ಪೊನ್ನಂಪೇಟೆ, NEWS DESK ನ.13: ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಹುದಿಕೇರಿ ಭಾಗಕ್ಕೆ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಇಂದು ಅಧಿಕೃತ ಪ್ರವಾಸ ಕೈಗೊಂಡರು.
ಈ ಸಂದರ್ಭದಲ್ಲಿ ಸರ್ಕಾರದಿಂದ ಮಂಜೂರಾಗಿರುವ 50 ಹಾಸಿಗೆಗಳ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ಸ್ಥಳದಲ್ಲಿದ್ದ ಇಂಜಿನಿಯರ್ಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಂದ ಕಾಮಗಾರಿಯ ಪ್ರಗತಿಯ ಕುರಿತು ಮಾಹಿತಿ ಪಡೆದುಕೊಂಡ ಶಾಸಕರು, ಆಸ್ಪತ್ರೆಯ ನಿರ್ಮಾಣ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದೊಂದಿಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ಆಸ್ಪತ್ರೆ ಪೂರ್ಣಗೊಂಡಲ್ಲಿ ಹುದಿಕೇರಿ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಅನುಕೂಲವಾಗಲಿದೆ ಎಂಬ ಆಶಯ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ವಲಯ ಅಧ್ಯಕ್ಷ ಚಂಗುಲಂಡ ಸೂರಜ್, ಬೂತ್ ಅಧ್ಯಕ್ಷ ಮಂದಣ್ಣ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಅಣ್ಣಳ್ಳಮಾಡ ಅಪ್ಪಣ್ಣ, ಹಿರಿಯ ಕಾಂಗ್ರೆಸ್ ಮುಖಂಡರಾದ ಚೆಕ್ಕೇರ ವಾಸು ಕುಟ್ಟಪ್ಪ ಹಾಗೂ ಸುಧೀರ್, ಪಕ್ಷದ ಮುಖಂಡರಾದ ಅಜ್ಜಿಕುಟ್ಟಿರ ಪಮ್ಮು, ನೂರೇರ ರಮೇಶ್, ಮನೋಹರ್, ಕಿಟ್ಟು, ಕಾವೇರಪ್ಪ, ಲೋಕನಾಥ್, ರಬಿ, ಬಿಪಿನ್ ಹಾಗೂ ಹುದಿಕೇರಿ ಯುವ ಕಾಂಗ್ರೆಸ್ ಅಧ್ಯಕ್ಷ ರೀಕ್ಷಿತ್ ಕಾರ್ಯಪ್ಪ ಸೇರಿದಂತೆ ಪಕ್ಷದ ಪ್ರಮುಖರು ಮತ್ತು ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.
















