ಮಡಿಕೇರಿ, NEWS DESK ನ.11: 2026ನೇ ಸಾಲಿನ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ ನವೆಂಬರ್ 13ರಂದು ಬೆಳಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಯುವ ಸಂಸತ್ತು ಕಾರ್ಯಕ್ರಮ ನಡೆಯಲಿದೆ.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಡಿಕೇರಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮಡಿಕೇರಿ ಶಾಸಕ ಡಾ.ಮಂತರ್ ಗೌಡ, ವಿರಾಜಪೇಟೆ ಶಾಸಕ ಹಾಗೂ ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಎ.ಎಸ್.ಪೊನ್ನಣ್ಣ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜ್ಯಸಭಾ ಸದಸ್ಯ ಅಜಯ್ ಮಾಕನ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.
ಇದಲ್ಲದೆ ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಸಿ.ಎಸ್.ಅರುಣ್ ಮಾಚಯ್ಯ, ವಿವಿಧ ನಿಗಮ ಹಾಗೂ ಪ್ರಾಧಿಕಾರಗಳ ಪ್ರಮುಖರು, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.






















