Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ಕಸಾಪದಿಂದ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು : ಎಂ.ಪಿ. ಕೇಶವ ಕಾಮತ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗು ಕಸಾಪದಿಂದ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು : ಎಂ.ಪಿ. ಕೇಶವ ಕಾಮತ್

ನವೆಂಬರ್ 20, 20264 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.20: ಶಿಕ್ಷಕರು ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳಾಗಿದ್ದು, ಅವರ ಸೇವೆ ಮತ್ತು ತ್ಯಾಗವನ್ನು ಗುರುತಿಸಿ ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ. ಕೇಶವ ಕಾಮತ್ ಅಭಿಪ್ರಾಯಪಟ್ಟರು.

ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ವಿಭಾಗಗಳ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಐದು ವರ್ಷಗಳ ಅವಧಿ ನವೆಂಬರ್ 23ರಂದು ಮುಕ್ತಾಯಗೊಳ್ಳಲಿದ್ದು, ಈ ಸಂದರ್ಭದಲ್ಲಿ ಶಿಕ್ಷಕರ ಸೇವೆಯನ್ನು ಸ್ಮರಿಸಿ ಗೌರವಿಸಬೇಕೆಂಬ ಉದ್ದೇಶದಿಂದ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಭಾರತೀಯ ಸಂಸ್ಕೃತಿಯಲ್ಲಿ ಗುರುವಿಗೆ ಅತ್ಯುನ್ನತ ಸ್ಥಾನವಿದೆ. ‘ಗುರು ಬ್ರಹ್ಮ, ಗುರು ವಿಷ್ಣು, ಗುರು ದೇವೋ ಮಹೇಶ್ವರ’ ಎಂಬ ನುಡಿಯಂತೆ ತಂದೆ-ತಾಯಿ ಮಕ್ಕಳಿಗೆ ಜನ್ಮ ನೀಡಿದರೆ, ಶಿಕ್ಷಕರು ಅವರಿಗೆ ಜ್ಞಾನ, ಬುದ್ಧಿ ಮತ್ತು ಸಂಸ್ಕಾರವನ್ನು ನೀಡಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸುತ್ತಾರೆ. ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ, ತಪ್ಪುಗಳನ್ನು ತಿದ್ದಿ ಸಮಾಜದ ಉತ್ತಮ ಪ್ರಜೆಗಳನ್ನಾಗಿ ರೂಪಿಸುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ ಎಂದರು.

ಒಬ್ಬ ಉತ್ತಮ ಶಿಕ್ಷಕ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಿಯಾಗಬಲ್ಲರು. ವಿದ್ಯಾರ್ಥಿಗಳ ಸುಪ್ತ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಅವಕಾಶ ಕಲ್ಪಿಸುವ ಮೂಲಕ ಅವರನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಶಕ್ತಿ ಶಿಕ್ಷಕರಿಗಿದೆ. ಇಂತಹ ಶಿಕ್ಷಕರನ್ನು ಗುರುತಿಸಿ ಗೌರವಿಸುವುದು ಸಮಾಜದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಈ ಹಿಂದೆ 20 ದತ್ತಿ ಕಾರ್ಯಕ್ರಮಗಳಿದ್ದು, ಸಾರ್ವಜನಿಕರ ಸಹಕಾರದಿಂದ ಅವುಗಳ ಸಂಖ್ಯೆಯನ್ನು 45ಕ್ಕೆ ಹೆಚ್ಚಿಸಲಾಗಿದೆ. ಪ್ರಸಕ್ತ ವರ್ಷ 45 ದತ್ತಿ ಕಾರ್ಯಕ್ರಮಗಳ ಪೈಕಿ 40 ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಈ ಕಾರ್ಯಕ್ರಮಗಳ ಮೂಲಕ ವರ್ಷವಿಡೀ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿದೆ. ಶಾಲಾ-ಕಾಲೇಜುಗಳಲ್ಲಿ ಕಾರ್ಯಕ್ರಮ ಆಯೋಜಿಸಲು ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳು ಉತ್ತಮ ಸಹಕಾರ ನೀಡಿದ್ದಾರೆ. ಜಿಲ್ಲೆಯ ಶೇ.90ರಷ್ಟು ಶಿಕ್ಷಕರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿರುವುದು ಸಂತಸದ ವಿಚಾರವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಶಿಕ್ಷಣ ಪವಿತ್ರ ವ್ರತ: ಟಿ.ಪಿ. ರಮೇಶ್

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್ ಮಾತನಾಡಿ, ಶಿಕ್ಷಣ ಎನ್ನುವುದು ಲಾಭದಾಯಕ ಉದ್ಯೋಗವಲ್ಲ, ಅದೊಂದು ಪವಿತ್ರ ವ್ರತವಾಗಿದೆ. ಮಕ್ಕಳಿಗೆ ಕೇವಲ ಜ್ಞಾನ ನೀಡುವುದಷ್ಟೇ ಶಿಕ್ಷಣದ ಉದ್ದೇಶವಾಗಬಾರದು. ಅವರ ಹೃದಯ ಮತ್ತು ಭಾವನೆಗಳನ್ನು ಅರಳಿಸಿ, ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಮಾರ್ಗದರ್ಶನ ನೀಡುವುದು ಶಿಕ್ಷಕರ ಪ್ರಮುಖ ಕರ್ತವ್ಯವಾಗಿದೆ ಎಂದರು.

ಶಿಕ್ಷಕ ವೃತ್ತಿಯು ಸೇವಾ ಮನೋಭಾವ ಮತ್ತು ಬದ್ಧತೆಯನ್ನು ಒಳಗೊಂಡಿದೆ. ಶಿಕ್ಷಣವು ಮಕ್ಕಳ ತಲೆಯಲ್ಲಿ ಜ್ಞಾನದ ರಾಶಿಯನ್ನು ತುಂಬುವುದಕ್ಕೆ ಸೀಮಿತವಾಗದೆ, ಅವರ ಶಾರೀರಿಕ, ಮಾನಸಿಕ, ಆರ್ಥಿಕ, ಸಾಮಾಜಿಕ, ಬೌದ್ಧಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ಪೂರಕವಾಗಿರಬೇಕು. ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ಮೂಡಬೇಕಾದರೆ ಶಿಕ್ಷಕರು ಅದರ ರೂವಾರಿಗಳಾಗಬೇಕು ಎಂಬುದು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆಶಯವಾಗಿತ್ತು ಎಂದು ಸ್ಮರಿಸಿದರು.

ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಶಿಕ್ಷಣದ ಗುಣಮಟ್ಟ ಮತ್ತು ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಮಹತ್ವದ ಕೊಡುಗೆ ನೀಡುತ್ತಿವೆ. ಕೊಡಗು ಜಿಲ್ಲೆಯ ಶಿಕ್ಷಕರು ಶಿಕ್ಷಣ ಕ್ಷೇತ್ರದಲ್ಲಿ ಅಪಾರ ಶ್ರಮ ವಹಿಸುತ್ತಿದ್ದು, ಅವರ ಸೇವೆಯನ್ನು ಗುರುತಿಸಿ 45 ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಕನ್ನಡ ಸಾಹಿತ್ಯ ಮತ್ತು ಶಿಕ್ಷಕರು ಒಂದೇ ರಥದ ಎರಡು ಚಕ್ರಗಳಿದ್ದಂತೆ. ಸಾಹಿತ್ಯವಿಲ್ಲದೆ ಶಿಕ್ಷಕರಿಲ್ಲ, ಶಿಕ್ಷಕರಿಲ್ಲದೆ ಸಾಹಿತ್ಯದ ಬೆಳವಣಿಗೆಯೂ ಸಾಧ್ಯವಿಲ್ಲ. ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮಗಳ ನಡುವಿನ ವ್ಯತ್ಯಾಸಗಳಿದ್ದರೂ ಮಾತೃಭಾಷೆ ಕನ್ನಡಕ್ಕೆ ಸದಾ ಅಗ್ರಸ್ಥಾನ ದೊರೆಯಬೇಕು. ಕರ್ನಾಟಕದಲ್ಲಿ ಕನ್ನಡ ಭಾಷೆ ಮತ್ತು ಸಾಹಿತ್ಯದ ಕಂಪು ಎಲ್ಲೆಡೆ ಪಸರಿಸಬೇಕು ಎಂದು ಆಶಿಸಿದರು.

ಗುರುವಿನ ಜವಾಬ್ದಾರಿ ಮಹತ್ತರವಾದುದು: ಸುಬ್ರಾಯ ಸಂಪಾಜೆ

ಆಕಾಶವಾಣಿಯ ನಿವೃತ್ತ ಉದ್ಘೋಷಕ ಸುಬ್ರಾಯ ಸಂಪಾಜೆ ಅವರು ‘ಗುರುತ್ವದ ಹಿರಿಮೆ’ ವಿಷಯ ಕುರಿತು ಮಾತನಾಡಿ, ಶಿಕ್ಷಣವೆಂದರೆ ಕೇವಲ ಓದಿಗೆ ಸೀಮಿತವಾಗದೆ ನಿರಂತರ ಅಧ್ಯಯನ ಮತ್ತು ಜ್ಞಾನಾರ್ಜನೆಯ ಪ್ರಕ್ರಿಯೆಯಾಗಿದೆ. ಆಳವಾದ ಅಧ್ಯಯನದಿಂದ ಹೆಚ್ಚಿನ ಜ್ಞಾನ ಸಂಪಾದಿಸಲು ಸಾಧ್ಯವಾಗುತ್ತದೆ. ಇಂದಿನ ಆಧುನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಹೋಂ ಟೀಚಿಂಗ್ ಸೇರಿದಂತೆ ಬದಲಾಗುತ್ತಿರುವ ಬೋಧನಾ ವಿಧಾನಗಳ ಬಗ್ಗೆಯೂ ಶಿಕ್ಷಕರು ಅರಿವು ಹೊಂದಿರಬೇಕು ಎಂದರು.

ವಿದ್ಯಾರ್ಥಿಗಳನ್ನು ಅಜ್ಞಾನದ ಹಂತದಿಂದ ಸುಜ್ಞಾನದತ್ತ, ಸುಜ್ಞಾನದಿಂದ ಪ್ರಜ್ಞಾನದತ್ತ ಕೊಂಡೊಯ್ಯುವ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಸಮಾಜದಲ್ಲಿ ಜಾಗೃತ ಶಿಕ್ಷಕರು ಹಾಗೂ ಜಾಗೃತ ವಿದ್ಯಾರ್ಥಿಗಳನ್ನು ರೂಪಿಸುವ ನಿಟ್ಟಿನಲ್ಲಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ತಮ್ಮ ಬಾಲ್ಯ ಹಾಗೂ ಕಾಲೇಜು ದಿನಗಳ ಅನುಭವಗಳನ್ನು ಹಂಚಿಕೊಂಡರು.

ಮಕ್ಕಳಲ್ಲಿ ಭವಿಷ್ಯದ ಗುರಿ ರೂಪಿಸುವ ಕೆಲಸವಾಗಲಿ: ಶ್ರೀಧರ್

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಡಿಕೇರಿ ತಹಶೀಲ್ದಾರ್ ಶ್ರೀಧರ್, ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕದ ಶಿಕ್ಷಣದ ಜೊತೆಗೆ ಭವಿಷ್ಯದ ಉನ್ನತ ಶಿಕ್ಷಣ ಮತ್ತು ಉದ್ಯೋಗಾವಕಾಶಗಳ ಕುರಿತು ಬಾಲ್ಯದಿಂದಲೇ ಅರಿವು ಮೂಡಿಸಬೇಕು. ಪಠ್ಯಕ್ರಮದ ಬೋಧನೆಯೊಂದಿಗೆ ಸಮಾಜದಲ್ಲಿ ಲಭ್ಯವಿರುವ ವಿವಿಧ ಅವಕಾಶಗಳು ಹಾಗೂ ಉನ್ನತ ಹುದ್ದೆಗಳನ್ನು ತಲುಪುವ ಮಾರ್ಗಗಳ ಬಗ್ಗೆಯೂ ತಿಳಿಸಬೇಕು. ಬಾಲ್ಯದಲ್ಲಿಯೇ ಮಕ್ಕಳ ಮನಸ್ಸಿನಲ್ಲಿ ಕನಸು ಮತ್ತು ಗುರಿಗಳನ್ನು ಬಿತ್ತಿದರೆ, ಮುಂದಿನ ದಿನಗಳಲ್ಲಿ ಅವುಗಳ ಸಾಧನೆಗೆ ಪ್ರೇರಣೆಯಾಗುತ್ತವೆ ಎಂದರು.

ಸರ್ಕಾರಿ ಆಡಳಿತ ವ್ಯವಸ್ಥೆಯ ವಿವಿಧ ಕಾರ್ಯಗಳಲ್ಲಿ ಶಿಕ್ಷಕರ ಸಹಕಾರ ಅತ್ಯಂತ ಮಹತ್ವದ್ದಾಗಿದೆ. ಚುನಾವಣೆ, ಜನಗಣತಿ ಹಾಗೂ ಎಸ್‌ಐಆರ್‌ನಂತಹ ಕಾರ್ಯಗಳನ್ನು ಯಶಸ್ವಿಯಾಗಿ ನಿರ್ವಹಿಸಲು ಶಿಕ್ಷಣ ಇಲಾಖೆ ಮತ್ತು ಶಿಕ್ಷಕರ ಸಹಭಾಗಿತ್ವ ಅನಿವಾರ್ಯವಾಗಿದೆ. ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವುದರಿಂದ ಸರ್ಕಾರಿ ಕಾರ್ಯಗಳನ್ನು ಸುಗಮವಾಗಿ ನಡೆಸಲು ಸಾಧ್ಯವಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯ ಚುನಾವಣಾ ಕಾರ್ಯಗಳಲ್ಲಿ ಶೇಕಡಾವಾರು ಪೂರ್ಣ ಪ್ರಮಾಣದ ಸಾಧನೆ ಮಾಡಲು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಶಿಕ್ಷಕರು ನೀಡುತ್ತಿರುವ ಸಹಕಾರ ಶ್ಲಾಘನೀಯವಾಗಿದೆ. ಮುಂದಿನ ದಿನಗಳಲ್ಲಿಯೂ ಇದೇ ರೀತಿಯ ಸಹಕಾರ ಮತ್ತು ಸಮನ್ವಯ ಮುಂದುವರಿಯಲಿ ಎಂದು ಆಶಿಸಿದರು.

ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ ಮಾತನಾಡಿ, ಶಿಕ್ಷಕರು ಮಗುವಿಗೆ ಶಿಕ್ಷಣದ ಜೊತೆಗೆ ಪ್ರೀತಿಯನ್ನೂ ನೀಡಿದಾಗ ಪರಿಪೂರ್ಣ ಶಿಕ್ಷಕರಾಗಲು ಸಾಧ್ಯ. ಪಾಠ ಮಾಡುವುದು ಮಾತ್ರ ಶಿಕ್ಷಣವಲ್ಲ, ಪರಿವರ್ತನೆಯೇ ಶಿಕ್ಷಣದ ಮೂಲ ಆಶಯವಾಗಿದೆ ಎಂದು ಹೇಳಿದರು.

ಪ್ರಶಸ್ತಿ ಪುರಸ್ಕೃತ ಶಿಕ್ಷಕರ ಪರವಾಗಿ ಶಿಕ್ಷಕ ಚಂದ್ರಶೇಖರ್ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿರಾಜಪೇಟೆಯ ಸಂತ ಅನ್ನಮ್ಮ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ಮದಲೈ ಮುತ್ತು, ಸೋಮವಾರಪೇಟೆ ತಾಲೂಕು ಕಸಾಪ ಅಧ್ಯಕ್ಷ ವಿಜೇತ್, ಸೋಮವಾರಪೇಟೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ವಿರಾಜಪೇಟೆ ತಾಲೂಕು ಅಧ್ಯಕ್ಷ ಪ್ರವೀಣ್, ಅನುದಾನಿತ ಪ್ರೌಢಶಾಲೆಗಳ ಜಿಲ್ಲಾಧ್ಯಕ್ಷ ಪ್ರಭು ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕಸಾಪ ತಂಡದವರು ನಾಡಗೀತೆ ಹಾಡಿದರು. ಕಸಾಪ ಗೌರವ ಕಾರ್ಯದರ್ಶಿ ರೇವತಿ ರಮೇಶ್ ಸ್ವಾಗತಿಸಿದರು. ಉ.ರಾ. ನಾಗೇಶ್ ನಿರೂಪಿಸಿದರು. ಮಡಿಕೇರಿ ತಾಲೂಕು ಅಧ್ಯಕ್ಷ ಕಡ್ಲೇರ ತುಳಸಿ ಮೋಹನ್ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

Kodava Film ‘Kote Betta’ Selected for 32nd Kolkata International Film Festival

ನವೆಂಬರ್ 20, 2026

ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ

ನವೆಂಬರ್ 20, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗದ ಪ್ರತ್ಯೇಕ ಗುರುತಿಗಾಗಿ ನ.23ರಂದು ಹುದಿಕೇರಿಯಲ್ಲಿ ಸಿಎನ್‌ಸಿಯ 11ನೇ ಮಾನವ ಸರಪಳಿ

ನವೆಂಬರ್ 20, 2026

ಕೊಡಗು ಕಸಾಪದಿಂದ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು : ಎಂ.ಪಿ. ಕೇಶವ ಕಾಮತ್

ನವೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.20: ಶಿಕ್ಷಕರು ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳಾಗಿದ್ದು, ಅವರ ಸೇವೆ ಮತ್ತು ತ್ಯಾಗವನ್ನು ಗುರುತಿಸಿ…

ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ

ನವೆಂಬರ್ 20, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗದ ಪ್ರತ್ಯೇಕ ಗುರುತಿಗಾಗಿ ನ.23ರಂದು ಹುದಿಕೇರಿಯಲ್ಲಿ ಸಿಎನ್‌ಸಿಯ 11ನೇ ಮಾನವ ಸರಪಳಿ

ನವೆಂಬರ್ 20, 2026

73ನೇ ಸಹಕಾರ ಸಪ್ತಾಹದ ಸಮಾರೋಪ: ಕೊಡಗಿನ ಸಹಕಾರಿ ಕ್ಷೇತ್ರದ ಪಾರದರ್ಶಕತೆ ರಾಜ್ಯಕ್ಕೆ ಮಾದರಿ – ಶಾಸಕ ಪೊನ್ನಣ್ಣ ಶ್ಲಾಘನೆ; ಸಹಕಾರ ಕ್ಷೇತ್ರದ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ನವೆಂಬರ್ 20, 2026

ಎರಡನೇ ಮೊಣ್ಣಂಗೇರಿಯಲ್ಲಿ ಯೋಗ ಸಿಂಚನಾ ಕಾರ್ಯಕ್ರಮ

ನವೆಂಬರ್ 20, 2026

ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಬಳಿ ಮತ್ತು ರಾಜಾಸೀಟ್ ರಸ್ತೆಯ ಪುರಾತನ ಮರಗಳ ಸಂರಕ್ಷಣೆಗೆ ಸಿಎನ್‌ಸಿ ಆಗ್ರಹ

ನವೆಂಬರ್ 20, 2026

ಸುಂಟಿಕೊಪ್ಪದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡದ ಹಿತರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ: ಎ. ಲೋಕೇಶ್ ಕುಮಾರ್

ನವೆಂಬರ್ 20, 2026

ಹಾರಂಗಿ ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕ ನೀರುಪಾಲು

ನವೆಂಬರ್ 20, 2026

ಚಕ್ಕೇರ ಮನು ಕಾವೇರಪ್ಪ ನಿಧನಕ್ಕೆ ಸೋಮವಾರಪೇಟೆ ಬಿಜೆಪಿ ಸಂತಾಪ

ನವೆಂಬರ್ 20, 2026

ಕಾಂಗ್ರೆಸ್ ನಲ್ಲಿ ಅಲ್ಪಸಂಖ್ಯಾತರಿಗೆ ಅನ್ಯಾಯ : ಕೆಪಿಸಿಸಿ ಸದಸ್ಯ ಕೆ.ಎ.ಯಾಕುಬ್ ಅಸಮಾಧಾನ : ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ

ನವೆಂಬರ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.