ಮಡಿಕೇರಿ, NEWS DESK ನ.15: ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಘಟಕಗಳು, ಕೊಡಗು ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ ಹಾಗೂ ಕಾಲೇಜಿನ ಎನ್ಸಿಸಿ ಘಟಕದ ಸಂಯುಕ್ತ ಆಶ್ರಯದಲ್ಲಿ ನವೆಂಬರ್ 12ರಂದು ಕಾಲೇಜಿನ ಮೈದಾನದಲ್ಲಿ ಎಚ್ಐವಿ/ಏಡ್ಸ್ ಕುರಿತು ಜಾಗೃತಿ ಮೂಡಿಸುವ ಬೀದಿನಾಟಕ ಮತ್ತು ಫ್ಲ್ಯಾಶ್ಮಾಬ್ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು 19 ಕರ್ನಾಟಕ ಬೆಟಾಲಿಯನ್ನ ಲೆಫ್ಟಿನೆಂಟ್ ಕರ್ನಲ್ ಶ್ರೀನಿವಾಸ್ ಉದ್ಘಾಟಿಸಿದರು. ಕರ್ನಲ್ ಶಿಜು ಗೌರವಾನ್ವಿತ ಅತಿಥಿಗಳಾಗಿ ಭಾಗವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಮೇಜರ್ ಪ್ರೊ. ರಾಘವ ಬಿ. ಅಧ್ಯಕ್ಷತೆ ವಹಿಸಿದ್ದರು.
ಕೊಡಗು ಜಿಲ್ಲೆಯ ವಿವಿಧ ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳ ಎನ್ಸಿಸಿ ಅಧಿಕಾರಿಗಳು ಮತ್ತು ಕೆಡೆಟ್ಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕಾರ್ಯಕ್ರಮದ ಅಂಗವಾಗಿ ಎನ್ಎಸ್ಎಸ್ ಸ್ವಯಂಸೇವಕರು ಬೀದಿನಾಟಕ ಹಾಗೂ ಫ್ಲ್ಯಾಶ್ಮಾಬ್ ಪ್ರದರ್ಶನದ ಮೂಲಕ ಎಚ್ಐವಿ/ಏಡ್ಸ್ ಹರಡುವ ವಿಧಾನಗಳು, ತಡೆಗಟ್ಟುವ ಕ್ರಮಗಳು, ಮುನ್ನೆಚ್ಚರಿಕೆಗಳು, ಸರ್ಕಾರದ ವಿವಿಧ ಯೋಜನೆಗಳು ಮತ್ತು ಸಮಾಲೋಚನಾ ಕಾರ್ಯಕ್ರಮಗಳ ಕುರಿತು ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸಿದರು.
ಈ ಸಂದರ್ಭದಲ್ಲಿ ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಶೈಲಶ್ರೀ ಕೆ. ಮತ್ತು ಅಲೋಕ್ ಕೆ. ಬಜೈ, ಸಹಾಯಕ ಅಧಿಕಾರಿಗಳಾದ ಶರತ್, ಮೋನಿಕಾ, ಸುಶ್ಮಿತಾ, ಅಶ್ವಿತಾ ಹಾಗೂ ಎನ್ಸಿಸಿ ಸಹಾಯಕ ಅಧಿಕಾರಿ ಪವನ್ ಉಪಸ್ಥಿತರಿದ್ದರು. ಎನ್ಎಸ್ಎಸ್ ನಾಯಕರು ಮತ್ತು ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ವಿದ್ಯಾರ್ಥಿಗಳಲ್ಲಿ ಎಚ್ಐವಿ/ಏಡ್ಸ್ ಕುರಿತು ಅರಿವು ಮೂಡಿಸುವುದರ ಜೊತೆಗೆ ಆರೋಗ್ಯ ಜಾಗೃತಿ ಮತ್ತು ಸಾಮಾಜಿಕ ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಈ ಕಾರ್ಯಕ್ರಮ ಮಹತ್ವದ ಪಾತ್ರ ವಹಿಸಿತು.
















