Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಯವ ಸಮಾಜದ 21ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಂಭ್ರಮ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಯವ ಸಮಾಜದ 21ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಂಭ್ರಮ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ನವೆಂಬರ್ 16, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.16: ಮೂರ್ನಾಡಿನಲ್ಲಿ ಕೊಯವ ಸಮಾಜದ 21ನೇ ಮಹಾಸಭೆ ಹಾಗೂ ಕ್ರೀಡಾಕೂಟವನ್ನು ಸಂಭ್ರಮದಿಂದ ಆಯೋಜಿಸಲಾಯಿತು. ಸಮಾರಂಭದಲ್ಲಿ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಯವ ಸಮಾಜದ ಅಧ್ಯಕ್ಷ ಜಿಲ್ಲಂಡ ದಾದು ಮಾದಪ್ಪ, ಸಮಾಜ ಬಾಂಧವರು ವರ್ಷಕ್ಕೊಮ್ಮೆಯಾದರೂ ಒಂದೆಡೆ ಸೇರಿ ವಿಚಾರ ವಿನಿಮಯ ಮಾಡಿಕೊಳ್ಳುವುದರಿಂದ ಪರಸ್ಪರ ಬಾಂಧವ್ಯ ಮತ್ತಷ್ಟು ಗಟ್ಟಿಯಾಗುತ್ತದೆ ಎಂದರು.

ಮೂರ್ನಾಡಿನಲ್ಲಿ ಸಮಾಜದ ವತಿಯಿಂದ ಈಗಾಗಲೇ ಜಾಗ ಖರೀದಿಸಲಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಸಿದ್ಧತೆ ನಡೆದಿದೆ. ಮಡಿಕೇರಿ ಕ್ಷೇತ್ರದ ಶಾಸಕರು 5 ಲಕ್ಷ ರೂ. ಅನುದಾನ ಮಂಜೂರು ಮಾಡಿದ್ದು, ಭೂಮಿಪೂಜೆಯೂ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಸರ್ಕಾರ, ಸಂಸದರು ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ಮೂಲಕ ಹೆಚ್ಚಿನ ಅನುದಾನ ಪಡೆಯಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಸಮಾಜದ ಉಪಾಧ್ಯಕ್ಷ ಮೇಚಿರ ಡಾ. ಸುಭಾಷ್ ನಾಣಯ್ಯ ಮಾತನಾಡಿ, ವಿದ್ಯಾರ್ಥಿಗಳು ಹಿಂದುಳಿದ ವರ್ಗಗಳ ಪ್ರವರ್ಗ ‘ಎ’ ಅಡಿಯಲ್ಲಿ ದೊರೆಯುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶಿಕ್ಷಣ, ಉದ್ಯೋಗ ಹಾಗೂ ವಿದ್ಯಾರ್ಥಿವೇತನದ ಪ್ರಯೋಜನ ಪಡೆಯಬೇಕು. ಎಲ್ಲಿಯೇ ಉದ್ಯೋಗ ನಿರ್ವಹಿಸಿದರೂ ಕೊಡವ ಭಾಷೆ ಮತ್ತು ಸಂಸ್ಕೃತಿಯನ್ನು ಮರೆಯಬಾರದು ಎಂದು ಸಲಹೆ ನೀಡಿದರು.

ಗೌರವ ಕಾರ್ಯದರ್ಶಿ ತೋರೆರ ಕಾಶಿ ಕಾರ್ಯಪ್ಪ ಅವರು ಸಮಾಜದ ಕಟ್ಟಡ ನಿರ್ಮಾಣದ ಪ್ರಗತಿಯ ಕುರಿತು ಮಾಹಿತಿ ನೀಡಿ, ಕಟ್ಟಡ ಕಾಮಗಾರಿಗೆ ಸಮಾಜ ಬಾಂಧವರು ಉದಾರವಾಗಿ ಧನಸಹಾಯ ನೀಡುವಂತೆ ಮನವಿ ಮಾಡಿದರು.

ಲೇಖಕಿ, ನಟಿ ಹಾಗೂ ಸಿನಿಮಾ ನಿರ್ಮಾಪಕಿ ಈರಮಂಡ ಹರಿಣಿ ವಿಜಯ್ ಮಾತನಾಡಿ, ವಿಶಿಷ್ಟ ಕೊಡವ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಯುವಜನತೆ ಪ್ರಮುಖ ಪಾತ್ರ ವಹಿಸಬೇಕು. ಉಮ್ಮತ್ತಾಟ್ ಮತ್ತು ಬೊಳಕಾಟ್ ನೃತ್ಯಗಳನ್ನು ಕಲಿಸಲು ಸಿದ್ಧರಿದ್ದು, ಆಸಕ್ತ ಯುವಕ-ಯುವತಿಯರು ಹೆಸರು ನೋಂದಾಯಿಸಿಕೊಳ್ಳಬಹುದು ಎಂದರು.

ಇದೇ ಸಂದರ್ಭ ನಿವೃತ್ತ ಯೋಧ ಮುಕ್ಕಾಟಿರ ನಾಣಯ್ಯ ಹಾಗೂ ಆರೋಗ್ಯ ಇಲಾಖೆಯ ನಿವೃತ್ತ ನೌಕರರಾದ ನೇಂದುಮಂಡ ಸುಜ್ಯೋತಿ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು.

ಸಭೆಯಲ್ಲಿ ಕಳೆದ ಮಹಾಸಭೆಯ ವರದಿಗೆ ಅಂಗೀಕಾರ ಪಡೆಯಲಾಯಿತು. ಗೌರವ ಕಾರ್ಯದರ್ಶಿ ತೋರೆರ ಕಾಶಿ ಕಾರ್ಯಪ್ಪ ಲೆಕ್ಕಪರಿಶೋಧನಾ ವರದಿ ಮಂಡಿಸಿದರು. ಆಡಳಿತ ಮಂಡಳಿಯ ವರದಿಯನ್ನು ಪುದಿಯೊಕ್ಕಡ ರೆಮಿತ ಸುಜಯ್ ವಾಚಿಸಿದರು.

10ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ತೋರೆರ ಮೋನಿಶ್ ಮುತ್ತಣ್ಣ ಹಾಗೂ ಕಳ್ಳಿರ ಚೋಂದಮ್ಮ, ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಮಲ್ಲಂಡ ಇಳಾ ತಂಗಮ್ಮ ಮತ್ತು ಪದವಿ ವಿಭಾಗದಲ್ಲಿ ಸಾಧನೆ ಮಾಡಿದ ಈರಮಂಡ ಕೇಸರಿ ಭೋಜಮ್ಮ, ಸ್ನಾತಕೋತರ ಪದವಿಯಲ್ಲಿ ಉತ್ತಮ ಅಂಕ ಪಡೆದ ಕಾಞಂಗಡ ಜಗತ್ ಸುಬ್ಬಯ್ಯ  ಹಾಗೂ ಕಳ್ಳಿರ ವಂಶಿ ಮೊನ್ನಪ್ಪ ಐರ್ಲ್ಯಾಂಡ್ ಡಬ್ಲ್ಯೂ ಇನ್ ಯುನಿವರ್ಸಿಟಿಯಲ್ಲಿ ಎಐ ಇನ್ ಎಂ ಎಸ್ ಸಿಯಲ್ಲಿ  ಉತ್ತಮ ಅಂಕ ಗಳಿಸಿ ತೇರ್ಗಡೆ ಗೊಂಡಿದ್ದಾರೆ ಅವರಿಗೆ ಸಮಾಜದ ದತ್ತಿನಿಧಿಯಿಂದ ಪ್ರೋತ್ಸಾಹಧನ ಹಾಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

ಕ್ರೀಡಾಕೂಟ

ಮಧ್ಯಾಹ್ನ ಮೂರ್ನಾಡಿನ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟವನ್ನು ಸಿಆರ್‌ಪಿಎಫ್ ಅಧಿಕಾರಿ ಅಮ್ಮಚಾಳಿಯಂಡ ಮುತ್ತಣ್ಣ ಉದ್ಘಾಟಿಸಿದರು. ಮಕ್ಕಳು, ಮಹಿಳೆಯರು ಹಾಗೂ ಪುರುಷರಿಗಾಗಿ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ಕೊಡವ ಪಾಟ್ ಮತ್ತು ವಾಲಗತ್ತಾಟ್ ಸ್ಪರ್ಧೆಗಳು ವಿಶೇಷ ಗಮನ ಸೆಳೆದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಸುಬ್ಬಯ್ಯ ನಿರೂಪಿಸಿ, ಮೇಚಿರ ರವಿಶಂಕರ್ ಪ್ರಾರ್ಥಿಸಿ, ಕಳ್ಳಿರ ನಾಣಯ್ಯ ವಂದಿಸಿದರು. ಮಲ್ಲಂಡ ಮಹೇಶ್, ಈರಮಂಡ ವಿಜಯ್, ಮೇಚಿರ ಹರೀಶ್, ನೆಂಡುಮಂಡ ಗೀತಾ ನಾಣಯ್ಯ, ಈರಮಂಡ ದಮಯಂತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಗಾಳಿಬೀಡು ರಸ್ತೆ ಕಾಮಗಾರಿ ಜನವರಿ 15ರೊಳಗೆ ಪೂರ್ಣಗೊಳಿಸಲು ಶಾಸಕ ಡಾ. ಮಂತರ್ ಗೌಡ ಖಡಕ್ ಸೂಚನೆ; ವಿಳಂಬ ಮುಂದುವರಿದರೆ ಗುತ್ತಿಗೆದಾರರಿಗೆ ಕಪ್ಪುಪಟ್ಟಿ, ಅಧಿಕಾರಿಗಳ ಅಮಾನತಿಗೆ ಎಚ್ಚರಿಕೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಪಿಎಲ್ ಕಾರ್ಡ್ದಾರರಿಗೆ ಉಚಿತ ಆರೋಗ್ಯ ಸೌಲಭ್ಯ: ಆಸ್ಪತ್ರೆಗಳಲ್ಲಿ ಮಾಹಿತಿ ಫಲಕ ಅಳವಡಿಸಲು ಎಸ್‌ಡಿಟಿಯು ಒತ್ತಾಯ

ನವೆಂಬರ್ 16, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.16: ಬಿಪಿಎಲ್ ಕಾರ್ಡ್ ಹೊಂದಿರುವ ರೋಗಿಗಳಿಗೆ ಲಭ್ಯವಿರುವ ಉಚಿತ ಆರೋಗ್ಯ ಸೌಲಭ್ಯಗಳ ಕುರಿತು ಮಡಿಕೇರಿ ಜಿಲ್ಲಾಸ್ಪತ್ರೆ…

ವ್ಯಕ್ತಿಗೆ ಸಾವು ಬಂದರೂ ಕಲೆ ಸದಾ ಜೀವಂತ: ವಿರಾಜಪೇಟೆಯಲ್ಲಿ 51 ದಿನಗಳ ಕಲಾ ಉತ್ಸವಕ್ಕೆ ಚಾಲನೆ

ನವೆಂಬರ್ 16, 2026

ಬಿಸಿಯೂಟದ ಸೆಂಟ್ರಲ್ ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಸಿಐಟಿಯು ಆಗ್ರಹ; ವೇತನ ಕಡಿತ ಖಂಡಿಸಿ ವಿರಾಜಪೇಟೆ ತಹಶೀಲ್ದಾರ್ ಕಚೇರಿ ಮುಂದೆ ಅಕ್ಷರ ದಾಸೋಹ ನೌಕರರ ಪ್ರತಿಭಟನೆ

ನವೆಂಬರ್ 16, 2026

ಕೊಡವ ಮುಸ್ಲಿಂ ಅಸೋಸಿಯೇಷನ್‌ನಿಂದ ಕೆ.ಎಂ.ಎ. ವಿಶೇಷ ಶೈಕ್ಷಣಿಕ ಪುರಸ್ಕಾರ ವಿತರಣೆ; ಏಳು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ; ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ

ನವೆಂಬರ್ 16, 2026

ಕರಾಟೆ ಸ್ಪರ್ಧೆಯಲ್ಲಿ ಅದ್ವೈತ್‌ಗೆ ದ್ವಿತೀಯ ಸ್ಥಾನ

ನವೆಂಬರ್ 16, 2026

 ಧಾರ್ಮಿಕ ಸ್ವಾತಂತ್ರ್ಯ, ಗೋಸಂರಕ್ಷಣಾ ಕಾಯ್ದೆ ಹಿಂಪಡೆಯಲು ವಿಶ್ವ ಹಿಂದೂ ಪರಿಷದ್ ವಿರೋಧ

ನವೆಂಬರ್ 16, 2026

ಕಾವೇರಿ ಶಾಲೆಯ ಮಕ್ಕಳ ದಿನಾಚರಣೆಯಲ್ಲಿ ಕ್ರೀಡಾ ಸಾಧಕರಿಗೆ ಸನ್ಮಾನ; ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ ಸ್ಮರಣಿಕೆ ವಿತರಣೆ

ನವೆಂಬರ್ 16, 2026

ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದಲ್ಲಿ ಶ್ರೀ ರಾಜರಾಜೇಶ್ವರಿ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 16, 2026

ಕೊಯವ ಸಮಾಜದ 21ನೇ ಮಹಾಸಭೆ ಮತ್ತು ಕ್ರೀಡಾಕೂಟ ಸಂಭ್ರಮ: ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ

ನವೆಂಬರ್ 16, 2026

ಕೊಡವಲ್ಯಾಂಡ್ ಸ್ವಾಯತ್ತತೆ ಕೊಡವರ ನ್ಯಾಯಸಮ್ಮತ ಹಕ್ಕು: ಎನ್.ಯು. ನಾಚಪ್ಪ; ಟಿ. ಶೆಟ್ಟಿಗೇರಿಯಲ್ಲಿ ಸಿಎನ್‌ಸಿಯ 10ನೇ ಮಾನವ ಸರಪಳಿ ಕಾರ್ಯಕ್ರಮ

ನವೆಂಬರ್ 16, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.