Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ನ.20ರಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವ ಶಿಕ್ಷಕ ಪ್ರಶಸ್ತಿ ಪ್ರದಾನ; ವಿವಿಧ ಶಾಲಾ-ಕಾಲೇಜುಗಳ 45ಕ್ಕೂ ಹೆಚ್ಚು ಶಿಕ್ಷಕರಿಗೆ ಪುರಸ್ಕಾರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನ.20ರಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವ ಶಿಕ್ಷಕ ಪ್ರಶಸ್ತಿ ಪ್ರದಾನ; ವಿವಿಧ ಶಾಲಾ-ಕಾಲೇಜುಗಳ 45ಕ್ಕೂ ಹೆಚ್ಚು ಶಿಕ್ಷಕರಿಗೆ ಪುರಸ್ಕಾರ

ನವೆಂಬರ್ 18, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.18: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 2026ನೇ ಸಾಲಿನ ಕನ್ನಡ ರಾಜ್ಯೋತ್ಸವ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.20ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿಯ ಗಾಂಧಿ ಭವನದಲ್ಲಿ ಆಯೋಜಿಸಲಾಗಿದೆ.

ಕೊಡಗು ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತ್ಯುತ್ತಮ ಶಿಕ್ಷಕರನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ತಿಳಿಸಿದ್ದಾರೆ.

ಮಡಿಕೇರಿಯ ಪತ್ರಿಕಾಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಕರ ಸೇವೆ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿರುವ ಕೊಡುಗೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದರು.

ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಆಶಯ ನುಡಿಗಳನ್ನಾಡಲಿದ್ದಾರೆ. ಹಿರಿಯ ಸಾಹಿತಿ ಹಾಗೂ ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರು ‘ಗುರುತ್ವದ ಹಿರಿಮೆ’ ಕುರಿತು ಉಪನ್ಯಾಸ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಯೋಗೇಶ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್. ಚೇತನ್, ಕೊಡಗು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಎಸ್. ಪ್ರಸನ್ನ, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಜಿ. ಕುಮಾರ್ ಹಾಗೂ ಜಿಲ್ಲಾ ಪದವಿ ಪೂರ್ವ ಉಪನ್ಯಾಸಕರ ಸಂಘದ ಅಧ್ಯಕ್ಷ ನಾಗಪ್ಪ ಪಾಲ್ಗೊಳ್ಳಲಿದ್ದಾರೆ.

ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರು

ಹಿರಿಯ ಪ್ರಾಥಮಿಕ ಶಾಲಾ ವಿಭಾಗ:

ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳಿಂದ ವಸಂತಿ, ಅಂತೋಣಿ ರಾಜೇಂದ್ರ ಪ್ರಸಾದ್, ರೋಜಿ ವಿನ್ನಿ ಡೇಸ, ಶಕುಂತಲಾ, ಸುಮಾ ಚಿತ್ರ ಬಾನು ಹಾಗೂ ತಂಗಮ್ಮ ಪಿ.ಡಿ. ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಮಡಿಕೇರಿ ತಾಲೂಕಿನಿಂದ ಚಂದ್ರು ಎಸ್.ಜೆ., ಸಿಸ್ಟರ್ ಮೇರಿ ಸಿಸಿಲ್ಲಾ ಹಾಗೂ ಜಾನ್ಸಿ ಟಿ. ಕ್ರೆಸಾ ಆಯ್ಕೆಯಾಗಿದ್ದಾರೆ.

ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳಿಂದ ಮುಜಾಮಿಲ್ ಅಕ್ತರ್, ಪ್ರಿಯಾ ಬಿ.ವಿ., ರಾಣಿ ಎಸ್., ಬಿ.ವಿ. ರಾಣಿ, ರೀಟಾ ಪಿ.ಜೆ. ಹಾಗೂ ರೇಖಾ ಸಿ. ಪ್ರಶಸ್ತಿ ಪಡೆಯಲಿದ್ದಾರೆ.

ಪ್ರೌಢಶಾಲಾ ವಿಭಾಗ:

ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳಿಂದ ಚೊಕೀರ ಅನಿತಾ, ಲೋಕೇಶ್ ಎಚ್.ಡಿ., ಮುತ್ತಣ್ಣ ಎಂ.ಯು., ಅಯ್ಯಪ್ಪ ಪಿ.ಆರ್., ಪಡಿಞರಂಡ ಪ್ರಭು ಕುಮಾರ್ ಹಾಗೂ ಸಂಗನ ಗೌಡ ಪಾಟೀಲ್ ಆಯ್ಕೆಯಾಗಿದ್ದಾರೆ.

ಮಡಿಕೇರಿ ತಾಲೂಕಿನಿಂದ ಭಾರತಿ, ಪರಮೇಶ್ ಎಸ್.ಪಿ. ಹಾಗೂ ಕೇಟೋಳಿರ ರತ್ನ ಚರ್ಮಣ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳಿಂದ ತೇಜಾಕ್ಷಿ ಎ.ಬಿ., ಸಂದೇಶ್ ಕೆ.ಎಸ್., ಕಾಂಚನ ಕೆ.ಎಸ್., ಲತಾ, ಶೇಖರ್ ಹೆಚ್.ಆರ್. ಹಾಗೂ ಪುಷ್ಪಾ ಎನ್. ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಪದವಿ ಪೂರ್ವ ಕಾಲೇಜು ವಿಭಾಗ:

ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳಿಂದ ಶೈನ ಕೆ.ಕೆ., ರೆ.ಫಾ. ಮದಲೈ ಮುತ್ತು, ಎಂ.ಕೆ. ಪದ್ಮ, ಲೋಕೇಶ್ ಪಿ.ಎ., ಕೆ.ಸಿ. ಚಂದ್ರಶೇಖರ್ ಹಾಗೂ ಎಸ್. ರಘುನಾಥ್ ನಾಯಕ್ ಆಯ್ಕೆಯಾಗಿದ್ದಾರೆ.

ಮಡಿಕೇರಿ ತಾಲೂಕಿನಿಂದ ಪಲ್ಲವಿ ಕೆ.ಎನ್., ವಾಣಿ ಎನ್.ಎಸ್. ಹಾಗೂ ಸಂಧ್ಯಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳಿಂದ ಚಂದ್ರಶೇಖರ ಕೆ.ಎಂ., ಸೋಮಶೇಖರಪ್ಪ, ಸರ್ಪರಾಜ್ ಅಹಮ್ಮದ್, ರವೀಶ್, ವಿಜಯಕುಮಾರ್ ಹಾಗೂ ಮಂಜುನಾಥ ಸಿ. ಪ್ರಶಸ್ತಿ ಪಡೆಯಲಿದ್ದಾರೆ.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಹಾಗೂ ಮಡಿಕೇರಿ ತಾಲೂಕು ಅಧ್ಯಕ್ಷೆ ತೆಕ್ಕಡೆ ತುಳಸಿ ಮೋಹನ್ ಅವರು ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷಕರ ವಿವರ ನೀಡಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕಾರ್ಯದರ್ಶಿ ಗುಡ್ಡೆರ ಲಕ್ಷ್ಮಣ ಸೋಮಣ್ಣ ಹಾಗೂ ಜಿಲ್ಲಾ ಸದಸ್ಯ ಪ್ರೇಮ್ ಕುಮಾರ್ ಹೆಚ್.ಎಸ್. ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್…

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026

ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ‘ಬೇಡ ಬ್ರೋ’ ಅಭಿಯಾನ ಮತ್ತು ರಸ್ತೆ ಸುರಕ್ಷತಾ ಜಾಗೃತಿ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.