Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸೋಮವಾರಪೇಟೆ ರೋಟರಿ ಕ್ಲಬ್‌ನಿಂದ ಸಮಾಜಮುಖಿ ಸೇವಾ ಕಾರ್ಯಗಳಿಗೆ ಮೆಚ್ಚುಗೆ: ಜಿಲ್ಲಾ ರಾಜ್ಯಪಾಲ ಸತೀಶ್ ಬೋಳಾರ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ರೋಟರಿ ಕ್ಲಬ್‌ನಿಂದ ಸಮಾಜಮುಖಿ ಸೇವಾ ಕಾರ್ಯಗಳಿಗೆ ಮೆಚ್ಚುಗೆ: ಜಿಲ್ಲಾ ರಾಜ್ಯಪಾಲ ಸತೀಶ್ ಬೋಳಾರ್

ನವೆಂಬರ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸೋಮವಾರಪೇಟೆ, NEWS DESK ನ.19: ರೋಟರಿ ಸಂಸ್ಥೆಯು ಸಮಾಜಮುಖಿ ಕಾರ್ಯಚಟುವಟಿಕೆಗಳ ಮೂಲಕ ಜನರ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದು, ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದೆ ಎಂದು ರೋಟರಿ ಜಿಲ್ಲಾ ರಾಜ್ಯಪಾಲ ಸತೀಶ್ ಬೋಳಾರ್ ಹೇಳಿದರು.

ಸೋಮವಾರಪೇಟೆ ರೋಟರಿ ಕ್ಲಬ್‌ಗೆ ಭೇಟಿ ನೀಡಿ, ಕ್ಲಬ್ ವತಿಯಿಂದ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆಗಳು ಹಾಗೂ ಸೇವಾ ಕಾರ್ಯಗಳ ಕುರಿತು ಮಾಹಿತಿ ಪಡೆದುಕೊಂಡ ಅವರು, ಮಂಗಳವಾರ ಜಾನಕಿ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ರೋಟರಿ ಸಂಸ್ಥೆಯು ಕೇವಲ ಒಂದು ಸಂಘಟನೆಯಾಗಿ ಉಳಿಯದೆ, ಸಮಾಜದ ವಿವಿಧ ವರ್ಗಗಳ ಜನರ ಬದುಕಿನಲ್ಲಿ ಬದಲಾವಣೆ ತರುವ ಸೇವಾ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತಿದೆ. ಶಿಕ್ಷಣ, ಆರೋಗ್ಯ, ಮಹಿಳಾ ಸಬಲೀಕರಣ, ಸಾಮಾಜಿಕ ಅಭಿವೃದ್ಧಿ ಹಾಗೂ ಆರ್ಥಿಕ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವ ಮೂಲಕ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸೋಮವಾರಪೇಟೆ ರೋಟರಿ ಕ್ಲಬ್ ಕೂಡ ಈ ನಿಟ್ಟಿನಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.

ರೋಟರಿ ಸಂಸ್ಥೆಯ ಸೇವಾ ಚಟುವಟಿಕೆಗಳು ಸ್ಥಳೀಯ ಮಟ್ಟಕ್ಕೆ ಸೀಮಿತವಾಗದೆ ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ಗುರುತಿಸಿಕೊಂಡಿವೆ. ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಗತ್ಯವಿರುವವರಿಗೆ ನೆರವು ನೀಡುವುದು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಕೈಜೋಡಿಸುವುದು ಹಾಗೂ ಸಮಾಜದಲ್ಲಿ ಹಿಂದುಳಿದವರಿಗೆ ಅವಕಾಶ ಕಲ್ಪಿಸುವುದು ರೋಟರಿಯ ಪ್ರಮುಖ ಉದ್ದೇಶವಾಗಿದೆ. ಪ್ರತಿಯೊಬ್ಬ ಸದಸ್ಯರೂ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದಾಗ ಸಂಘಟನೆಯ ಉದ್ದೇಶ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

ಸೋಮವಾರಪೇಟೆ ವ್ಯಾಪ್ತಿಯಲ್ಲಿ ರೋಟರಿ ವತಿಯಿಂದ ಸ್ಕ್ಯಾನಿಂಗ್ ಸೆಂಟರ್ ಸ್ಥಾಪಿಸುವ ಕುರಿತು ಚರ್ಚೆ ನಡೆಯುತ್ತಿದ್ದು, ಇದು ಕಾರ್ಯರೂಪಕ್ಕೆ ಬಂದರೆ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಲಿದೆ ಎಂದರು.

ರೋಟರಿ ಅಧ್ಯಕ್ಷ ಬಿ.ಎಸ್. ಸುಂದರ್ ಮಾತನಾಡಿ, ಕ್ಲಬ್ ವತಿಯಿಂದ ಹಲವು ಜನಪರ ಯೋಜನೆಗಳನ್ನು ಕೈಗೊಳ್ಳಲಾಗಿದೆ. ಪ್ರವಾಸಿ ತಾಣವಾದ ಮಲ್ಲಳ್ಳಿ ಜಲಪಾತದಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ಹೈಟೆಕ್ ಶೌಚಗೃಹ ನಿರ್ಮಿಸುವ ಕುರಿತು ಶಾಸಕರೊಂದಿಗೆ ಚರ್ಚಿಸಲಾಗಿದೆ. ಬೇಳೂರು ಸರ್ಕಾರಿ ಶಾಲೆಗೆ ಸಿಸಿ ಕ್ಯಾಮೆರಾಗಳನ್ನು ಒದಗಿಸಲಾಗಿದೆ. ಯಡೂರು ಮತ್ತು ಬೇಳೂರು ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಿಗೆ ಪ್ರೋತ್ಸಾಹಧನ ನೀಡಲಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಸಂಕಷ್ಟದ ಸಮಯದಲ್ಲಿ ಅವರೊಂದಿಗೆ ನಿಲ್ಲುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಹಾಯಕ ರಾಜ್ಯಪಾಲ ಎಚ್.ಎಸ್. ವಸಂತ್ ಕುಮಾರ್, ವಲಯ ಸೇನಾನಿ ಎ.ಎಸ್. ಮಲ್ಲೇಶ್, ರೋಟರಿ ಕಾರ್ಯದರ್ಶಿ ಪಿ.ಕೆ. ರವಿ ಹಾಗೂ ಮುಂದಿನ ಸಾಲಿನ ಅಧ್ಯಕ್ಷ ಪ್ರದೀಪ್ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಹತ್ತನೇ ತರಗತಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗೆ ಪ್ರೋತ್ಸಾಹಧನ ವಿತರಿಸಲಾಯಿತು.

oplus_0

Follow us Follow us
Share. WhatsApp Facebook Twitter Email Telegram Copy Link

Related Posts

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್…

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026

ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ‘ಬೇಡ ಬ್ರೋ’ ಅಭಿಯಾನ ಮತ್ತು ರಸ್ತೆ ಸುರಕ್ಷತಾ ಜಾಗೃತಿ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.