ಮಡಿಕೇರಿ ನ.24 NEWS DESK : ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಮೈಸೂರು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳವು ದಕ್ಷಿಣ ಕನ್ನಡ ಜಿಲ್ಲೆಯ ಸಂತ ಅಲೋಶಿಯಸ್ (ಪರಿಣತ ವಿಶ್ವವಿದ್ಯಾಲಯ) ಮಂಗಳೂರಿನಲ್ಲಿ ನವೆಂಬರ್, 30 ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಇಲಾಖಾ ವತಿಯಿಂದ ನಡೆಯಲಿದೆ. ಆದ್ದರಿಂದ ಜಿಲ್ಲೆಯ ಉದ್ಯೋಗದಾತರು ಮತ್ತು ಎಲ್ಲಾ ವಿದ್ಯಾರ್ಹತೆಯ ಉದ್ಯೋಗಾಕಾಂಕ್ಷಿಗಳು https://yuvaudyogasethu.karnataka.gov.in/services/events ಪೋರ್ಟಲ್ನಲ್ಲಿ ನೋಂದಾಯಿಸಿ, ಈ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಕೊಡಗು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ.

















