ಮಡಿಕೇರಿ, NEWS DESK ನ.17: ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟವು ಮಡಿಕೇರಿ ತಾಲೂಕಿನ ಕಡಗದಾಳುವಿನಲ್ಲಿ ನಡೆಯಿತು.
ಈ ಪಂದ್ಯಾವಳಿಯಲ್ಲಿ ವಿರಾಜಪೇಟೆ ತಾಲೂಕನ್ನು ಪ್ರತಿನಿಧಿಸಿದ ಸರ್ವದೈವತ ವಿದ್ಯಾಸಂಸ್ಥೆಯ ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡಗಳು ಪ್ರಥಮ ಸ್ಥಾನ ಪಡೆದುಕೊಂಡಿವೆ. ಅದೇ ರೀತಿ, ಪ್ರೌಢಶಾಲಾ ವಿಭಾಗದ ಬಾಲಕಿಯರ ತಂಡವೂ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ.
ಈ ಮೂಲಕ ಸಂಸ್ಥೆಯ ಮೂರೂ ತಂಡಗಳು ವಿಭಾಗ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದು, ವಿದ್ಯಾಸಂಸ್ಥೆಗೆ ಹೆಮ್ಮೆ ತಂದಿವೆ.
ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರಮೋದ್ ಗೌಡ ಹಾಗೂ ಯೋಗೇಶ್ ತರಬೇತಿ ನೀಡಿದ್ದರು. ವಿದ್ಯಾರ್ಥಿಗಳ ಈ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು ಹಾಗೂ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಸಂತಸ ವ್ಯಕ್ತಪಡಿಸಿ ಅಭಿನಂದಿಸಿದ್ದಾರೆ.
















