Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.19: ಧಾರವಾಡದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ನವೆಂಬರ್ 14 ಮತ್ತು 15ರಂದು ನಡೆದ 45ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ 2026ರಲ್ಲಿ ಕೊಡಗು ಜಿಲ್ಲೆಯ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡುವ ಮೂಲಕ ಜಿಲ್ಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಜಿಲ್ಲಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ಧಾರವಾಡ ವತಿಯಿಂದ ಆಯೋಜಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯಿಂದ ಒಟ್ಟು 24 ಕ್ರೀಡಾಪಟುಗಳು ಭಾಗವಹಿಸಿದ್ದರು. ವಿವಿಧ ವಿಭಾಗಗಳ ಸ್ಪರ್ಧೆಗಳಲ್ಲಿ ಚಿನ್ನ, ಬೆಳ್ಳಿ ಹಾಗೂ ಕಂಚಿನ ಪದಕಗಳನ್ನು ಗೆದ್ದು ಸಾಧನೆ ಮೆರೆದಿದ್ದಾರೆ.

ಪುರುಷರ ವಿಭಾಗದಲ್ಲಿ ಸಾಧನೆ

ಪುರುಷರ ವಿಭಾಗದಲ್ಲಿ ಬಲ್ಯಮೀದೆರಿರ ಪ್ರಕಾಶ್ (5 ಕಿ.ಮೀ. ನಡಿಗೆ), ಹೊಸೋಕ್ಲು ಚಿನ್ನಪ್ಪ (1500, 5000 ಹಾಗೂ 10,000 ಮೀ.), ಪಟ್ರಪಂಡ ಚಂಗಪ್ಪ (400 ಮೀ. ಹರ್ಡಲ್ಸ್), ಟಿ.ಹೆಚ್. ಗಣೇಶ್ ತೊರೆನೂರು (1500, 5000 ಹಾಗೂ 10,000 ಮೀ.), ಮೂಡಿಗೆರೆ ಪೊನ್ನಪ್ಪ (ಶಾಟ್‌ಪುಟ್), ಕ್ಯಾಚಮಾಡ ವಿಶು ತಮ್ಮಯ್ಯ (1500 ಮೀ.), ಅಮೆ ಜನಾರ್ದನ (800 ಮೀ.) ಚಿನ್ನದ ಪದಕಗಳನ್ನು ಗೆದ್ದಿದ್ದಾರೆ.

ನಂದಿನೇರವಂಡ ಟೀಪು ಬಿದ್ದಪ್ಪ, ಸೂದನ ಡಾಲಿ, ಅಮೆ ಚಂದ್ರಪ್ರ, ಸಂತೋಷ್ ಬಿ.ಆರ್., ಕಾವೇರಿ ಮನೆ ಭರತ್ ಹಾಗೂ ಪಟ್ರಪಂಡ ಚಂಗಪ್ಪ ಸೇರಿದಂತೆ ಕ್ರೀಡಾಪಟುಗಳು ವಿವಿಧ ಸ್ಪರ್ಧೆಗಳಲ್ಲಿ ಬೆಳ್ಳಿ ಪದಕಗಳನ್ನು ಗಳಿಸಿದ್ದಾರೆ. ಕಟ್ಟೆಮನೆ ಹನಿ ಸೋಮಯ್ಯ ಹಾಗೂ ಕ್ಯಾಚಮಾಡ ವಿಶು ತಮ್ಮಯ್ಯ ಕಂಚಿನ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಮಹಿಳೆಯರ ವಿಭಾಗದಲ್ಲಿ ಸಾಧನೆ

ಮಹಿಳೆಯರ ವಿಭಾಗದಲ್ಲಿ ಮುಲ್ಲೇರ ಪೊನ್ನಮ್ಮ ಪೂವಣ್ಣ ಅವರು ಶಾಟ್‌ಪುಟ್, ಡಿಸ್ಕಸ್ ಥ್ರೋ ಹಾಗೂ ಜಾವೆಲಿನ್ ಥ್ರೋನಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದಾರೆ. ಚೇಮಿರ ಸೀತಮ್ಮ ಅವರು ಶಾಟ್‌ಪುಟ್, ಡಿಸ್ಕಸ್ ಥ್ರೋ ಹಾಗೂ ಹ್ಯಾಮರ್ ಥ್ರೋನಲ್ಲಿ ಮೂರು ಚಿನ್ನದ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಅರಮಾಣಮಾಡ ಮಮತಾ ಮನು ಅವರು ಜಾವೆಲಿನ್ ಥ್ರೋನಲ್ಲಿ ಚಿನ್ನ ಹಾಗೂ ಶಾಟ್‌ಪುಟ್ ಮತ್ತು ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕಗಳನ್ನು ಗೆದ್ದಿದ್ದಾರೆ. ಪ್ರಮೀಳಾ ಶೆಟ್ಟಿ ಅವರು 200 ಮೀ. ಓಟ ಹಾಗೂ ಉದ್ದ ಜಿಗಿತದಲ್ಲಿ ಬೆಳ್ಳಿ ಪದಕ ಪಡೆದರೆ, ಮುರೇರ ಶಾಂತಿ ಅವರು ಜಾವೆಲಿನ್ ಥ್ರೋನಲ್ಲಿ ಕಂಚಿನ ಪದಕ ಗಳಿಸಿದ್ದಾರೆ.

ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ 17 ಕ್ರೀಡಾಪಟುಗಳ ಆಯ್ಕೆ

ರಾಜ್ಯಮಟ್ಟದ ಚಾಂಪಿಯನ್‌ಶಿಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಕೊಡಗಿನ 17 ಕ್ರೀಡಾಪಟುಗಳು ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾಗಿದ್ದಾರೆ. ರಾಷ್ಟ್ರಮಟ್ಟದ ಸ್ಪರ್ಧೆಯು 2027ರ ಜನವರಿ ತಿಂಗಳಲ್ಲಿ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆಯಲಿದೆ.

ಕೊಡಗು ಜಿಲ್ಲೆಯ ಕ್ರೀಡಾಪಟುಗಳು ರಾಜ್ಯಮಟ್ಟದಲ್ಲಿ ಸಾಧಿಸಿರುವ ಈ ಅಭೂತಪೂರ್ವ ಯಶಸ್ಸಿಗೆ ಕ್ರೀಡಾಭಿಮಾನಿಗಳು ಹಾಗೂ ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ಮತ್ತು ಅಭಿನಂದನೆಗಳು ವ್ಯಕ್ತವಾಗಿವೆ.

Follow us Follow us
Share. WhatsApp Facebook Twitter Email Telegram Copy Link

Related Posts

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್…

ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026

ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ‘ಬೇಡ ಬ್ರೋ’ ಅಭಿಯಾನ ಮತ್ತು ರಸ್ತೆ ಸುರಕ್ಷತಾ ಜಾಗೃತಿ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.