Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ನವೆಂಬರ್ 11, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.11: ಕನ್ನಡ ನಾಡಿನ ವೀರವನಿತೆ ಒನಕೆ ಓಬವ್ವ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮವನ್ನು ಸ್ಮರಿಸುವ ನಿಟ್ಟಿನಲ್ಲಿ ನಗರದ ಗಾಂಧಿ ಭವನದಲ್ಲಿ ಬುಧವಾರ ಒನಕೆ ಓಬವ್ವ ಜಯಂತಿಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ಲಾಸಂ ಶಾಲೆಯ ವಿದ್ಯಾರ್ಥಿಗಳು ನಾಗರಹಾವು ಚಲನಚಿತ್ರದ ಜನಪ್ರಿಯ ಗೀತೆಯಾದ ‘ಕನ್ನಡ ನಾಡಿನ ವೀರರಮಣಿಯ, ಗಂಡು ಭೂಮಿಯ ವೀರನಾರಿಯ’ ಹಾಡಿಗೆ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.

ಕಾರ್ಯಕ್ರಮದಲ್ಲಿ ಮಾತನಾಡಿದ ನಿವೃತ್ತ ಹಿರಿಯ ಉಪನ್ಯಾಸಕಿ ಬಿ.ಬಿ. ಸವಿತ ಅವರು, 18ನೇ ಶತಮಾನದಲ್ಲಿ ಒನಕೆ ಓಬವ್ವ ಅವರು ರಾಜ್ಯದ ಇತಿಹಾಸದಲ್ಲಿ ಅಸಾಧಾರಣ ಶೌರ್ಯ ಮೆರೆದ ವೀರವನಿತೆಯಾಗಿದ್ದಾರೆ ಎಂದು ಹೇಳಿದರು.

ಈಗಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲ್ಲೂಕಿನ ಗುಡೇಕೋಟೆಯಲ್ಲಿ ಜನಿಸಿದ ಒನಕೆ ಓಬವ್ವ ಅವರು ಚಿತ್ರದುರ್ಗದ ಏಳುಸುತ್ತಿನ ಕೋಟೆಯ ಕಾವಲುಗಾರರಾಗಿದ್ದ ಮುದ್ದ ಹನುಮ ಅವರ ಪತ್ನಿಯಾಗಿದ್ದರು. ಒಂದು ದಿನ ನೀರು ತರಲು ತೆರಳಿದ್ದ ಸಂದರ್ಭದಲ್ಲಿ ಕೋಟೆಯ ಕಿಂಡಿಯ ಮೂಲಕ ಶತ್ರುಗಳು ಒಳನುಗ್ಗುತ್ತಿರುವುದನ್ನು ಗಮನಿಸಿದ ಅವರು, ತಕ್ಷಣ ಒನಕೆಯನ್ನು ಆಯುಧವನ್ನಾಗಿ ಮಾಡಿಕೊಂಡು ಒಬ್ಬೊಬ್ಬರಾಗಿ ಬರುತ್ತಿದ್ದ ಶತ್ರುಗಳನ್ನು ಸದೆಬಡಿದು ಕೋಟೆಯನ್ನು ರಕ್ಷಿಸಿದರು ಎಂದು ವಿವರಿಸಿದರು.

ಸಾಮಾನ್ಯ ಮಹಿಳೆಯಾಗಿದ್ದ ಒನಕೆ ಓಬವ್ವ ಅವರು ಸಮಯಪ್ರಜ್ಞೆ, ಧೈರ್ಯ ಮತ್ತು ಸಾಹಸದಿಂದ ಶತ್ರುಗಳ ವಿರುದ್ಧ ಹೋರಾಡಿ ಜಯಗಳಿಸಿರುವುದು ಪ್ರತಿಯೊಬ್ಬರಿಗೂ ಸ್ಫೂರ್ತಿದಾಯಕವಾಗಿದೆ. ಅವರ ಸಾಹಸವನ್ನು ಸ್ಮರಿಸುವ ಉದ್ದೇಶದಿಂದ ಚಿತ್ರದುರ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಪ್ರತಿಮೆಗಳನ್ನು ಸ್ಥಾಪಿಸಿ ಗೌರವಿಸಲಾಗುತ್ತಿದೆ ಎಂದರು.

ಬ್ಲಾಸಂ ಶಾಲೆಯ ಪ್ರಾಂಶುಪಾಲರಾದ ಅನಸೂಯ ಅವರು ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ, ಅಬ್ಬಕ್ಕ ರಾಣಿ ಹಾಗೂ ಕೆಳದಿ ಚೆನ್ನಮ್ಮ ಅವರಂತೆ ಒನಕೆ ಓಬವ್ವ ಅವರು ಕೂಡ ಶತ್ರುಗಳ ವಿರುದ್ಧ ವೀರಾವೇಶದಿಂದ ಹೋರಾಡಿದ ಧೀರ ಮಹಿಳೆಯಾಗಿದ್ದಾರೆ. ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗಾಗಿ ಅವರು ನಡೆಸಿದ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಬ್ಲಾಸಂ ಶಾಲೆಯ ವಿದ್ಯಾರ್ಥಿನಿಯರು ವಂದೇ ಮಾತರಂ ಗೀತೆ ಹಾಗೂ ನಾಡಗೀತೆಯನ್ನು ಹಾಡಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಡಾ. ಅಜೀಜ್, ಶಿಕ್ಷಕರಾದ ಸೆಲ್ವಿ, ಪ್ರಿಯಾಂಕ, ವನಿತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕುಮಾರ ಸ್ವಾಗತಿಸಿದರು. ಮಣಜೂರು ಮಂಜುನಾಥ್ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಡಾ. ಕೋರನ ಸರಸ್ವತಿ ಹಾಗೂ ಉಳುವಂಗಡ ಕಾವೇರಿ ಉದಯ್ ಅವರಿಗೆ ದತ್ತಿ ಪ್ರಶಸ್ತಿ ಪ್ರದಾನ

ನವೆಂಬರ್ 11, 2026

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಭಕ್ತಿಭಾವದಿಂದ ನೆರವೇರಿದ ದೀಪಾವಳಿ ದೀಪೋತ್ಸವ

ನವೆಂಬರ್ 11, 2026

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ; ಉನ್ನತ ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ನವೆಂಬರ್ 11, 2026

ವೀರರಾಣಿ ಒನಕೆ ಓಬವ್ವ ಜಯಂತಿ ಆಚರಣೆ

ನವೆಂಬರ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.11: ಕನ್ನಡ ನಾಡಿನ ವೀರವನಿತೆ ಒನಕೆ ಓಬವ್ವ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮವನ್ನು ಸ್ಮರಿಸುವ…

ಕರ್ಣಂಗೇರಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಭಕ್ತಿಭಾವದಿಂದ ನೆರವೇರಿದ ದೀಪಾವಳಿ ದೀಪೋತ್ಸವ

ನವೆಂಬರ್ 11, 2026

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ವಿದ್ಯಾರ್ಥಿವೇತನ ಜಾಗೃತಿ ಕಾರ್ಯಾಗಾರ; ಉನ್ನತ ಶಿಕ್ಷಣ ಮತ್ತು ವಿದ್ಯಾರ್ಥಿವೇತನದ ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಕರೆ

ನವೆಂಬರ್ 11, 2026

ಕೊಡವ ಹೆರಿಟೇಜ್ ಸೆಂಟರ್ ಕಾಮಗಾರಿ ಪೂರ್ಣಗೊಳಿಸಲು ₹5 ಕೋಟಿ ಅನುದಾನ ಬಿಡುಗಡೆ; ಟೆಂಡರ್ ಪ್ರಕ್ರಿಯೆ ತ್ವರಿತಗೊಳಿಸಿ ಕಾಮಗಾರಿಗೆ ಶೀಘ್ರ ಚಾಲನೆ ನೀಡಲು ಶಾಸಕ ಡಾ. ಮಂತರ್ ಗೌಡ ಸೂಚನೆ

ನವೆಂಬರ್ 11, 2026

ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಸರ್ವ ದೇವತೆಗಳ ವಿಗ್ರಹಗಳಿಗೆ ಶಾಂತಿ ಪೂಜೆ

ನವೆಂಬರ್ 11, 2026

ವಿರಾಜಪೇಟೆ ಪಟ್ಟಣದ ಸಮಸ್ಯೆಗಳ ವಿರುದ್ಧ ನಾಗರಿಕ ಸಮಿತಿ ಆಕ್ರೋಶ; ವಾಹನ ದಟ್ಟಣೆ, ಭ್ರಷ್ಟಾಚಾರ, ಗ್ಯಾಸ್ ವಿತರಣೆ ಅಕ್ರಮ, ಮಾಲಿನ್ಯ ನಿಯಂತ್ರಣಕ್ಕೆ ಆಗ್ರಹ; ಅಧಿಕಾರಿಗಳಿಗೆ ಹೋರಾಟದ ಎಚ್ಚರಿಕೆ

ನವೆಂಬರ್ 11, 2026

ಕೊಡವರ ಹತ್ತು ಸಂವಿಧಾನಾತ್ಮಕ ಹಕ್ಕೊತ್ತಾಯಗಳ ಈಡೇರಿಕೆಗೆ ಆಗ್ರಹ: ಕಡಂಗದಲ್ಲಿ CNC 9ನೇ ಮಾನವ ಸರಪಳಿ; ಸೂಕ್ಷ್ಮ ಮಟ್ಟದ ವಿಶ್ಲೇಷಣೆಯ ಮೂಲಕ ಕೊಡವರ ವಿಶಿಷ್ಟ ಜನಾಂಗೀಯ ಗುರುತಿಗೆ ನ್ಯಾಯ ಒದಗಿಸಬೇಕು – ಎನ್.ಯು. ನಾಚಪ್ಪ

ನವೆಂಬರ್ 11, 2026

ಬೆಲೆ ಏರಿಕೆ ಖಂಡಿಸಿ ಸೋಮವಾರಪೇಟೆಯಲ್ಲಿ ಜೆಡಿಎಸ್ ಪ್ರತಿಭಟನೆ; ಅಗತ್ಯ ವಸ್ತುಗಳು, ನಂದಿನಿ ಹಾಲು ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಇಳಿಕೆಗೆ ಆಗ್ರಹಿಸಿ ತಹಶೀಲ್ದಾರ್‌ಗೆ ಮನವಿ

ನವೆಂಬರ್ 10, 2026

ಮಿಷನ್ ಶಕ್ತಿ ಯೋಜನೆ: ಮಹಿಳೆಯರು, ಮಕ್ಕಳ ಸಮಗ್ರ ಭದ್ರತೆ ಹಾಗೂ ಸಬಲೀಕರಣಕ್ಕೆ ಆದ್ಯತೆ

ನವೆಂಬರ್ 10, 2026

ಕೂರ್ಗ್ ಹೋಂಸ್ಟೇಸ್ ಅಸೋಸಿಯೇಷನ್ ಅಧ್ಯಕ್ಷರಾಗಿ ಮೀನ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮದನ್ ಸೋಮಣ್ಣ ಆಯ್ಕೆ

ನವೆಂಬರ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.