಆರ್ಥಿಕ ಸಮಸ್ಯೆಯಿಂದಾಗಿ ಯಾವುದೇ ವಿದ್ಯಾರ್ಥಿ ಶಿಕ್ಷಣದಿಂದ ವಂಚಿತರಾಗಬಾರದು. ಇಂತಹ ಜಾಗೃತಿ ಕಾರ್ಯಾಗಾರಗಳು ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳನ್ನು ಪರಿಚಯಿಸುವುದರ ಜೊತೆಗೆ ಉನ್ನತ ಶಿಕ್ಷಣದ ಕನಸು ನನಸಾಗಿಸಲು ಸಹಕಾರಿಯಾಗುತ್ತವೆ. ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ನಿರಂತರ ಅಧ್ಯಯನದ ಮೂಲಕ ತಮ್ಮ ಗುರಿ ಸಾಧಿಸಬೇಕು ಎಂದು ಕರೆ ನೀಡಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಖಾಲಿದ್ ಹಾಕತ್ತೂರು, ಕಳೆದ ಐದು ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗಾಗಿ ಸಂಸ್ಥೆಯು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ ಎಂದರು.

ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳ ಮೂಲಕ ದೊರೆಯುವ ವಿದ್ಯಾರ್ಥಿವೇತನಗಳನ್ನು ಪಡೆಯುವ ಕುರಿತು ವಿದ್ಯಾರ್ಥಿಗಳಲ್ಲಿರುವ ಮಾಹಿತಿಯ ಕೊರತೆಯನ್ನು ಈ ಕಾರ್ಯಾಗಾರದ ಮೂಲಕ ನೀಗಿಸಲಾಗಿದೆ. ಮುಂದಿನ ದಿನಗಳಲ್ಲಿಯೂ ವಿದ್ಯಾರ್ಥಿಗಳಿಗಾಗಿ ಇಂತಹ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸಿಗ್ಮ ಪೀಡಿಯಾ ಮತ್ತು ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್‌ನ ಈ ಜಂಟಿ ಪ್ರಯತ್ನಕ್ಕೆ ವಿದ್ಯಾರ್ಥಿಗಳಿಂದ ಉತ್ತಮ ಸ್ಪಂದನೆ ವ್ಯಕ್ತವಾಯಿತು. ಸಂಸ್ಥೆಯಿಂದ ತಮಗೆ ದೊರೆತ ಆರ್ಥಿಕ ಪ್ರೋತ್ಸಾಹದ ಕುರಿತು ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ರಿಜಿಸ್ಟ್ರಾರ್ ಡಾ. ರವಿ ಕಿರಣ್, ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಮಂಜುಳ ಎ.ಕೆ., ಉಮ್ಮತ್ ಒನ್ ಕೊಡಗು ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ ಎಂ.ಬಿ. ಬಷೀರ್, ಟ್ರಸ್ಟಿಗಳಾದ ಹನೀಫ್, ಸಲೀಂ ಮತ್ತಿತರರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡಾ. ಕೋರನ ಸರಸ್ವತಿ ಹಾಗೂ ಉಳುವಂಗಡ ಕಾವೇರಿ ಉದಯ್ ಅವರಿಗೆ ದತ್ತಿ ಪ್ರಶಸ್ತಿ ಪ್ರದಾನ

ನವೆಂಬರ್ 11, 2026

ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ನವೆಂಬರ್ 11, 2026

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಭಕ್ತಿಭಾವದಿಂದ ನೆರವೇರಿದ ದೀಪಾವಳಿ ದೀಪೋತ್ಸವ

ನವೆಂಬರ್ 11, 2026

ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ನವೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.11: ಕನ್ನಡ ನಾಡಿನ ವೀರವನಿತೆ ಒನಕೆ ಓಬವ್ವ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮವನ್ನು ಸ್ಮರಿಸುವ…

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಭಕ್ತಿಭಾವದಿಂದ ನೆರವೇರಿದ ದೀಪಾವಳಿ ದೀಪೋತ್ಸವ

ನವೆಂಬರ್ 11, 2026

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ; ಉನ್ನತ ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ನವೆಂಬರ್ 11, 2026

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳಿಸಲು ₹5 ಕೋಟಿ ಅನುದಾನ ಬಿಡುಗಡೆ; ಟೆಂಡರ್ ಪ್ರಕ್ರಿಯೆ ತ್ವರಿತಗೊಳಿಸಿ ಕಾಮಗಾರಿಗೆ ಶೀಘ್ರ ಚಾಲನೆ ನೀಡಲು ಶಾಸಕ ಡಾ. ಮಂತರ್ ಗೌಡ ಸೂಚನೆ

ನವೆಂಬರ್ 11, 2026

ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಸರ್ವ ದೇವತೆಗಳ ವಿಗ್ರಹಗಳಿಗೆ ಶಾಂತಿ ಪೂಜೆ

ನವೆಂಬರ್ 11, 2026

ವಿರಾಜಪೇಟೆ ಪಟ್ಟಣದ ಸಮಸ್ಯೆಗಳ ವಿರುದ್ಧ ನಾಗರಿಕ ಸಮಿತಿ ಆಕ್ರೋಶ; ವಾಹನ ದಟ್ಟಣೆ, ಭ್ರಷ್ಟಾಚಾರ, ಗ್ಯಾಸ್ ವಿತರಣೆ ಅಕ್ರಮ, ಮಾಲಿನ್ಯ ನಿಯಂತ್ರಣಕ್ಕೆ ಆಗ್ರಹ; ಅಧಿಕಾರಿಗಳಿಗೆ ಹೋರಾಟದ ಎಚ್ಚರಿಕೆ

ನವೆಂಬರ್ 11, 2026

ಕೊಡವರ ಹತ್ತು ಸಂವಿಧಾನಾತ್ಮಕ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹ: ಕಡಂಗದಲ್ಲಿ CNC 9ನೇ ಮಾನವ ಸರಪಳಿ; ಸೂಕ್ಷ್ಮ ಮಟ್ಟದ ವಿಶ್ಲೇಷಣೆಯ ಮೂಲಕ ಕೊಡವರ ವಿಶಿಷ್ಟ ಜನಾಂಗೀಯ ಗುರುತಿಗೆ ನ್ಯಾಯ ಒದಗಿಸಬೇಕು – ಎನ್.ಯು. ನಾಚಪ್ಪ

ನವೆಂಬರ್ 11, 2026

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 2026

ಮಿಷನ್ ಶಕ್ತಿ ಯೋಜನೆ: ಮಹಿಳೆಯರು, ಮಕ್ಕಳ ಸಮಗ್ರ ಭದ್ರತೆ ಹಾಗೂ ಸಬಲೀಕರಣಕ್ಕೆ ಆದ್ಯತೆ

ನವೆಂಬರ್ 10, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೀನ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮದನ್ ಸೋಮಣ್ಣ ಆಯ್ಕೆ

ನವೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.