Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಅತಿ ಮುಖ್ಯ: ಫಾದರ್ ಮದಲೈ ಮುತ್ತು; ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕರ ಸಭೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಅತಿ ಮುಖ್ಯ: ಫಾದರ್ ಮದಲೈ ಮುತ್ತು; ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕರ ಸಭೆ

ನವೆಂಬರ್ 12, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ, NEWS DESK ನ.12: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು ವಹಿಸುವ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರ ಸಹಕಾರ ಅಗತ್ಯವಾಗಿದೆ ಎಂದು ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು ಅಭಿಪ್ರಾಯಪಟ್ಟರು.

ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪೋಷಕ–ಶಿಕ್ಷಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪೋಷಕರು ತಮ್ಮ ಮಕ್ಕಳನ್ನು ಕಾಲೇಜಿಗೆ ದಾಖಲಿಸಿದ ಮಾತ್ರಕ್ಕೆ ಅವರ ಜವಾಬ್ದಾರಿ ಮುಗಿಯುವುದಿಲ್ಲ. ಬದಲಾಗಿ, ಶೈಕ್ಷಣಿಕ ಅವಧಿಯಲ್ಲಿ ಮಕ್ಕಳ ಹಾಜರಾತಿ, ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಹಾಗೂ ಒಟ್ಟಾರೆ ಶೈಕ್ಷಣಿಕ ಪ್ರಗತಿಯನ್ನು ಆಗಾಗ್ಗೆ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಬೇಕು ಎಂದು ಸಲಹೆ ನೀಡಿದರು.

ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯೇ ಪೋಷಕ–ಶಿಕ್ಷಕರ ಸಭೆಯ ಮುಖ್ಯ ಉದ್ದೇಶವಾಗಿದೆ. ಸಂಸ್ಥೆಯ ವತಿಯಿಂದ ಮೌಲ್ಯಯುತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಲ್ಲಿ ಶಿಸ್ತು, ಪ್ರಾಮಾಣಿಕತೆ ಬೆಳೆಸಲು ಹಾಗೂ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸೂಕ್ತ ಮಾರ್ಗದರ್ಶನ ನೀಡಲಾಗುತ್ತಿದೆ. ಪೋಷಕರು ಮನೆಯಲ್ಲಿಯೂ ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಿ ಪ್ರೋತ್ಸಾಹಿಸಿದಾಗ ಅವರು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.

ಮುಂದಿನ ಶೈಕ್ಷಣಿಕ ಸಾಲಿನಲ್ಲಿ ಸಂಸ್ಥೆಯ ವತಿಯಿಂದ ಬಸ್ ವ್ಯವಸ್ಥೆ ಕಲ್ಪಿಸುವ ಉದ್ದೇಶವಿದ್ದು, ಪೋಷಕರ ಅಭಿಪ್ರಾಯ ಹಾಗೂ ಬೇಡಿಕೆಗೆ ಅನುಗುಣವಾಗಿ ಸೂಕ್ತ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು. ಅಲ್ಲದೆ, ಡಿಸೆಂಬರ್ ತಿಂಗಳಿನಲ್ಲಿ ಕಾಲೇಜು ವಾರ್ಷಿಕೋತ್ಸವ ಹಾಗೂ ರಾಜ್ಯಮಟ್ಟದ ಬಾಕ್ಸಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಎಲ್ಲರೂ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು.

ಕಾಲೇಜಿನ ಕನ್ನಡ ಉಪನ್ಯಾಸಕ ಹೇಮಂತ್ ಮಾತನಾಡಿ, ಪೋಷಕರು ಕನಿಷ್ಠ ತಿಂಗಳಿಗೊಮ್ಮೆಯಾದರೂ ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ಮಕ್ಕಳ ಶೈಕ್ಷಣಿಕ ಪ್ರಗತಿಯ ಕುರಿತು ಸಮಾಲೋಚನೆ ನಡೆಸಬೇಕು. ವಿದ್ಯಾರ್ಥಿಗಳ ಹಾಜರಾತಿಯನ್ನು ಪರಿಶೀಲಿಸುವುದರ ಜೊತೆಗೆ ಅವರು ಸರಿಯಾದ ಮಾರ್ಗದಲ್ಲಿ ಸಾಗಲು ಮತ್ತು ಗುಣಮಟ್ಟದ ಶಿಕ್ಷಣ ಪಡೆಯಲು ಪೋಷಕರ ಪಾತ್ರ ಹಾಗೂ ಸಹಕಾರ ಅತ್ಯಗತ್ಯ ಎಂದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಪೋಷಕರು ಪ್ರಾಂಶುಪಾಲರು ಹಾಗೂ ಉಪನ್ಯಾಸಕರೊಂದಿಗೆ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿ, ತಮ್ಮ ಸಲಹೆ-ಸೂಚನೆಗಳನ್ನು ನೀಡಿದರು.

ಈ ಸಂದರ್ಭದಲ್ಲಿ ಪದವಿ ಪೂರ್ವ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪೋಷಕರು ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕ ನೋಹ ವಿವೇಕ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅಂಗಾಂಗ ದಾನ ಮಾಡಿದ ಯುವಕ ಯೋಗೇಶ್ ಮನೆಗೆ ಶಾಸಕ ಡಾ. ಮಂತರ್ ಗೌಡ ಭೇಟಿ; ಪೋಷಕರಿಗೆ ಸಾಂತ್ವನ ಹೇಳಿ ಕುಟುಂಬದ ದುಃಖದಲ್ಲಿ ಭಾಗಿಯಾದ ಶಾಸಕ

ನವೆಂಬರ್ 12, 2026

ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಆಗ್ರಹ; ಕೊಡಗು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಕ್ರೈಸ್ತ ಸಂಘಟನೆಗಳಿಂದ ಮನವಿ

ನವೆಂಬರ್ 12, 2026

ಮನುಷ್ಯನ ಅಂತರಂಗದ ಶುದ್ಧಿಗೆ ವಚನ ಸಾಹಿತ್ಯ ದಿವ್ಯ ಔಷಧಿ: ಡಾ. ಜಮೀರ್ ಅಹಮದ್

ನವೆಂಬರ್ 12, 2026

ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರ ಪಾತ್ರ ಅತಿ ಮುಖ್ಯ: ಫಾದರ್ ಮದಲೈ ಮುತ್ತು; ಸಂತ ಅನ್ನಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ಪೋಷಕ–ಶಿಕ್ಷಕರ ಸಭೆ

ನವೆಂಬರ್ 12, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.12: ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯಲ್ಲಿ ಪೋಷಕರು ವಹಿಸುವ ಪಾತ್ರ ಅತ್ಯಂತ ಪ್ರಮುಖವಾಗಿದ್ದು, ಮಕ್ಕಳ ಉತ್ತಮ ಭವಿಷ್ಯ…

ಧಾರ್ಮಿಕ ಸ್ವಾತಂತ್ರ್ಯ ಮತ್ತು ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ಆಗ್ರಹ; ಕೊಡಗು ಜಿಲ್ಲಾಡಳಿತದ ಮೂಲಕ ರಾಜ್ಯ ಸರ್ಕಾರಕ್ಕೆ ಕ್ರೈಸ್ತ ಸಂಘಟನೆಗಳಿಂದ ಮನವಿ

ನವೆಂಬರ್ 12, 2026

ಮನುಷ್ಯನ ಅಂತರಂಗದ ಶುದ್ಧಿಗೆ ವಚನ ಸಾಹಿತ್ಯ ದಿವ್ಯ ಔಷಧಿ: ಡಾ. ಜಮೀರ್ ಅಹಮದ್

ನವೆಂಬರ್ 12, 2026

ನ.16ರಂದು ತಲಕಾವೇರಿಯಲ್ಲಿ ಕಿರು ಸಂಕ್ರಮಣ ವಿಶೇಷ ಪೂಜೆ

ನವೆಂಬರ್ 12, 2026

ನ.21ರಂದು ಮರಗೋಡಿನಲ್ಲಿ ಅದ್ಧೂರಿ ‘ಕನ್ನಡ ಹಬ್ಬ’

ನವೆಂಬರ್ 12, 2026

ಕುಂದುರುಮೊಟ್ಟೆಯಲ್ಲಿ ನೋಡುಗರ ಮನಸೆಳೆದ ಚಿಣ್ಣರ ದಸರಾ ಮಂಟಪಗಳು!

ನವೆಂಬರ್ 12, 2026

ಅಂಗಾಂಗ ದಾನ ಮಾಡಿದ ಯೋಗೇಶ್ ಮನೆಗೆ ಪ್ರಸನ್ನ ಎಡಿಕೇರಿ ಭೇಟಿ; ರಾತ್ರಿಯೂ ತಜ್ಞ ವೈದ್ಯರನ್ನು ನಿಯೋಜಿಸುವಂತೆ ಜಿಲ್ಲಾಸ್ಪತ್ರೆ ಸರ್ಜನ್‌ಗೆ ಮನವಿ

ನವೆಂಬರ್ 12, 2026

ನಿಗಮ ಮಂಡಳಿಗಳಿಗೆ ನಿರ್ದೇಶಕರ ಆಯ್ಕೆ: ಕೊಡಗು ಜಿಲ್ಲೆಯಿಂದ ಐವರಿಗೆ ಅವಕಾಶ

ನವೆಂಬರ್ 11, 2026

7ನೇ ಹೊಸಕೋಟೆಯ ಗೌರಿ ಬಡಾವಣೆಯಲ್ಲಿ ಸಾಮರಸ್ಯ ದೀಪಾವಳಿ ಆಚರಣೆ

ನವೆಂಬರ್ 11, 2026

ಸುಂಟಿಕೊಪ್ಪದಲ್ಲಿ ಸಾಮರಸ್ಯ ದೀಪಾವಳಿ ಆಚರಣೆ

ನವೆಂಬರ್ 11, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.