ಚೇರಂಬಾಣೆ, NEWS DESK ನ.16: ಚೇರಂಬಾಣೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಗೈದಿದ್ದಾರೆ.
ನವೆಂಬರ್ 12ರಂದು ಚೇರಂಬಾಣೆಯ ಉದಯ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿವಿಧ ವಿಭಾಗಗಳಲ್ಲಿ ನಡೆದ ಸ್ಪರ್ಧೆಗಳಲ್ಲಿ ಶ್ರೀ ರಾಜರಾಜೇಶ್ವರಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು 31 ಪ್ರಥಮ, 8 ದ್ವಿತೀಯ ಹಾಗೂ 5 ತೃತೀಯ ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಮೂಲಕ ಹಲವು ವಿದ್ಯಾರ್ಥಿಗಳು ತಾಲ್ಲೂಕು ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದು, ಶಾಲೆಯ ಸಾಧನೆಗೆ ಮೆಚ್ಚುಗೆ ವ್ಯಕ್ತವಾಗಿದೆ.
















