Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.19: ಜಗತ್ತು ಕಂಡ ಅತ್ಯುತ್ತಮ ಆಡಳಿತಗಾರ್ತಿಯರಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರು ಪ್ರಮುಖರಾಗಿದ್ದಾರೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಬಣ್ಣಿಸಿದರು.

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಇಂದಿರಾಗಾಂಧಿ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಇಂದಿರಾಗಾಂಧಿಯವರ ಸುಮಾರು 15 ವರ್ಷಗಳ ಆಡಳಿತಾವಧಿಯಲ್ಲಿ ಇತರ ದೇಶಗಳ ಮೇಲೆ ಅವಲಂಬಿತವಾಗಿದ್ದ ಭಾರತ ಸ್ವಾವಲಂಬಿ ರಾಷ್ಟ್ರವಾಗಿ ರೂಪುಗೊಂಡಿತು ಎಂದು ಹೇಳಿದರು.

1971ರಲ್ಲಿ ಪಾಕಿಸ್ತಾನದೊಂದಿಗೆ ನಡೆದ ಯುದ್ಧದಲ್ಲಿ ಕೇವಲ 13 ದಿನಗಳಲ್ಲಿ ಪಾಕಿಸ್ತಾನದ ಸೇನೆಯನ್ನು ಶರಣಾಗುವಂತೆ ಮಾಡುವ ಮೂಲಕ ಭಾರತವನ್ನು ಜಗತ್ತಿನ ಬಲಿಷ್ಠ ರಾಷ್ಟ್ರವಾಗಿ ಗುರುತಿಸುವಂತೆ ಮಾಡಿದ ಕೀರ್ತಿ ಇಂದಿರಾಗಾಂಧಿಯವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೇಶ್ ಯಲ್ಲಪ್ಪ ಮಾತನಾಡಿ, ಇಂದಿರಾಗಾಂಧಿಯವರು ಪ್ರಧಾನಮಂತ್ರಿಯಾಗಿ ದೇಶಕ್ಕೆ ನೀಡಿದ ಕೊಡುಗೆಗಳು ಅಪಾರ. ಭಾರತೀಯರು ನೆಮ್ಮದಿಯ ಜೀವನ ನಡೆಸಲು ಅವರ ಆಡಳಿತಾವಧಿಯಲ್ಲಿ ಜಾರಿಗೊಂಡ ಅಭಿವೃದ್ಧಿಪರ ಯೋಜನೆಗಳು ಮಹತ್ವದ ಕೊಡುಗೆ ನೀಡಿವೆ. ಅವರು ರೂಪಿಸಿದ ಯೋಜನೆಗಳ ಫಲವನ್ನು ಇಂದಿಗೂ ಕಾಣಬಹುದಾಗಿದೆ ಎಂದರು.

ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಶಿ ಮಾತನಾಡಿ, ಧೀಮಂತ ನಾಯಕಿ ಇಂದಿರಾಗಾಂಧಿಯವರು ದೇಶದ ಮಹಿಳೆಯರಿಗೆ ಸದಾ ಪ್ರೇರಣಾಶಕ್ತಿಯಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಗೌರವ ಕಾರ್ಯದರ್ಶಿ ವಿ.ಪಿ. ಸುರೇಶ್, ಸೇವಾದಳ ಜಿಲ್ಲಾಧ್ಯಕ್ಷ ಕಾನೆಹಿತ್ಲು ಮೊಣ್ಣಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಕವನ್ ಕೊತ್ತೋಳಿ, ಮಹಿಳಾ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿ ಫ್ಯಾನ್ಸಿ ಪಾರ್ವತಿ ಹಾಗೂ ಬೊಳ್ಳಿಯಂಡ ಗಣೇಶ್ ಮಾತನಾಡಿದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಸಂತಿ ಬಿ., ಪೌರಕಾರ್ಮಿಕ ಮಹಿಳೆ ಡಿ. ಲಕ್ಷ್ಮಿ ಹಾಗೂ ಆಟೋ ಚಾಲಕಿ ಜಯಮೇರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಪುದಿಯನೆರವನ ರೇವತಿ ಹಾಗೂ ಲೀಲಾ ಶೇಷಮ್ಮ ಸನ್ಮಾನಿತರ ಪರಿಚಯ ಮಾಡಿಕೊಟ್ಟರು.

ಇಂದಿರಾಗಾಂಧಿಯವರ ಜನ್ಮದಿನದ ಅಂಗವಾಗಿ ಮಹಿಳಾ ಕಾಂಗ್ರೆಸ್ ಪದಾಧಿಕಾರಿಗಳು ಕೇಕ್ ಕತ್ತರಿಸಿ ಸಿಹಿ ಹಂಚಿ ಸಂಭ್ರಮಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ನಗರಸಭಾ ಅಧ್ಯಕ್ಷೆ ಜುಲೇಖಾಬಿ, ಮಮ್ತಾಜ್ ಬೇಗಂ, ಯುವ ಕಾಂಗ್ರೆಸ್ ನಗರಾಧ್ಯಕ್ಷ ಅರ್ಜುನ್, ಮೈಕಲ್ ಮಾರ್ಷಲ್, ಹಸೇನ್, ಶೇಖ್ ಅಹಮದ್, ಧನಲಕ್ಷ್ಮಿ, ತಾಜುನ್ನಿಸಾ, ಹರಿಣಾಕ್ಷಿ, ಪುಷ್ಪ, ರೀನಾ, ಅಪ್ರೋಸ್, ಸುನಂದ, ಅನು, ವಿಮಲ, ಪ್ರೇಮಾ ನಿಂಗಪ್ಪ, ನಾಗರತ್ನ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಪ್ರೇಮಾ ಕೃಷ್ಣಪ್ಪ ಪ್ರಾರ್ಥಿಸಿದರು. ಮೂಡಾ ಸದಸ್ಯೆ ಮೀನಾಜ್ ಪ್ರವೀಣ್ ಸ್ವಾಗತಿಸಿದರು. ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಅಧ್ಯಕ್ಷ ದಿನೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪವಿತ್ರಾ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ವಿರಾಜಪೇಟೆ ವಿದ್ಯಾರ್ಥಿಗಳಿಂದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಭರ್ಜರಿ ಸಾಧನೆ: 6ನೇ ಮೈಸೂರು ಕಪ್‌ನಲ್ಲಿ ಹಲವು ಪ್ರಶಸ್ತಿಗಳ ಗರಿ

ನವೆಂಬರ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ NEWS DESK ನ.19: ಮೈಸೂರಿನ ನಜರ್‌ಬಾದ್‌ನ ಚಾಮುಂಡಿ ವಿಹಾರ ಸ್ಟೇಡಿಯಂನ ಒಳಾಂಗಣ ಕ್ರೀಡಾಂಗಣದಲ್ಲಿ ವಿ.ಎನ್. ಯೋಧಾ ಮಾರ್ಷಲ್ ಆರ್ಟ್ಸ್…

ಮಡಿಕೇರಿ ನಗರ ಕಾಂಗ್ರೆಸ್ ಸಮಿತಿ ಮತ್ತು ನಗರ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಇಂದಿರಾಗಾಂಧಿ ಜನ್ಮದಿನಾಚರಣೆ: ಸಾಧಕ ಮಹಿಳೆಯರಿಗೆ ಸನ್ಮಾನ

ನವೆಂಬರ್ 19, 2026

ಚಿಕ್ಕಪೇಟೆಯಿಂದ ಬೋಯಿಕೇರಿವರೆಗಿನ ರಸ್ತೆ ಮರು ಡಾಂಬರೀಕರಣಕ್ಕೆ ಆಗ್ರಹ

ನವೆಂಬರ್ 19, 2026

ಹೊಂಬೆಳಕು ಮಾಸಿಕ ತತ್ವ ಚಿಂತನಾಗೋಷ್ಠಿಯ 250ನೇ ವಿಶೇಷ ಕಾರ್ಯಕ್ರಮಕ್ಕೆ ಸಿದ್ಧತೆ

ನವೆಂಬರ್ 19, 2026

ಕೊಡವ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ವಿಶೇಷ, ವಿಶಿಷ್ಟ ಸ್ಥಾನ: ಮಹೇಶ್ ನಾಚಯ್ಯ; ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯಿಂದ ದುಡಿ, ತಾಳ ಸೇರಿದಂತೆ ಹಲವು ಪರಿಕರಗಳ ವಿತರಣೆ

ನವೆಂಬರ್ 19, 2026

ರಾಷ್ಟ್ರೀಯ ಐಕ್ಯತಾ ದಿನ: ಮಡಿಕೇರಿಯಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ

ನವೆಂಬರ್ 19, 2026

32ನೇ ಕೋಲ್ಕತ್ತಾ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ‘ಕೋಟೆ ಬೆಟ್ಟ’ ಆಯ್ಕೆ; ಕೊಟ್ಟುಕತ್ತಿರ ಪ್ರಕಾಶ್ ಕಾರ್ಯಪ್ಪ–ಯಶೋಧ ಪ್ರಕಾಶ್ ದಂಪತಿಗೆ ಮತ್ತೊಂದು ಹೆಗ್ಗಳಿಕೆ

ನವೆಂಬರ್ 19, 2026

ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್‌ನಲ್ಲಿ ಕೊಡಗಿನ ಕ್ರೀಡಾಪಟುಗಳ ಅಮೋಘ ಸಾಧನೆ; ರಾಷ್ಟ್ರಮಟ್ಟದ ಚಾಂಪಿಯನ್‌ಶಿಪ್‌ಗೆ 17 ಕ್ರೀಡಾಪಟುಗಳ ಆಯ್ಕೆ

ನವೆಂಬರ್ 19, 2026

ಕಾವೇರಿ ಪದವಿ ಪೂರ್ವ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ನವೆಂಬರ್ 19, 2026

ಸುಂಟಿಕೊಪ್ಪದಲ್ಲಿ ವಿದ್ಯಾರ್ಥಿಗಳಿಗೆ ‘ಬೇಡ ಬ್ರೋ’ ಅಭಿಯಾನ ಮತ್ತು ರಸ್ತೆ ಸುರಕ್ಷತಾ ಜಾಗೃತಿ

ನವೆಂಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.