Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಲು ಒತ್ತಾಯ : ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಕೊಡಗು ಅಹಿಂದ ಬಳಗ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಲು ಒತ್ತಾಯ : ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಕೊಡಗು ಅಹಿಂದ ಬಳಗ

ನವೆಂಬರ್ 17, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.17 : ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಸಮುದಾಯಗಳ ಕೊಡುಗೆ ಮಹತ್ವದ್ದಾಗಿದ್ದು, ಈ ಸಮುದಾಯಗಳಿಗೆ ನಿಗಮ ಮಂಡಳಿ ಅಧ್ಯಕ್ಷರು, ನಿರ್ದೇಶಕರ ಸ್ಥಾನ ಸೇರಿದಂತೆ ಸರ್ಕಾರದ ನಾಮನಿರ್ದೇಶನ ಮತ್ತು ಪಕ್ಷದ ಹುದ್ದೆಗಳಲ್ಲಿ ಸೂಕ್ತ ಪ್ರಾತಿನಿಧ್ಯ ನೀಡಬೇಕೆಂದು ಕೊಡಗು ಅಹಿಂದ ಬಳಗ ಒತ್ತಾಯಿಸಿದೆ. ಈ ಸಂಬಂಧ ಕೊಡಗು ಅಹಿಂದ ಬಳಗದ ಜಿಲ್ಲಾಧ್ಯಕ್ಷ ನಾಪಂಡ ಮುತ್ತಪ್ಪ ಅವರ ನೇತೃತ್ವದ ನಿಯೋಗ ಕುಶಾಲನಗರದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿತು. ಕೊಡಗು ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರು ಕಾಂಗ್ರೆಸ್ ಪಕ್ಷದ ಬಹುಸಂಖ್ಯಾತ ಮತ್ತು ಮೂಲ ಮತದಾರರಾಗಿದ್ದರೂ, ಪಕ್ಷದ ಹುದ್ದೆಗಳು ಹಾಗೂ ಸರ್ಕಾರದ ನಾಮನಿರ್ದೇಶನಗಳನ್ನು ನೀಡುವ ಸಂದರ್ಭದಲ್ಲಿ ಈ ವರ್ಗಗಳನ್ನು ಪರಿಗಣಿಸುತ್ತಿಲ್ಲ. ಇದರಿಂದಾಗಿ ಈ ಸಮುದಾಯಗಳು ಕಾಂಗ್ರೆಸ್ ಪಕ್ಷದಲ್ಲಿ ಕಡೆಗಣಿಸಲ್ಪಟ್ಟಿವೆ ಎಂದು ಮನವಿಯಲ್ಲಿ ಅಸಮಾಧಾನ ವ್ಯಕ್ತಪಡಿಸಲಾಗಿದೆ. ರಾಜ್ಯ ಸರ್ಕಾರದ ಉಳಿದ ಅವಧಿಯಲ್ಲಿ ಸೂಕ್ತ ಸ್ಥಾನಮಾನಗಳನ್ನು ನೀಡುವಂತೆ ಅಹಿಂದ ಬಳಗ ಮನವಿ ಮಾಡಿದೆ. ಕೊಡಗು ಜಿಲ್ಲೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ತಲಾ ಒಬ್ಬರಂತೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಹಾಗೂ ಮಹಿಳೆಯರಿಗೆ ತಲಾ ಒಬ್ಬರಂತೆ ನಿಗಮ ಮಂಡಳಿಯ ನಿರ್ದೇಶಕರ ಸ್ಥಾನ ಕಲ್ಪಿಸಬೇಕು. ಕೊಡಗು ಜಿಲ್ಲೆಯ ಐದು ಅನುಷ್ಠಾನ ಸಮಿತಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳೆಯರಿಗೆ ತಲಾ ಒಬ್ಬರಂತೆ ಅಧ್ಯಕ್ಷ ಸ್ಥಾನ ನೀಡಬೇಕು. ಕೊಡಗು ಜಿಲ್ಲೆಯ ಆರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಗಳ ಪೈಕಿ ಒಂದು ಸ್ಥಾನವನ್ನು ಪರಿಶಿಷ್ಟ ಜಾತಿ ಸಮುದಾಯಕ್ಕೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಪ್ರಾತಿನಿಧ್ಯದ ದೃಷ್ಟಿಯಿಂದ ಅಹಿಂದ ಸಮುದಾಯಗಳಿಗೆ ಸೂಕ್ತ ಸ್ಥಾನಮಾನ ಕಲ್ಪಿಸುವ ಮೂಲಕ ಪಕ್ಷದ ಸಂಘಟನೆಗೆ ಹೆಚ್ಚಿನ ಬಲ ನೀಡಬೇಕು. ಈ ನಿಟ್ಟಿನಲ್ಲಿ ಅಹಿಂದ ಬಳಗದ ಮನವಿಯನ್ನು ಪುರಸ್ಕರಿಸುವಂತೆ ನಾಪಂಡ ಮುತ್ತಪ್ಪ ಕೋರಿದರು. ಮನವಿ ಸಲ್ಲಿಸುವ ಸಂದರ್ಭ ಕೊಡಗು ಅಹಿಂದ ಬಳಗದ ಪ್ರಧಾನ ಕಾರ್ಯದರ್ಶಿ ಟಿ.ಈ.ಸುರೇಶ್, ಉಪಾಧ್ಯಕ್ಷ ಅರುಣ್ ರಾವ್, ಸಂಘಟನಾ ಕಾರ್ಯದರ್ಶಿ ರವಿ ಅಜ್ಜಳ್ಳಿ, ಸದಸ್ಯರಾದ ರಜಾಕ್ ಕುಶಾಲನಗರ ಹಾಗೂ ಶಾಹಿದ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಡಗು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾಗಿ ಹೊಸೂರು ಜೆ.ಸತೀಶ್ ಕುಮಾರ್ ಅವಿರೋಧ ಆಯ್ಕೆ

ನವೆಂಬರ್ 17, 2026

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಮಕ್ಕಳ ಭವಿಷ್ಯಕ್ಕೆ ಶಿಕ್ಷಣವೇ ಭದ್ರ ಬುನಾದಿ: ಶುಭ; ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಇಲಾಖೆಗಳು ಹಾಗೂ ಸಾರ್ವಜನಿಕರ ಸಹಕಾರ ಅಗತ್ಯ

ನವೆಂಬರ್ 17, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.17: ಮಕ್ಕಳಿಗೆ ಬಾಲ್ಯವನ್ನು ಮುಕ್ತವಾಗಿ ಅನುಭವಿಸಲು ಅವಕಾಶ ಕಲ್ಪಿಸುವುದರ ಜೊತೆಗೆ, ಅವರನ್ನು ದುಡಿಮೆಗೆ ದೂಡದೆ ಶಿಕ್ಷಣ…

ಜಯಲಕ್ಷ್ಮಿ ಕೆ. ಅವರ ‘ನಡೆದಷ್ಟೂ ದಾರಿ’ ಕೃತಿಗೆ ರಾಷ್ಟ್ರಕೂಟ ಸಾಹಿತ್ಯ ಶ್ರೀ ಪ್ರಶಸ್ತಿ

ನವೆಂಬರ್ 17, 2026

ಎಸ್‌ಸಿ, ಎಸ್‌ಟಿ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡಲು ಒತ್ತಾಯ : ಕಾಂಗ್ರೆಸ್ ಜಿಲ್ಲಾಧ್ಯಕ್ಷರಿಗೆ ಮನವಿ ಸಲ್ಲಿಸಿದ ಕೊಡಗು ಅಹಿಂದ ಬಳಗ

ನವೆಂಬರ್ 17, 2026

ಸೋಮವಾರಪೇಟೆಯಲ್ಲಿ 12 ಮಂದಿಗೆ ಕಚ್ಚಿದ್ದ ಬೀದಿನಾಯಿ ಸೆರೆ; ಸಾರ್ವಜನಿಕರ ಸಹಕಾರದೊಂದಿಗೆ ಕಾರ್ಯಾಚರಣೆ – ಜನರ ಆತಂಕಕ್ಕೆ ತೆರೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಚಾಲನೆ; ‘ಶುದ್ಧ ಕೊಡಗು – ಹಸಿರು ಕೊಡಗು’ ಪರಿಕಲ್ಪನೆ ಪ್ರತಿಯೊಬ್ಬರ ಮನದಲ್ಲಿರಲಿ: ಶಾಸಕ ಪೊನ್ನಣ್ಣ

ನವೆಂಬರ್ 17, 2026

ಸಿದ್ದಾಪುರದಲ್ಲಿ ₹24.52 ಕೋಟಿ ವೆಚ್ಚದ 66/11 ಕೆ.ವಿ ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಭೂಮಿಪೂಜೆ; ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಶಾಸಕ ಎ.ಎಸ್. ಪೊನ್ನಣ್ಣ ಚಾಲನೆ

ನವೆಂಬರ್ 17, 2026

ಸಿದ್ದಾಪುರದಲ್ಲಿ ನೂತನ ಆಟೋ ತಂಗುದಾಣ ನಿರ್ಮಾಣಕ್ಕೆ ಭೂಮಿಪೂಜೆ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರ ಅನುದಾನದಲ್ಲಿ ಕಾಮಗಾರಿಗೆ ಚಾಲನೆ

ನವೆಂಬರ್ 17, 2026

ಥ್ರೋಬಾಲ್ ಪಂದ್ಯಾಟದಲ್ಲಿ ಸರ್ವದೈವತ ವಿದ್ಯಾಸಂಸ್ಥೆಯ ಸಾಧನೆ: ಮೂರು ತಂಡಗಳು ವಿಭಾಗ ಮಟ್ಟಕ್ಕೆ ಆಯ್ಕೆ

ನವೆಂಬರ್ 17, 2026

ಸಿದ್ದಾಪುರ–ಪಾಲಿಬೆಟ್ಟ ರಸ್ತೆ ಅಭಿವೃದ್ಧಿಗೆ ₹2.25 ಕೋಟಿ ಅನುದಾನ; ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರಿಂದ ಭೂಮಿಪೂಜೆ

ನವೆಂಬರ್ 17, 2026

ಚಂದ್ರವನ ಕಲ್ಯಾಣಿ ಅಭಿವೃದ್ಧಿಗೆ ₹4.73 ಕೋಟಿ ಅನುದಾನ; ಅಮೃತ್ 2.0 ಯೋಜನೆಯಡಿ ಸಮಗ್ರ ಅಭಿವೃದ್ಧಿ ಮತ್ತು ಪುನಶ್ಚೇತನ – ಸಂಸದ ಯದುವೀರ್ ಒಡೆಯರ್

ನವೆಂಬರ್ 17, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.