Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಿಸಿ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ – ಯೋಗೇಶ್ ನಾಯ್ಡು ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಿಸಿ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ – ಯೋಗೇಶ್ ನಾಯ್ಡು ಮನವಿ

ನವೆಂಬರ್ 20, 20261 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ವಿರಾಜಪೇಟೆ, NEWS DESK ನ.20: ಬೇಸಿಗೆ ರಜೆಯ ಸಂದರ್ಭದಲ್ಲಿ ಮಕ್ಕಳು ಈಜಾಡಲು ಹೊಳೆ ಹಾಗೂ ಕೆರೆಗಳಿಗೆ ತೆರಳಿ ಅಪಾಯಕ್ಕೆ ಸಿಲುಕುತ್ತಿರುವ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ವಿರಾಜಪೇಟೆ ನಗರದಲ್ಲಿ ಸರ್ಕಾರಿ ವತಿಯಿಂದ ಸುಸಜ್ಜಿತ ಈಜುಕೊಳ ನಿರ್ಮಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಯೋಗೇಶ್ ನಾಯ್ಡು ಅವರು ಕ್ಷೇತ್ರದ ಶಾಸಕರಿಗೆ ಮನವಿ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೇಸಿಗೆ ರಜೆ ಆರಂಭವಾಗುತ್ತಿದ್ದಂತೆ ಮಕ್ಕಳು ಈಜುವ ಆಸಕ್ತಿಯಿಂದ ಅಪಾಯಕಾರಿ ಹೊಳೆ ಹಾಗೂ ಕೆರೆಗಳಿಗೆ ಇಳಿಯುತ್ತಿದ್ದು, ಇದರಿಂದ ಸಂಭವಿಸುತ್ತಿರುವ ಪ್ರಾಣಾಪಾಯದ ಘಟನೆಗಳು ಆತಂಕಕ್ಕೆ ಕಾರಣವಾಗಿವೆ ಎಂದು ತಿಳಿಸಿದ್ದಾರೆ.

ಮಕ್ಕಳ ಜೀವ ಅಮೂಲ್ಯವಾಗಿದ್ದು, ಅವರ ಸುರಕ್ಷತೆ ಸಮಾಜದ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ನಗರದಲ್ಲಿ ಸರ್ಕಾರಿ ವತಿಯಿಂದ ಸುಸಜ್ಜಿತ ಈಜುಕೊಳ ನಿರ್ಮಿಸಿ, ನುರಿತ ತರಬೇತುದಾರರನ್ನು ನೇಮಿಸುವ ಮೂಲಕ ಮಕ್ಕಳಿಗೆ ವೈಜ್ಞಾನಿಕವಾಗಿ ಈಜು ತರಬೇತಿ ನೀಡುವ ವ್ಯವಸ್ಥೆ ಕಲ್ಪಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಈಜುಕೊಳದ ನಿರ್ವಹಣೆಗಾಗಿ ಸಾರ್ವಜನಿಕರಿಗೆ ಹೊರೆಯಾಗದಂತೆ ಮಾಸಿಕ ಅಥವಾ ಗಂಟೆಯ ಆಧಾರದ ಮೇಲೆ ಅಲ್ಪ ಪ್ರಮಾಣದ ಶುಲ್ಕ ನಿಗದಿಪಡಿಸಬಹುದು. ಇದರಿಂದ ವಿರಾಜಪೇಟೆ ನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಮಕ್ಕಳಿಗೆ ಸುರಕ್ಷಿತ ವಾತಾವರಣದಲ್ಲಿ ಈಜು ಕಲಿಯಲು ಅವಕಾಶ ದೊರೆಯಲಿದೆ. ಜೊತೆಗೆ, ಅಪಾಯಕಾರಿ ಜಲಮೂಲಗಳಲ್ಲಿ ಸಂಭವಿಸಬಹುದಾದ ಅವಘಡಗಳನ್ನು ತಡೆಗಟ್ಟಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆದ್ದರಿಂದ ಶಾಸಕರು ಈ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಯೋಗೇಶ್ ನಾಯ್ಡು ಅವರು ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ರೋಟರಿ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಪ್ರಶಸ್ತಿ

ನವೆಂಬರ್ 20, 2026

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಿಐಟಿಯು ಒತ್ತಾಯ; ವಿರಾಜಪೇಟೆಯಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಕಲ್ಯಾಣ ಮಂಡಳಿಗೆ ಮನವಿ ಸಲ್ಲಿಕೆ

ನವೆಂಬರ್ 20, 2026

Kodava Film ‘Kote Betta’ Selected for 32nd Kolkata International Film Festival

ನವೆಂಬರ್ 20, 2026

ಕಾರ್ಮಿಕರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸಿಐಟಿಯು ಒತ್ತಾಯ; ವಿರಾಜಪೇಟೆಯಲ್ಲಿ ಕಾರ್ಮಿಕ ಇಲಾಖೆಯ ಮೂಲಕ ಕಲ್ಯಾಣ ಮಂಡಳಿಗೆ ಮನವಿ ಸಲ್ಲಿಕೆ

ನವೆಂಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ನ.20: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಹಲವು ವರ್ಷಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ,…

ವಿರಾಜಪೇಟೆಯಲ್ಲಿ ಸರ್ಕಾರಿ ಈಜುಕೊಳ ನಿರ್ಮಿಸಿ: ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ – ಯೋಗೇಶ್ ನಾಯ್ಡು ಮನವಿ

ನವೆಂಬರ್ 20, 2026

Kodava Film ‘Kote Betta’ Selected for 32nd Kolkata International Film Festival

ನವೆಂಬರ್ 20, 2026

ಕೊಡಗು ಕಸಾಪದಿಂದ ಅತ್ಯುತ್ತಮ ಶಿಕ್ಷಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ಸಮಾಜದ ಉತ್ತಮ ಪ್ರಜೆಗಳನ್ನು ರೂಪಿಸುವ ಶಿಲ್ಪಿಗಳು ಶಿಕ್ಷಕರು : ಎಂ.ಪಿ. ಕೇಶವ ಕಾಮತ್

ನವೆಂಬರ್ 20, 2026

ನ.22ರಂದು ಸೋಮವಾರಪೇಟೆಯಲ್ಲಿ ‘ಸಮಾಜ ಸೇವಕ.. ಒಕ್ಕಲಿಗ ನಾಯಕ ಹರಪಳ್ಳಿ ರವೀಂದ್ರ’ ಪುಸ್ತಕ ಬಿಡುಗಡೆ; ಬೃಹತ್ ರೈತ ಸಮಾವೇಶ ಆಯೋಜನೆ – ಸಚಿವ ಎಚ್.ಡಿ.ಕುಮಾರಸ್ವಾಮಿ ಗೌರವ ಉಪಸ್ಥಿತಿ

ನವೆಂಬರ್ 20, 2026

ಕೊಡವಲ್ಯಾಂಡ್ ಸ್ವಾಯತ್ತತೆ, ಕೊಡವ ಜನಾಂಗದ ಪ್ರತ್ಯೇಕ ಗುರುತಿಗಾಗಿ ನ.23ರಂದು ಹುದಿಕೇರಿಯಲ್ಲಿ ಸಿಎನ್‌ಸಿಯ 11ನೇ ಮಾನವ ಸರಪಳಿ

ನವೆಂಬರ್ 20, 2026

73ನೇ ಸಹಕಾರ ಸಪ್ತಾಹದ ಸಮಾರೋಪ: ಕೊಡಗಿನ ಸಹಕಾರಿ ಕ್ಷೇತ್ರದ ಪಾರದರ್ಶಕತೆ ರಾಜ್ಯಕ್ಕೆ ಮಾದರಿ – ಶಾಸಕ ಪೊನ್ನಣ್ಣ ಶ್ಲಾಘನೆ; ಸಹಕಾರ ಕ್ಷೇತ್ರದ ನಾಲ್ವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ನವೆಂಬರ್ 20, 2026

ಎರಡನೇ ಮೊಣ್ಣಂಗೇರಿಯಲ್ಲಿ ಯೋಗ ಸಿಂಚನಾ ಕಾರ್ಯಕ್ರಮ

ನವೆಂಬರ್ 20, 2026

ಮಡಿಕೇರಿಯ ಕಾವೇರಿ ಕಲಾಕ್ಷೇತ್ರದ ಬಳಿ ಮತ್ತು ರಾಜಾಸೀಟ್ ರಸ್ತೆಯ ಪುರಾತನ ಮರಗಳ ಸಂರಕ್ಷಣೆಗೆ ಸಿಎನ್‌ಸಿ ಆಗ್ರಹ

ನವೆಂಬರ್ 20, 2026

ಸುಂಟಿಕೊಪ್ಪದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ; ಕನ್ನಡದ ಹಿತರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಅಗತ್ಯವಿದೆ: ಎ. ಲೋಕೇಶ್ ಕುಮಾರ್

ನವೆಂಬರ್ 20, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.