Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಚಂದ್ರವನ ಕಲ್ಯಾಣಿ ಅಭಿವೃದ್ಧಿಗೆ ₹4.73 ಕೋಟಿ ಅನುದಾನ; ಅಮೃತ್ 2.0 ಯೋಜನೆಯಡಿ ಸಮಗ್ರ ಅಭಿವೃದ್ಧಿ ಮತ್ತು ಪುನಶ್ಚೇತನ – ಸಂಸದ ಯದುವೀರ್ ಒಡೆಯರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಚಂದ್ರವನ ಕಲ್ಯಾಣಿ ಅಭಿವೃದ್ಧಿಗೆ ₹4.73 ಕೋಟಿ ಅನುದಾನ; ಅಮೃತ್ 2.0 ಯೋಜನೆಯಡಿ ಸಮಗ್ರ ಅಭಿವೃದ್ಧಿ ಮತ್ತು ಪುನಶ್ಚೇತನ – ಸಂಸದ ಯದುವೀರ್ ಒಡೆಯರ್

ನವೆಂಬರ್ 17, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮೈಸೂರು, ನ.17, NEWS DESK: ಮೈಸೂರಿನ ಸರಸ್ವತಿಪುರಂನಲ್ಲಿರುವ ಐತಿಹಾಸಿಕ ಚಂದ್ರವನ ಕಲ್ಯಾಣಿಯ ಸಮಗ್ರ ಅಭಿವೃದ್ಧಿ ಮತ್ತು ಪುನಶ್ಚೇತನ ಕಾಮಗಾರಿಗಳಿಗೆ ಕೇಂದ್ರ ಸರ್ಕಾರದ ಅಮೃತ್ 2.0 ಯೋಜನೆಯಡಿ ₹4.73 ಕೋಟಿ ಅನುದಾನ ಮೀಸಲಿಡಲಾಗಿದೆ ಎಂದು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.

ಚಂದ್ರವನ ಕಲ್ಯಾಣಿಗೆ ಭೇಟಿ ನೀಡಿದ ಸಂಸದರು, ಮೈಸೂರು ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಪ್ರಸ್ತಾವಿತ ಅಭಿವೃದ್ಧಿ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿದರು.

ಯೋಜನೆಯಡಿ ಒಟ್ಟು ₹473.82 ಲಕ್ಷ ಅನುದಾನದಲ್ಲಿ ಕಲ್ಯಾಣಿಯಲ್ಲಿನ ಹೂಳು ತೆಗೆಯುವ ಮೂಲಕ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸುವುದು, ಸುತ್ತಲಿನ ಕಲ್ಲಿನ ಮೆಟ್ಟಿಲುಗಳನ್ನು ನವೀಕರಿಸುವುದು, ಸುರಕ್ಷತೆಗಾಗಿ ಅಲಂಕಾರಿಕ ಗ್ರಿಲ್ ಹಾಗೂ ರೇಲಿಂಗ್‌ಗಳನ್ನು ಅಳವಡಿಸುವುದು ಮತ್ತು ಉದ್ಯಾನವನ ಅಭಿವೃದ್ಧಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ.

ಇದರೊಂದಿಗೆ ಕಲ್ಯಾಣಿಯ ಸುತ್ತಮುತ್ತಲಿನ ಪ್ರದೇಶವನ್ನು ಸಮಗ್ರವಾಗಿ ಅಭಿವೃದ್ಧಿಪಡಿಸಿ ಸಾರ್ವಜನಿಕರ ಬಳಕೆಗೆ ಅನುಕೂಲಕರ ವಾತಾವರಣ ನಿರ್ಮಿಸಲಾಗುವುದು. ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಮೈಸೂರು ಮಹಾನಗರ ಪಾಲಿಕೆಯ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನಗೊಳ್ಳಲಿದೆ. ಅಭಿವೃದ್ಧಿ ಪೂರ್ಣಗೊಂಡ ಬಳಿಕ ಮುಂದಿನ ಐದು ವರ್ಷಗಳ ಕಾಲ ಕಲ್ಯಾಣಿಯ ನಿರ್ವಹಣೆಯನ್ನೂ ಕೈಗೊಳ್ಳಲಾಗುತ್ತದೆ.

ಪರಿಶೀಲನೆ ಸಂದರ್ಭದಲ್ಲಿ ಅಧಿಕಾರಿಗಳೊಂದಿಗೆ ಕಾಮಗಾರಿಗಳ ಯೋಜನೆ ಮತ್ತು ಅನುಷ್ಠಾನದ ಕುರಿತು ಚರ್ಚಿಸಿದ ಸಂಸದರು, ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮೈಸೂರಿನ ಐತಿಹಾಸಿಕ ಪರಂಪರೆಯಲ್ಲಿ ಕೆರೆಗಳು, ಕಲ್ಯಾಣಿಗಳು ಹಾಗೂ ಸಾಂಪ್ರದಾಯಿಕ ಜಲಮೂಲಗಳು ಮಹತ್ವದ ಸ್ಥಾನ ಹೊಂದಿವೆ. ಇವುಗಳ ಸಂರಕ್ಷಣೆ ಮತ್ತು ಪುನಶ್ಚೇತನವು ಸಾಂಸ್ಕೃತಿಕ ಪರಂಪರೆಯನ್ನು ಉಳಿಸುವುದರ ಜೊತೆಗೆ ನಗರದ ಪರಿಸರ ಸಮತೋಲನ ಕಾಪಾಡಲು ಸಹಕಾರಿಯಾಗಿದೆ. ಅಮೃತ್ 2.0 ಯೋಜನೆಯ ಮೂಲಕ ಇಂತಹ ಅಮೂಲ್ಯ ಸಾರ್ವಜನಿಕ ಆಸ್ತಿಗಳನ್ನು ಪುನಶ್ಚೇತನಗೊಳಿಸಿ ಮುಂದಿನ ಪೀಳಿಗೆಗೂ ಅವುಗಳ ಪ್ರಯೋಜನ ದೊರೆಯುವಂತೆ ಮಾಡುವುದು ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾಮಗಾರಿಗಳು ಗುಣಮಟ್ಟದಿಂದ ಪೂರ್ಣಗೊಳ್ಳುವುದರ ಜೊತೆಗೆ ಕಲ್ಯಾಣಿಯ ಮೂಲ ಸ್ವರೂಪ ಮತ್ತು ಪರಿಸರ ಮಹತ್ವವನ್ನು ಕಾಪಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಮೂಲಸೌಕರ್ಯವನ್ನು ಬಲಪಡಿಸುವುದರೊಂದಿಗೆ ಸಾಂಪ್ರದಾಯಿಕ ಜಲಮೂಲಗಳ ಸಂರಕ್ಷಣೆ ಮತ್ತು ಪುನಶ್ಚೇತನಕ್ಕೆ ಈ ಯೋಜನೆ ಮಹತ್ವದ ಕೊಡುಗೆ ನೀಡಲಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಹೊಸೂರು ಜೆ.ಸತೀಶ್ ಕುಮಾರ್ ಅವಿರೋಧ ಆಯ್ಕೆ

ನವೆಂಬರ್ 17, 2026

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.17: ಮಕ್ಕಳಿಗೆ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸುವುದರ ಜೊತೆಗೆ, ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ…

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಲು ಒತ್ತಾಯ : ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಕೊಡಗು ಅಹಿಂದ ಬಳಗ

ನವೆಂಬರ್ 17, 2026

ಸೋಮವಾರಪೇಟೆಯಲ್ಲಿ 12 ಮಂದಿಗೆ ಕಚ್ಚಿದ್ದ ಬೀದಿನಾಯಿ ಸೆರೆ; ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಾಚರಣೆ – ಜನರ ಆತಂಕಕ್ಕೆ ತೆರೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಚಾಲನೆ; ‘ಶುದ್ಧ ಕೊಡಗು – ಹಸಿರು ಕೊಡಗು’ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲಿರಲಿ: ಶಾಸಕ ಪೊನ್ನಣ್ಣ

ನವೆಂಬರ್ 17, 2026

ಸಿದ್ದಾಪುರದಲ್ಲಿ ₹24.52 ಕೋಟಿ ವೆಚ್ಚದ 66/11 ಕೆ.ವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ; ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ನೂತನ ಆಟೋ ತಂಗುದಾಣ ನಿರ್ಮಾಣಕ್ಕೆ ಭೂಮಿಪೂಜೆ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ಕಾಮಗಾರಿಗೆ ಚಾಲನೆ

ನವೆಂಬರ್ 17, 2026

ಥ್ರೋಬಾಲ್ ಪಂದ್ಯಾಟದಲ್ಲಿ ಸರ್ವದೈವತ ವಿದ್ಯಾಸಂಸ್ಥೆಯ ಸಾಧನೆ: ಮೂರು ತಂಡಗಳು ವಿಭಾಗ ಮಟ್ಟಕ್ಕೆ ಆಯ್ಕೆ

ನವೆಂಬರ್ 17, 2026

ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿಗೆ ₹2.25 ಕೋಟಿ ಅನುದಾನ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಂದ ಭೂಮಿಪೂಜೆ

ನವೆಂಬರ್ 17, 2026

ಚಂದ್ರವನ ಕಲ್ಯಾಣಿ ಅಭಿವೃದ್ಧಿಗೆ ₹4.73 ಕೋಟಿ ಅನುದಾನ; ಅಮೃತ್ 2.0 ಯೋಜನೆಯಡಿ ಸಮಗ್ರ ಅಭಿವೃದ್ಧಿ ಮತ್ತು ಪುನಶ್ಚೇತನ – ಸಂಸದ ಯದುವೀರ್ ಒಡೆಯರ್

ನವೆಂಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.