Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮಡಿಕೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ : ಕನಕದಾಸರ ಚಿಂತನೆ, ಕೀರ್ತನೆಗಳು ಮಾನವಕುಲಕ್ಕೆ ಸದಾ ದಾರಿದೀಪ – ಜಯಲಕ್ಷ್ಮಿ ರಾಯಕೋಡ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ : ಕನಕದಾಸರ ಚಿಂತನೆ, ಕೀರ್ತನೆಗಳು ಮಾನವಕುಲಕ್ಕೆ ಸದಾ ದಾರಿದೀಪ – ಜಯಲಕ್ಷ್ಮಿ ರಾಯಕೋಡ್

ನವೆಂಬರ್ 27, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.27: ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮಹತ್ವದ ಕಾರ್ಯ ಮಾಡಿದ್ದಾರೆ. ಅವರ ಜೀವನ, ಚಿಂತನೆ ಹಾಗೂ ಕೀರ್ತನೆಗಳು ಇಡೀ ಮಾನವಕುಲಕ್ಕೆ ಸದಾ ದಾರಿದೀಪವಾಗಿವೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಜಯಲಕ್ಷ್ಮಿ ರಾಯಕೋಡ್ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದಾರ್ಶನಿಕ ಸಂತ, ಶ್ರೇಷ್ಠ ಕವಿ ಹಾಗೂ ಸಮಾಜ ಸುಧಾರಕರಾದ ಕನಕದಾಸರ ಚಿಂತನೆಗಳು ಯಾವುದೇ ಒಂದು ಕಾಲಘಟ್ಟ ಅಥವಾ ನಿರ್ದಿಷ್ಟ ಸಮುದಾಯಕ್ಕೆ ಸೀಮಿತವಾಗಿಲ್ಲ. ಅವರ ಆದರ್ಶಗಳು ಇಂದಿಗೂ ಪ್ರಸ್ತುತವಾಗಿದ್ದು, ಮುಂದಿನ ಪೀಳಿಗೆಗೂ ಮಾರ್ಗದರ್ಶಕವಾಗಿವೆ ಎಂದರು.

ಮಹಾನ್ ವ್ಯಕ್ತಿಗಳ ಜಯಂತಿ ಆಚರಣೆಯ ನಿಜವಾದ ಉದ್ದೇಶ ಅವರ ಆದರ್ಶಗಳು, ಚಿಂತನೆಗಳು ಹಾಗೂ ಸಮಾಜಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸುವುದರ ಜೊತೆಗೆ ಅವುಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದಾಗಿದೆ. ಕನಕದಾಸರು ಸಾಮಾಜಿಕ ನ್ಯಾಯ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಮಹತ್ವವನ್ನು ತಮ್ಮ ಕೀರ್ತನೆಗಳ ಮೂಲಕ ಸಾರಿದ್ದಾರೆ ಎಂದು ತಿಳಿಸಿದರು.

ಕನಕದಾಸರ ಕೀರ್ತನೆಗಳಲ್ಲಿ ಸತ್ಯ, ಸರಳತೆ ಹಾಗೂ ಮಾನವೀಯತೆಯ ಸಂದೇಶ ಅಡಕವಾಗಿದೆ. ಸತ್ಯವಂತರ ಸಂಗದಲ್ಲಿದ್ದಾಗ ಯಾವುದೇ ತೀರ್ಥಸ್ನಾನದ ಅಗತ್ಯವಿಲ್ಲ ಎಂಬ ಅವರ ಸಂದೇಶವು ಮನುಷ್ಯನ ಆಂತರಿಕ ಶುದ್ಧತೆ ಮತ್ತು ಸತ್ಯನಿಷ್ಠೆಯ ಮಹತ್ವವನ್ನು ಸಾರುತ್ತದೆ. ಸರಳ ಜೀವನ ನಡೆಸುತ್ತಾ ಸಮಾಜಕ್ಕೆ ಉತ್ತಮ ಮಾರ್ಗದರ್ಶನ ನೀಡಿದ ಅವರ ಆದರ್ಶಗಳು ಪ್ರತಿಯೊಬ್ಬರಿಗೂ ಅನುಕರಣೀಯವಾಗಿವೆ ಎಂದು ಹೇಳಿದರು.

ಜ್ಞಾನಶಕ್ತಿಯಿಂದ ಶಾಶ್ವತ ಸ್ಥಾನ ಪಡೆದ ಕನಕದಾಸರು

ಸೋಮವಾರಪೇಟೆ ತಾಲ್ಲೂಕಿನ ಬೆಸೂರು ಪ್ರೌಢಶಾಲೆಯ ಶಿಕ್ಷಕ ಕೆ.ಎನ್. ಕಿರಣ್ ಕುಮಾರ್ ಮಾತನಾಡಿ, ಕನಕದಾಸರು ಬಾಲ್ಯದಿಂದಲೇ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಉನ್ನತ ಚಿಂತನೆ ಹೊಂದಿದ್ದರು. ಜನಬಲ, ಹಣಬಲ ಸೇರಿದಂತೆ ಯಾವುದೇ ಬಾಹ್ಯ ಶಕ್ತಿಗಳ ಬೆಂಬಲವಿಲ್ಲದಿದ್ದರೂ ತಮ್ಮ ಅಪಾರ ಜ್ಞಾನಶಕ್ತಿ, ಭಕ್ತಿ ಹಾಗೂ ಕೀರ್ತನೆಗಳ ಮೂಲಕ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ ಎಂದರು.

ಕನಕದಾಸರ ಜೀವನ ಮತ್ತು ಸಾಧನೆಗಳನ್ನು ಅವಲೋಕಿಸಿದಾಗ ಅವರ ಜ್ಞಾನಶಕ್ತಿಯ ಆಳ ಹಾಗೂ ಚಿಂತನೆಯ ಮಹತ್ವ ಅರಿವಾಗುತ್ತದೆ. ಸೀಮಿತ ಪರಿಸ್ಥಿತಿಗಳ ನಡುವೆಯೂ ತಮ್ಮ ವಿಶಿಷ್ಟ ವ್ಯಕ್ತಿತ್ವದಿಂದ ಇಡೀ ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತ ಗುರುತಿಸಿಕೊಳ್ಳುವ ಮಟ್ಟಕ್ಕೆ ಬೆಳೆದಿರುವುದು ಅವರ ಸಾಧನೆಯ ಮಹತ್ವವನ್ನು ಸಾರುತ್ತದೆ ಎಂದು ತಿಳಿಸಿದರು.

ನಾರಾಯಣನ ಪರಮಭಕ್ತರಾಗಿ ಕೀರ್ತನೆಗಳನ್ನು ರಚಿಸಿ, ಹಾಡುವ ಮೂಲಕ ಭಕ್ತಿ, ಸಮಾನತೆ ಹಾಗೂ ಮಾನವೀಯ ಮೌಲ್ಯಗಳ ಸಂದೇಶವನ್ನು ಜನರಿಗೆ ತಲುಪಿಸಿದ ಕನಕದಾಸರು ಇಂದಿಗೂ ಜನಮಾನಸದಲ್ಲಿ ಅಜರಾಮರರಾಗಿದ್ದಾರೆ ಎಂದು ಹೇಳಿದರು.

ಮಾನವೀಯ ಮೌಲ್ಯಗಳ ಮಹತ್ವ

ಕೊಡಗು ಜಿಲ್ಲಾ ಕುರುಬ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎ. ಗಂಗಾಧರ ಮಾತನಾಡಿ, ಮಾನವೀಯ ಮೌಲ್ಯಗಳು ವ್ಯಕ್ತಿಯ ಮನಸ್ಸಿನಲ್ಲಿ ಆಳವಾಗಿ ಬೇರೂರಿದಾಗ ಬದುಕು ಕೇವಲ ಅಸ್ತಿತ್ವದ ಹೋರಾಟವಾಗಿ ಉಳಿಯುವುದಿಲ್ಲ. ಬದಲಾಗಿ ಅರ್ಥಪೂರ್ಣ, ನೆಮ್ಮದಿಯ ಹಾಗೂ ಸಮಾಜಮುಖಿ ಪಯಣವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕುಶಾಲನಗರದ ಹಿರಿಯ ರಂಗಭೂಮಿ ಕಲಾವಿದ ಬರಮಣ್ಣ ಟಿ. ಬೆಟಗೇರಿ ಮಾತನಾಡಿ, ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ವೈಚಾರಿಕ ವಿಚಾರಗಳನ್ನು ಜನಸಾಮಾನ್ಯರಿಗೆ ತಲುಪಿಸಿದ್ದಾರೆ. ನಿಜವಾದ ಜೀವನವನ್ನು ಹೇಗೆ ನಡೆಸಬೇಕು ಎಂಬುದನ್ನು ತಮ್ಮ ಗೀತೆಗಳ ಮೂಲಕ ತಿಳಿಸಿಕೊಟ್ಟಿದ್ದಾರೆ ಎಂದು ಕನಕದಾಸರ ಕೀರ್ತನೆಗಳನ್ನು ಉಲ್ಲೇಖಿಸಿ ವಿವರಿಸಿದರು.

ಗಣ್ಯರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದಿನೇಶ್ ಕುಮಾರ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್. ಬಿಂದುಮಣಿ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ ಹಾಗೂ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಉಪನ್ಯಾಸಕಿ ಜಯಲಕ್ಷ್ಮಿ ಹಾಗೂ ಸಮರ್ಥ ಕನ್ನಡಿಗರು ಸಂಘಟನೆಯ ಸಂಚಾಲಕಿ ಸೌಮ್ಯ ಅವರು ನಾಡಗೀತೆ ಮತ್ತು ವಂದೇ ಮಾತರಂ ಹಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಸ್ವಾಗತಿಸಿದರು. ಮಣಜೂರು ಮಂಜುನಾಥ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕೊಯನಾಡು ಸರ್ಕಾರಿ ಶಾಲೆಯಲ್ಲಿ ಯೋಗ ಸಿಂಚನ ಕಾರ್ಯಕ್ರಮ

ನವೆಂಬರ್ 27, 2026

ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

ನವೆಂಬರ್ 27, 2026

ಸೋಮವಾರಪೇಟೆಯಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಮಾನವ ಸರಪಳಿ ಮೂಲಕ ಜಾಗೃತಿ

ನವೆಂಬರ್ 27, 2026

ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆ ಪರಿಹರಿಸದಿದ್ದರೆ ತಾಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆ ಬಹಿಷ್ಕಾರ: ರೈತ ಹೋರಾಟ ಸಮಿತಿ ಎಚ್ಚರಿಕೆ

ನವೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ, NEWS DESK ನ.27: ಸಿ ಅಂಡ್ ಡಿ ಲ್ಯಾಂಡ್ ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದಲ್ಲಿ ಮುಂಬರುವ ತಾಲೂಕು ಹಾಗೂ ಜಿಲ್ಲಾ…

ಸೋಮವಾರಪೇಟೆಯಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಮಾನವ ಸರಪಳಿ ಮೂಲಕ ಜಾಗೃತಿ

ನವೆಂಬರ್ 27, 2026

ಮಡಿಕೇರಿಯಲ್ಲಿ ಕನಕದಾಸರ ಜಯಂತಿ ಆಚರಣೆ : ಕನಕದಾಸರ ಚಿಂತನೆ, ಕೀರ್ತನೆಗಳು ಮಾನವಕುಲಕ್ಕೆ ಸದಾ ದಾರಿದೀಪ – ಜಯಲಕ್ಷ್ಮಿ ರಾಯಕೋಡ್

ನವೆಂಬರ್ 27, 2026

ಕೊಡಗಿನ ಸಂಸ್ಕೃತಿಯನ್ನು ನಾಶ ಮಾಡುತ್ತಿದ್ದರೆ ಸಾಕ್ಷ್ಯ ನೀಡಲಿ : ಪ್ರತಾಪ್ ಸಿಂಹ ವಿರುದ್ಧ ಹಿಂದೂ ಮಲಯಾಳಿ ಸಂಘಟನೆಗಳ ಅಸಮಾಧಾನ

ನವೆಂಬರ್ 27, 2026

ಹಿರಿಯ ಪತ್ರಕರ್ತ ಎಂ. ಶ್ರೀಧರ್ ಹೂವಲ್ಲಿ ಅವರಿಗೆ ‘ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರದಾನ

ನವೆಂಬರ್ 27, 2026

ಪ್ರತಾಪ್ ಸಿಂಹ ವಿರುದ್ಧ ಗೋಣಿಕೊಪ್ಪಲು ಪೊಲೀಸ್ ಠಾಣೆಗೆ ದೂರು; ಕಾನೂನು ಕ್ರಮಕ್ಕೆ ಕೊಡಗು ಹಿಂದೂ ಮಲಯಾಳಿ ಸಮಾಜ ಆಗ್ರಹ

ನವೆಂಬರ್ 26, 2026

ಸಿಎನ್‌ಸಿಯಿಂದ ಸಂವಿಧಾನ ದಿನ ಮತ್ತು 36ನೇ ವರ್ಷದ ಕೊಡವ ನ್ಯಾಷನಲ್ ಡೇ ಆಚರಣೆ : ಕೊಡವಲ್ಯಾಂಡ್ ಭೌಗೋಳಿಕ-ರಾಜಕೀಯ ಸ್ವಾಯತ್ತತೆ ಸೇರಿದಂತೆ ವಿವಿಧ ಹಕ್ಕೊತ್ತಾಯಗಳ ಮಂಡನೆ;  ಕೊಡವಲ್ಯಾಂಡ್ ಸ್ವಾಯತ್ತತೆ, ST ಸ್ಥಾನಮಾನ, ಕೊಡವ ತಕ್ಕ್‌ಗೆ ಮಾನ್ಯತೆ ಹಾಗೂ 2027ರ ಜನಗಣತಿಯಲ್ಲಿ ಪ್ರತ್ಯೇಕ ಗುರುತಿಗೆ ಒತ್ತಾಯ

ನವೆಂಬರ್ 26, 2026

ಬಿಜೆಪಿ ಎಸ್.ಸಿ. ಮೋರ್ಚಾದಿಂದ ಸಂವಿಧಾನ ಗೌರವ ದಿವಸ ಆಚರಣೆ; ಸಂವಿಧಾನ ದೇಶದ ಧರ್ಮಗ್ರಂಥವಿದ್ದಂತೆ: ಗಣ್ಯರ ಅಭಿಮತ

ನವೆಂಬರ್ 26, 2026

ಜಿಲ್ಲಾಡಳಿತದಿಂದ ಸಂವಿಧಾನ ದಿನಾಚರಣೆ

ನವೆಂಬರ್ 26, 2026

ಮಡಿಕೇರಿಯಲ್ಲಿ ಸಂಭ್ರಮದ ಪುತ್ತರಿ ಅರಮನೆ ಕೋಲ್; ಕೊಡಗಿನ ಜಾನಪದ ನೃತ್ಯ ವೈಭವಕ್ಕೆ ಸಾಕ್ಷಿಯಾದ ಕೋಟೆ ಆವರಣ

ನವೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.