ಸುಂಟಿಕೊಪ್ಪ, NEWS DESK ನ.19: ಸುಂಟಿಕೊಪ್ಪದ ಶ್ರೀಪುರಂ ಅಯ್ಯಪ್ಪ ಕ್ಷೇತ್ರದ ವಾರ್ಷಿಕ ಮಹಾಸಭೆಯು ನ.21ರಂದು (ಶನಿವಾರ) ಸಂಜೆ 7 ಗಂಟೆಗೆ ಕ್ಷೇತ್ರದ ದೇವಾಲಯದ ಆವರಣದಲ್ಲಿ ನಡೆಯಲಿದೆ.
ಕ್ಷೇತ್ರದ ಅಧ್ಯಕ್ಷರಾದ ಬಿ.ಎಂ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ಸಭೆ ಜರುಗಲಿದೆ.
ಈ ಮಹಾಸಭೆಯಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿಯ ಪ್ರಧಾನ ಕಾರ್ಯದರ್ಶಿ ಚಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















