ಮಡಿಕೇರಿ NEWS DESK ನ.20 : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕೊಡಗು ಜಿಲ್ಲಾ ಸರ ಸಂಘ ಚಾಲಕ ಚಕ್ಕೇರ ಮನು ಕಾವೇರಪ್ಪ ಅವರ ನಿಧನಕ್ಕೆ ಸೋಮವಾರಪೇಟೆ ಬಿಜೆಪಿ ಮಂಡಲದ ವಕ್ತಾರ ಬಲ್ಲಾರಂಡ ಕಂಠಿ ಕಾರ್ಯಪ್ಪ ಸಂತಾಪ ಸೂಚಿಸಿದ್ದಾರೆ. ಮನು ಕಾವೇರಪ್ಪ ಅವರ ನಿಧನದಿಂದ ಬಿಜೆಪಿ ಒಬ್ಬ ಹಿರಿಯ ಮಾರ್ಗದರ್ಶಕರನ್ನು ಹಾಗೂ ಹಿಂದೂ ಧರ್ಮಕ್ಕಾಗಿ ಹಗಲಿರುಳು ಶ್ರಮಿಸಿದ ನಾಯಕನನ್ನು ಕಳೆದು ಕೊಂಡಿದೆ. ಇವರ ಆತ್ಮಕ್ಕೆ ದೇವರು ಶಾಂತಿಯನ್ನು ಕರುಣಿಸಲಿ ಹಾಗೂ ಇವರ ಕುಟುಂಬಕ್ಕೆ ದು:ಖವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ತಿಳಿಸಿದ್ದಾರೆ.
















