ಮಡಿಕೇರಿ, NEWS DESK ನ. 14: ದೇವರಕೊಲ್ಲಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಯೋಗ ಸಿಂಚನ ಕಾರ್ಯಕ್ರಮ ನಡೆಯಿತು.
ಅಂತರರಾಷ್ಟ್ರೀಯ ಮಟ್ಟದ ಹಲವು ಪ್ರಶಸ್ತಿಗಳನ್ನು ಪಡೆದಿರುವ ಮದೆನಾಡಿನ ಯುವ ಯೋಗ ಸಾಧಕಿ ಸಿಂಚನಾ ಅವರು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು. ಇದೇ ಸಂದರ್ಭದಲ್ಲಿ ಯೋಗದ ಮಹತ್ವ ಹಾಗೂ ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಅಗತ್ಯತೆಯ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಸದಾನಂದ, ಅಂಗನವಾಡಿ ಶಿಕ್ಷಕಿ ಶೋಭಾ, ವಿದ್ಯಾರ್ಥಿಗಳ ಪೋಷಕರು, ಸ್ಥಳೀಯರು, ದೇವರಕೊಲ್ಲಿ ಶ್ರೀ ಚಾಮುಂಡೇಶ್ವರಿ ದೇವಾಲಯ ಸಮಿತಿ ಅಧ್ಯಕ್ಷ ಯಶೋಧರ ಹಾಗೂ ಸಿಂಚನಾ ಅವರ ಪೋಷಕರಾದ ಕೀರ್ತಿ ಕುಮಾರ್ ಮತ್ತು ರೇಣುಕಾ ಉಪಸ್ಥಿತರಿದ್ದರು.
















