ನಾಪೋಕ್ಲು ನ.23 NEWS DESK : ಕಕ್ಕುಂದಕಾಡು ಶ್ರೀ ವೆಂಕಟೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 2 ಲಕ್ಷ ರೂ. ಆರ್ಥಿಕ ನೆರವು ನೀಡಲಾಗಿದ್ದು, ನೆರವಿನ ಚೆಕ್ ಅನ್ನು ದೇವಸ್ಥಾನದ ಆಡಳಿತ ಮಂಡಳಿಗೆ ಭಾನುವಾರ ಹಸ್ತಾಂತರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಮಂಜೂರು ಮಾಡಿದ 2 ಲಕ್ಷ ರೂ. ನೆರವಿನ ಚೆಕ್ ಅನ್ನು ದೇವಸ್ಥಾನದ ಆಡಳಿತ ಮಂಡಳಿಯ ಪ್ರಮುಖರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ವಿಟ್ಟಲ್ ಸಾಲಿಯಾನ್, ಯೋಜನಾಧಿಕಾರಿ ಪುರುಷೋತ್ತಮ್, ಸೇವಾ ಪ್ರತಿನಿಧಿ ಉಮಾಲಕ್ಷ್ಮಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಗೋಪಾಲ, ಕಾರ್ಯದರ್ಶಿ, ಮಡಿಕೇರಿ ತಾಲೂಕು ಶೌರ್ಯ ಘಟಕದ ಮಾಸ್ಟರ್ ಬಾಳೆಯಡ ದಿವ್ಯಾ ಮಂದಪ್ಪ, ಖಜಾಂಚಿ ಸೂರ್ಯ ಕುಮಾರ್, ದೇವಸ್ಥಾನದ ಅರ್ಚಕ ಸುಧೀರ್ ಭಟ್ ಸೇರಿದಂತೆ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ದುಗ್ಗಳ ಸದಾನಂದ

















