ವಿರಾಜಪೇಟೆ ನ.25 NEWS DESK : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾರದಾ ಪೂಜಾ ಕಾರ್ಯಕ್ರಮವು ಧಾರ್ಮಿಕ ಶ್ರದ್ಧಾಭಕ್ತಿ ಹಾಗೂ ಸಂಭ್ರಮದೊಂದಿಗೆ ನೆರವೇರಿತು. ರುದ್ರಗುಪ್ಪೆ ಜೋಡು ಭಗವತಿ ದೇವಾಲಯದ ಅರ್ಚಕರಾದ ಮೋಹನ್ ಅವರು ಶಾರದಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು. ಬಳಿಕ ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಗೆ ಪ್ರಸಾದ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರಾದ ಮುಲ್ಲೆಂಗಡ ಶಂಕರಿ ಪೊನ್ನಪ್ಪ, ಮೂಕಚಂಡ ಪ್ರಸನ್ನ ಸುಬ್ಬಯ್ಯ, ಮೂಕಚಂಡ ಕಾವೇರಮ್ಮ ಹಾಗೂ ಕ್ರೀಡಾ ಸಮಿತಿಯ ಸದಸ್ಯರಾದ ಚೆರಿಯಂಡ ಪೂಜಾ ಅವರು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರಾದ ದೇವರಾಜ್ ಬಿ.ಟಿ., ಅತಿಥಿ ಶಿಕ್ಷಕರಾದ ಶರಣ್ಯ ಟಿ.ಎಸ್. ಮತ್ತು ಸುಮ ಜಿ.ಆರ್., ಅಕ್ಷರ ದಾಸೋಹ ಸಿಬ್ಬಂದಿ ವರ್ಗ, ಅಂಗನವಾಡಿ ಸಹಾಯಕಿ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಕಾರ್ಯಕ್ರಮದ ಮೆರುಗು ಹೆಚ್ಚಿಸಿದರು.


































