ಮಡಿಕೇರಿ, NEWS DESK ನ.20: ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ನಡೆದಿದೆ.
ಹೇರೂರು ಹಾಡಿ ನಿವಾಸಿ ವಿನೋದ್ (27) ನೀರುಪಾಲಾದ ದುರ್ದೈವಿ. ಸಂಜೆ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸುಂಟಿಕೊಪ್ಪ ಪೊಲೀಸರು ಪರಿಶೀಲನೆ ನಡೆಸಿದರು. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಮುಳುಗು ತಜ್ಞರು ಶೋಧ ಕಾರ್ಯಾಚರಣೆ ನಡೆಸಿದರೂ ಯುವಕನ ಮೃತದೇಹ ಪತ್ತೆಯಾಗಿಲ್ಲ.
ಕತ್ತಲಾದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಶನಿವಾರವೂ ಕಾರ್ಯಾಚರಣೆ ಮುಂದುವರಿಸಲಾಗುವುದು. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
















