Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ವಾರ್ಷಿಕ ಮಹಾಸಭೆ: ಸ್ಪಷ್ಟ ಯೋಜನೆ ರೂಪಿಸಿ ಅನುಷ್ಠಾನಕ್ಕೆ ಪ್ರಯತ್ನಿಸಿ – ಟಿ.ಎಲ್. ಪ್ರವೀಣ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ವಾರ್ಷಿಕ ಮಹಾಸಭೆ: ಸ್ಪಷ್ಟ ಯೋಜನೆ ರೂಪಿಸಿ ಅನುಷ್ಠಾನಕ್ಕೆ ಪ್ರಯತ್ನಿಸಿ – ಟಿ.ಎಲ್. ಪ್ರವೀಣ್

ನವೆಂಬರ್ 15, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ, NEWS DESK ನ. 15: ಸ್ಪಷ್ಟ ಗುರಿಯನ್ನು ಹೊಂದಿ, ಸೂಕ್ತ ಯೋಜನೆ ರೂಪಿಸಿಕೊಂಡು ಅದನ್ನು ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಆಗ ಮಾತ್ರ ಉದ್ಯಮದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಉದ್ಯಮಿ ಟಿ.ಎಲ್. ಪ್ರವೀಣ್ ಹೇಳಿದರು.

ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್‌ನ ವಾರ್ಷಿಕ ಮಹಾಸಭೆಯಲ್ಲಿ ಬಿಸಿನೆಸ್ ಎಕ್ಸಲೆನ್ಸ್ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಅವರು, ಜಗತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಉದ್ಯಮಿಗಳು ಕಾಲಕ್ಕೆ ತಕ್ಕಂತೆ ತಮ್ಮ ಉದ್ಯಮಗಳನ್ನು ಅಭಿವೃದ್ಧಿಪಡಿಸಿಕೊಳ್ಳಬೇಕು ಎಂದರು. ಹುಟ್ಟೂರಿನಲ್ಲಿ ಉದ್ಯಮಿಯ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ನೀಡಿರುವುದು ಮತ್ತಷ್ಟು ಪ್ರೇರಣೆ ನೀಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೈಸೂರು ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಅಧ್ಯಕ್ಷ ಡಾ. ಲಿಂಗರಾಜು ಮಾತನಾಡಿ, ಕೊಡಗು ಮತ್ತು ಮೈಸೂರು ಜಿಲ್ಲೆಗಳು ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ಕೊಡಗು ಜಿಲ್ಲೆಯಲ್ಲಿ ಕೈಗಾರಿಕೆ ಹಾಗೂ ದೊಡ್ಡ ಉದ್ಯಮಗಳ ಬೆಳವಣಿಗೆಗೆ ಸಾಕಷ್ಟು ಅವಕಾಶಗಳಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಲು ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರಪ್ರಸಾದ್ ಮಾತನಾಡಿ, ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಸ್ಥಾನೀಯ ಸಮಿತಿಯು ಜಿಲ್ಲೆಯಲ್ಲಿ ಸದಾ ಕ್ರಿಯಾಶೀಲವಾಗಿ ಜನಪರ ಕಾರ್ಯಗಳನ್ನು ನಿರ್ವಹಿಸುತ್ತಿರುವುದು ಸಂತಸದ ವಿಚಾರ ಎಂದರು.

ಕೊಡಗು ಜಿಲ್ಲಾ ವಾಣಿಜ್ಯೋದ್ಯಮಿಗಳ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಗಿರೀಶ್ ಗಣಪತಿ ಮಾತನಾಡಿ, ಸಂಘವು 2027ರ ಜನವರಿ 10ರಂದು ಬೆಳ್ಳಿ ಹಬ್ಬ ಆಚರಿಸಿಕೊಳ್ಳಲಿದ್ದು, ಜಿಲ್ಲೆಯ ಎಲ್ಲ ವರ್ತಕ ಬಂಧುಗಳು ಕಾರ್ಯಕ್ರಮಕ್ಕೆ ಸರ್ವ ರೀತಿಯಲ್ಲೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಕುಶಾಲನಗರ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಎಸ್. ನಾಗೇಶ್ ಮಾತನಾಡಿ, ಆವರ್ತಿಯ ಯೋಗೀಶ್ ಕುಟುಂಬ ಸಂಸ್ಥೆಗೆ ಉಚಿತವಾಗಿ ನೀಡಿರುವ ನಿವೇಶನದಲ್ಲಿ ಅಂದಾಜು ಒಂದು ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸುವ ಗುರಿ ಹೊಂದಲಾಗಿದೆ. ಈ ಯೋಜನೆಗೆ ಸದಸ್ಯರು ಸಹಕಾರ ನೀಡಬೇಕು ಎಂದು ತಿಳಿಸಿದರು.

ಅಲ್ಲದೆ, ಡಿಸೆಂಬರ್ 18, 19 ಮತ್ತು 20ರಂದು ಎರಡನೇ ವರ್ಷದ ಕನ್ಸ್ಯೂಮರ್ ಫೇರ್ ಆಯೋಜಿಸಲಾಗುವುದು. ಈ ಎಕ್ಸ್‌ಪೋಗೆ ರಾಜ್ಯ ಹಾಗೂ ಕೇಂದ್ರ ಸಚಿವರನ್ನು ಆಹ್ವಾನಿಸಿ, ಜಿಲ್ಲೆಯ ಅಭಿವೃದ್ಧಿಗೆ ಸಂಬಂಧಿಸಿದ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿ ಮನವಿ ಮಾಡಲಾಗುವುದು ಎಂದರು. ಕಳೆದ ಒಂದು ವರ್ಷದಲ್ಲಿ ಚೇಂಬರ್ ವತಿಯಿಂದ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೈಗೊಂಡ ವಿವಿಧ ಕಾರ್ಯಗಳ ಮಾಹಿತಿಯನ್ನೂ ಸಭೆಯಲ್ಲಿ ಹಂಚಿಕೊಂಡರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕ ಕಾರ್ಯದರ್ಶಿ ಬಿ.ಆರ್. ನಾರಾಯಣ ಅವರನ್ನು ಗೌರವಿಸಲಾಯಿತು.

ಕಾರ್ಯದರ್ಶಿ ಚಿತ್ರ ರಮೇಶ್ ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಎನ್.ವಿ. ಬಾಬು ಲೆಕ್ಕಪತ್ರ ಮಂಡಿಸಿದರು.

ಮೈಸೂರು ಚೇಂಬರ್ ಕಾರ್ಯದರ್ಶಿ ಶಿವಾಜಿ ರಾವ್, ಸ್ಥಾನೀಯ ಸಮಿತಿಯ ನಿರ್ದೇಶಕರಾದ ಎಸ್.ಕೆ. ಸತೀಶ್, ಪಿ.ಎಂ. ಮೋಹನ್, ಅಶ್ವಿನಿ ರೈ, ಮುಖೇಶ್ ಜೈನ್, ಹೆಚ್.ಎಂ. ಚಂದ್ರು, ಕೆ.ಎನ್. ದೇವರಾಜ್, ಜನಾರ್ಧನ ಪ್ರಭು ಸೇರಿದಂತೆ ಹಲವು ವರ್ತಕರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ನವೆಂಬರ್ 28ರಂದು ಮೂರು ನಾಡಿನ ಕೈಮುಡಿಕೆ ಪುತ್ತರಿ ಕೋಲ್ 

ನವೆಂಬರ್ 15, 2026

ಮಡಿಕೇರಿಯಲ್ಲಿ ಮಹಿಳಾ ಸಹಕಾರ ಸಂಘಗಳಿಂದ ಸಹಕಾರ ಸಪ್ತಾಹ : ಯುವತಿಯರ ಸಹಭಾಗಿತ್ವದಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಉನ್ನತಿಗೆ ಕೊಂಡೊಯ್ಯಲು ಕರೆ

ನವೆಂಬರ್ 15, 2026

ಮಕ್ಕಳ ದಿನಾಚರಣೆ ಅಂಗವಾಗಿ ನ.22ರಂದು 4 ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ : ಕೊಡಗಿನ ಎಲ್ಲಾ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ಶಿಲ್ಪಾ ಸತೀಶ್ ಮನವಿ

ನವೆಂಬರ್ 15, 2026

ನವೆಂಬರ್ 28ರಂದು ಮೂರು ನಾಡಿನ ಕೈಮುಡಿಕೆ ಪುತ್ತರಿ ಕೋಲ್ 

ನವೆಂಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಂದಾ, NEWS DESK ನ.15: ಇತಿಹಾಸ ಪ್ರಸಿದ್ಧ ಬೊಟ್ಟಿಯತ್ ಮೂಂದ್ ನಾಡಿನ ಕೈಮುಡಿಕೆ ಪುತ್ತರಿ ಕೋಲ್ ಮಂದ್ ಕಾರ್ಯಕ್ರಮವನ್ನು ಇದೇ…

ಮಡಿಕೇರಿಯಲ್ಲಿ ಮಹಿಳಾ ಸಹಕಾರ ಸಂಘಗಳಿಂದ ಸಹಕಾರ ಸಪ್ತಾಹ : ಯುವತಿಯರ ಸಹಭಾಗಿತ್ವದಲ್ಲಿ ಸಹಕಾರ ಕ್ಷೇತ್ರವನ್ನು ಮತ್ತಷ್ಟು ಉನ್ನತಿಗೆ ಕೊಂಡೊಯ್ಯಲು ಕರೆ

ನವೆಂಬರ್ 15, 2026

ಮಕ್ಕಳ ದಿನಾಚರಣೆ ಅಂಗವಾಗಿ ನ.22ರಂದು 4 ನೇ ವರ್ಷದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ : ಕೊಡಗಿನ ಎಲ್ಲಾ ಶಾಲಾ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಡಾ. ಶಿಲ್ಪಾ ಸತೀಶ್ ಮನವಿ

ನವೆಂಬರ್ 15, 2026

ಡಾ.ಅಂಬೇಡ್ಕರ್ ಪ್ರತಿಮೆ ಪ್ರತಿಷ್ಠಾಪನೆ ವಿಳಂಬ : ದಲಿತ ಸಂಘರ್ಷ ಸಮಿತಿ ಅಸಮಾಧಾನ

ನವೆಂಬರ್ 15, 2026

ಎಚ್‌ಐವಿ/ಏಡ್ಸ್ ಜಾಗೃತಿಗಾಗಿ ಬೀದಿನಾಟಕ ಮತ್ತು ಫ್ಲ್ಯಾಶ್‌ಮಾಬ್ ಕಾರ್ಯಕ್ರಮ

ನವೆಂಬರ್ 15, 2026

ಬಿರುನಾಣಿಯಲ್ಲಿ ₹30 ಲಕ್ಷ ವೆಚ್ಚದ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ ಭೂಮಿಪೂಜೆ; ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಶಾಸಕರ ವಿಶೇಷ ಅನುದಾನದಲ್ಲಿ ಕಾಮಗಾರಿಗೆ ಚಾಲನೆ

ನವೆಂಬರ್ 15, 2026

ನವೆಂಬರ್ 22ರಂದು ಅಜ್ಜಿಕುಟ್ಟಿರ ಕುಟುಂಬ ಹಾಕಿ ಪಂದ್ಯಾವಳಿಯ ಲಾಂಛನ ಬಿಡುಗಡೆ

ನವೆಂಬರ್ 15, 2026

ಸಾಲುಮರದ ತಿಮ್ಮಕ್ಕ ಸ್ಮರಣೆ: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜೀವನಶೈಲಿಯಾಗಲಿ

ನವೆಂಬರ್ 15, 2026

ಗುಂಡುಗುಟ್ಟಿ ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಸಂಭ್ರಮ; ಹಸಿರು ದೀಪಾವಳಿ ಆಚರಣೆ ಮೂಲಕ ಪರಿಸರ ಜಾಗೃತಿ

ನವೆಂಬರ್ 15, 2026

ರಸಪ್ರಶ್ನೆ ಸ್ಪರ್ಧೆ: ನಾಪೋಕ್ಲು ಕೆಪಿಎಸ್ ಶಾಲೆಯ ವಿದ್ಯಾರ್ಥಿಗಳ ತಂಡ ರಾಜ್ಯಮಟ್ಟಕ್ಕೆ ಆಯ್ಕೆ

ನವೆಂಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.