Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದ ಕಾಂಗ್ರೆಸ್ ವಿರುದ್ಧ ಅಸಮಾಧಾನ : ಕೆ.ಎ.ಯಾಕುಬ್ ಬೆಂಬಲಕ್ಕೆ ನಿಂತ ಸುನ್ನಿ ಮಹಲ್ ಗಳ ಒಕ್ಕೂಟ : ನೋಟಾದ ಮೂಲಕ ಕಾಂಗ್ರೆಸ್ ಗೆ ತಕ್ಕ ಪಾಠ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಅಲ್ಪಸಂಖ್ಯಾತರಿಗೆ ಸೂಕ್ತ ಸ್ಥಾನಮಾನ ನೀಡದ ಕಾಂಗ್ರೆಸ್ ವಿರುದ್ಧ ಅಸಮಾಧಾನ : ಕೆ.ಎ.ಯಾಕುಬ್ ಬೆಂಬಲಕ್ಕೆ ನಿಂತ ಸುನ್ನಿ ಮಹಲ್ ಗಳ ಒಕ್ಕೂಟ : ನೋಟಾದ ಮೂಲಕ ಕಾಂಗ್ರೆಸ್ ಗೆ ತಕ್ಕ ಪಾಠ

ನವೆಂಬರ್ 23, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ NEWS DESK ನ.23 : ಕೆಪಿಸಿಸಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಕೆ.ಎ.ಯಾಕುಬ್ ಅವರಿಗೆ ಬೆಂಬಲ ವ್ಯಕ್ತಪಡಿಸಿರುವ ಸುನ್ನಿ ಮಹಲ್‌ಗಳ ಒಕ್ಕೂಟದ ಕೊಡಗು ಜಿಲ್ಲಾ ಘಟಕ, ಅಲ್ಪಸಂಖ್ಯಾತರನ್ನು ಇದೇ ರೀತಿ ಕಡೆಗಣಿಸುತ್ತಾ ಬಂದರೆ ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನೋಟಾದ ಮೂಲಕ ತಕ್ಕ ಪಾಠ ಕಲಿಸುವುದಾಗಿ ಎಚ್ಚರಿಕೆ ನೀಡಿದೆ. ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಜಿಲ್ಲಾಧ್ಯಕ್ಷ ಸಿ.ಎಂ.ಹಮೀದ್ ಮೌಲವಿ, ಕಾಂಗ್ರೆಸ್ ಪಕ್ಷಕ್ಕಾಗಿ ಅಲ್ಪಸಂಖ್ಯಾತರು ಹಲವು ವರ್ಷಗಳಿಂದ ಶ್ರಮಿಸುತ್ತಿದ್ದರೂ, ಅವರ ಸಂವಿಧಾನಬದ್ಧ ಹಕ್ಕುಗಳು ಹಾಗೂ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಮಟ್ಟದಲ್ಲಿ ಸೂಕ್ತ ಸ್ಥಾನಮಾನ ದೊರೆಯದೆ ಬೇಸರಗೊಂಡು ಕೆಪಿಸಿಸಿಗೆ ರಾಜೀನಾಮೆ ಸಲ್ಲಿಸಿರುವ ಕೆ.ಎ.ಯಾಕುಬ್ ಅವರೊಂದಿಗೆ ಸರ್ವ ಅಲ್ಪಸಂಖ್ಯಾತರು ಇದ್ದಾರೆ. ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿರುವ ಕೆ.ಎ.ಯಾಕುಬ್ ಅವರು ಇಲ್ಲಿಯವರೆಗೆ ಸ್ವಂತ ಮನೆ ಅಥವಾ ನಿವೇಶನವನ್ನು ಹೊಂದಿಲ್ಲ. ಅವರಿಗೆ ರಾಜ್ಯ ಮಟ್ಟದ ಸ್ಥಾನಮಾನ ನೀಡುವಲ್ಲಿ ಕಾಂಗ್ರೆಸ್ ಪಕ್ಷ ವಿಫಲವಾಗಿದೆ. ಎಲ್ಲಾ ಮುಸ್ಲಿಮರು ಒಗ್ಗಟ್ಟಾಗಿ ಯಾಕುಬ್ ಅವರಿಗೆ ಸೂಕ್ತ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿದ್ದೇವೆ. ಅಲ್ಪಸಂಖ್ಯಾತರನ್ನು ನಿರ್ಲಕ್ಷಿಸಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ದೊಡ್ಡ ಪರಿಣಾಮ ಎದುರಿಸಬೇಕಾಗುತ್ತದೆ. ಶಾಸಕರು, ಪಕ್ಷದ ವರಿಷ್ಠರು ಹಾಗೂ ಜಿಲ್ಲಾಧ್ಯಕ್ಷರು ಈ ವಿಚಾರದಲ್ಲಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರ ಸಮ್ಮುಖದಲ್ಲಿ ನಡೆದ ಅಲ್ಪಸಂಖ್ಯಾತ ಮುಖಂಡರ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಸಂದರ್ಭ ಅಲ್ಪಸಂಖ್ಯಾತರಿಗೆ ಸಂವಿಧಾನಬದ್ಧ ಅವಕಾಶ ಹಾಗೂ ಸೂಕ್ತ ಸ್ಥಾನಮಾನ ನೀಡುವಂತೆ ಮನವಿ ಮಾಡಲಾಗಿತ್ತು. ಅಧಿಕಾರಕ್ಕೆ ಬಂದರೆ ಖಚಿತವಾಗಿ ಎಲ್ಲಾ ಸ್ಥಾನಮಾನ ನೀಡುವುದಾಗಿ ಭರವಸೆ ನೀಡಲಾಗಿತ್ತು. ಆದರೆ, ಇಲ್ಲಿಯವರೆಗೆ ಯಾವುದೇ ಸೂಕ್ತ ಸ್ಥಾನಮಾನ ನೀಡಿಲ್ಲ. ಇದರಿಂದ ಜಿಲ್ಲೆಯ ಎಲ್ಲಾ ಅಲ್ಪಸಂಖ್ಯಾತರು ನೋವು ಅನುಭವಿಸುವಂತಾಗಿದೆ ಎಂದು ಹೇಳಿದರು.
ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲೇಬೇಕು ಎನ್ನುವ ಉದ್ದೇಶದಿಂದ ಕೆ.ಎ.ಯಾಕುಬ್ ಅವರೊಂದಿಗೆ ನಾವೆಲ್ಲರೂ ಕೊಡಗು ಜಿಲ್ಲೆಯಾದ್ಯಂತ ಸ್ವಂತ ಖರ್ಚಿನಲ್ಲಿ ಪ್ರಚಾರ ಕಾರ್ಯ ನಡೆಸಿದೆವು. ಆದರೆ, ಪಕ್ಷ ಅಧಿಕಾರಕ್ಕೆ ಬಂದ ನಂತರ ಅಲ್ಪಸಂಖ್ಯಾತರ ಬೇಡಿಕೆಗಳಿಗೆ ಸ್ಪಂದನೆ ದೊರೆತ್ತಿಲ್ಲ, “ಅಡುಗೆ ಮಾಡಲು, ಬಡಿಸಲು ನಾವು ಬೇಕು, ಆದರೆ ಊಟಕ್ಕೆ ನಾವು ಬೇಡ” ಎಂಬAತಾಗಿದೆ ಎಂದು ಹಮೀದ್ ಮೌಲವಿ ಬೇಸರ ವ್ಯಕ್ತಪಡಿಸಿದರು. ಅಲ್ಪಸಂಖ್ಯಾತರು ಗೆಲ್ಲಬಹುದಾಗಿದ್ದ ಜಿ.ಪಂ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರಿಗೆ ಅವಕಾಶ ಸಿಗದಂತೆ ನೋಡಿಕೊಳ್ಳಲಾಗಿದೆ. ಇನ್ನಾದರೂ ಸರಕಾರ ಎಚ್ಚೆತ್ತುಕೊಂಡು ಜಿಲ್ಲಾ ಪಂಚಾಯಿತಿಯ ಆರು ಕ್ಷೇತ್ರಗಳನ್ನು ಅಲ್ಪಸಂಖ್ಯಾತರಿಗೆ ನೀಡಬೇಕು. ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿಗಳಲ್ಲಿಯೂ ಸೂಕ್ತ ಸ್ಥಾನಮಾನ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರು ಅಪಾರ ನೋವು ಅನುಭವಿಸಿದ್ದಾರೆ. ಈ ಕಾರಣದಿಂದ ಒಗ್ಗಟ್ಟಾಗಿ ಅಲ್ಪಸಂಖ್ಯಾತರು ಕಾಂಗ್ರೆಸ್ ಗೆ ಮತ ನೀಡಿ ಅಧಿಕಾರಕ್ಕೆ ಬರುವಂತೆ ನೋಡಿಕೊಂಡರು. ಆದರೆ ಇಂದು ಕಾಂಗ್ರೆಸ್ ಪಕ್ಷವೇ ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಆರೋಪಿಸಿದರು. ಅಲ್ಪಸಂಖ್ಯಾತರಿಗೆ ಸಂವಿಧಾನಬದ್ಧ ಹಕ್ಕುಗಳನ್ನು ನೀಡಬೇಕು ಎಂದು ಆಗ್ರಹಿಸಿದ ಅವರು, ಅಲ್ಪಸಂಖ್ಯಾತರ ಬೇಡಿಕೆಗಳನ್ನು ನಿರ್ಲಕ್ಷಿಸಿದರೆ ಮುಂದಿನ ಚುನಾವಣೆಗಳಲ್ಲಿ ನೋಟಾಕ್ಕೆ ಮತ ನೀಡುವ ಮೂಲಕ ತಕ್ಕ ಪಾಠ ಕಲಿಸಲಾಗುವುದು ಅಥವಾ ಪರ್ಯಾಯ ಚಿಂತನೆಗಳನ್ನು ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು. ಸುದ್ದಿಗೋಷ್ಠಿಯಲ್ಲಿ ಸುನ್ನಿ ಮಹಲ್‌ಗಳ ಒಕ್ಕೂಟದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ.ಎಂ.ಅಬ್ದುಲ್ ಕರೀಂ, ಕೋಶಾಧಿಕಾರಿ ರಫೀಕ್ ಹಾಜಿ, ಉಪಾಧ್ಯಕ್ಷ ಉಮ್ಮರ್ ಫೈಜ್ ಹಾಗೂ ಸದಸ್ಯ ಶಮೀರ್ ಕೆ.ಪಿ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಮಾತ್ರ ಸಾಧನೆ ಸಾಧ್ಯ; ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸಲು ಆದ್ಯತೆ – ಶಾಸಕ ಡಾ. ಮಂಥರ್ ಗೌಡ

ನವೆಂಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮೂರ್ನಾಡು, NEWS DESK ನ.21: ಪಠ್ಯಪುಸ್ತಕಗಳ ಅಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿಯೂ ವಿದ್ಯಾರ್ಥಿಗಳು ತಮ್ಮನ್ನು ತೊಡಗಿಸಿಕೊಂಡಾಗ ಮಾತ್ರ ಜೀವನದಲ್ಲಿ ಉತ್ತಮ…

ಬಸವೇಶ್ವರರ ಕುರಿತು ಅವಹೇಳನಕಾರಿ ಬರಹ: ಲೇಖಕರ ವಿರುದ್ಧ ಕಾನೂನು ಕ್ರಮಕ್ಕೆ ವೀರಶೈವ ಮಹಾಸಭಾ ಆಗ್ರಹ

ನವೆಂಬರ್ 21, 2026

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

ನವೆಂಬರ್ 21, 2026

ಅರಪಟ್ಟು ಗ್ರಾಮದ ದೇವರ ಕಾಡಿನಲ್ಲಿ ಶ್ರೀ ಅಯ್ಯಪ್ಪ ದೇವರ ವಾರ್ಷಿಕ ಮಹಾಪೂಜೆ

ನವೆಂಬರ್ 21, 2026

ಲಿಟಲ್ ಸ್ಕಾಲರ್ಸ್ ಅಕಾಡೆಮಿಯಿಂದ ರಾಮನಗರ ಅಂಗನವಾಡಿ ಮಕ್ಕಳಿಗೆ ಕಲಿಕಾ ಸಾಮಗ್ರಿಗಳ ವಿತರಣೆ

ನವೆಂಬರ್ 21, 2026

ಸಂಸ್ಕೃತಿಯ ಜೊತೆಗೆ ವಚನಕಾರರ ಮೌಲ್ಯಗಳನ್ನು ಅರಿಯಿರಿ: ಪ್ರೊ. ಭಾರತಿ ಹಿರೇಮಠ್; ವಚನಗಳಲ್ಲಿ ಕಾಯಕ ಪ್ರಜ್ಞೆ ವಿಚಾರ ಸಂಕಿರಣ ಉದ್ಘಾಟನೆ

ನವೆಂಬರ್ 21, 2026

ಎಸ್.ಜೆ.ಎಂ. ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಂದ ಪ್ರತಿಭಾ ಕಾರಂಜಿಯಲ್ಲಿ ಉತ್ತಮ ಸಾಧನೆ

ನವೆಂಬರ್ 21, 2026

ನ.24ರಂದು ಗೋಣಿಕೊಪ್ಪಲಿನಲ್ಲಿ ವಿಕಲಚೇತನರ ಜಾಥಾ, ಕ್ರೀಡಾ ಮತ್ತು ಪ್ರತಿಭಾ ಸ್ಪರ್ಧೆ

ನವೆಂಬರ್ 21, 2026

ನ.24ರಂದು ಭಾಗಮಂಡಲದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ

ನವೆಂಬರ್ 21, 2026

ನ.21ರಂದು 71ನೇ ಕನ್ನಡ ರಾಜ್ಯೋತ್ಸವ–ಕನ್ನಡ ಹಬ್ಬ ಕಾರ್ಯಕ್ರಮ

ನವೆಂಬರ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.