Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ. 28: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ನಿರಂತರವಾಗಿ ಮುಂದುವರಿದಿದ್ದು, ಅಮಾಯಕರು ಜೀವ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಹೆಚ್ಚಿನ ಸಂಖ್ಯೆಯಲ್ಲಿರುವ ಕಾಡಾನೆಗಳನ್ನು ಜಿಲ್ಲೆಯಿಂದ ತಕ್ಷಣ ಸ್ಥಳಾಂತರಿಸಿ ಜನರ ಜೀವ ರಕ್ಷಣೆಗೆ ಶಾಶ್ವತ ಕ್ರಮ ಕೈಗೊಳ್ಳಬೇಕೆಂದು ಕೊಡಗು ಜಿಲ್ಲಾ ಬಿಜೆಪಿ ಸಾಮಾಜಿಕ ಜಾಲತಾಣದ ಪ್ರಧಾನ ಸಂಚಾಲಕ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗಿನ ಜನವಸತಿ ಪ್ರದೇಶಗಳು, ಕಾಫಿ ತೋಟಗಳು ಹಾಗೂ ಕೃಷಿ ಭೂಮಿಗಳಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿರುವುದರಿಂದ ಜನರು ಆತಂಕದಲ್ಲಿ ಬದುಕುವಂತಾಗಿದೆ. ಕಾಡಾನೆ ದಾಳಿಗೆ ಸರಣಿ ಸಾವುಗಳು ಸಂಭವಿಸುತ್ತಿದ್ದು, ಕೆಲವು ದಿನಗಳ ಹಿಂದೆ ಕಾಫಿ ಬೆಳೆಗಾರರೊಬ್ಬರು ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ಜನರಲ್ಲಿ ಮತ್ತಷ್ಟು ಭಯ ಮೂಡಿಸಿದೆ. ತೋಟಗಳಿಗೆ ತೆರಳಲು ಬೆಳೆಗಾರರು ಹಾಗೂ ಕಾರ್ಮಿಕರು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗುವುದರ ಜೊತೆಗೆ ಬೆಳೆ ನಾಶ, ಆಸ್ತಿ ಹಾನಿ ಹಾಗೂ ಮಾನವ ಜೀವಹಾನಿ ನಿರಂತರವಾಗಿ ಸಂಭವಿಸುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಾಡಾನೆಗಳ ದಾಳಿಯನ್ನು ತಡೆಗಟ್ಟಲು ಅರಣ್ಯ ಇಲಾಖೆ ಕೈಗೊಳ್ಳುತ್ತಿರುವ ಕ್ರಮಗಳು ಸಮರ್ಪಕವಾಗಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಕಾಡಾನೆಗಳ ಚಲನವಲನದ ಕುರಿತು ಮುಂಚಿತವಾಗಿ ಮಾಹಿತಿ ನೀಡುವುದು, ತ್ವರಿತ ಕಾರ್ಯಾಚರಣೆ ನಡೆಸುವುದು ಹಾಗೂ ಅಪಾಯಕಾರಿ ಪ್ರದೇಶಗಳಲ್ಲಿ ಜನರ ಸುರಕ್ಷತೆಗೆ ವಿಶೇಷ ವ್ಯವಸ್ಥೆ ಕಲ್ಪಿಸುವುದು ಅತ್ಯಗತ್ಯವಾಗಿದೆ ಎಂದು ತಿಳಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ, ಜನವಸತಿ ಪ್ರದೇಶಗಳು ಹಾಗೂ ಕೃಷಿ ತೋಟಗಳಲ್ಲಿ ನಿರಂತರವಾಗಿ ಸಂಚರಿಸುತ್ತಿರುವ ಕಾಡಾನೆಗಳನ್ನು ಗುರುತಿಸಿ ಸುರಕ್ಷಿತ ಅರಣ್ಯ ಪ್ರದೇಶಗಳಿಗೆ ಸ್ಥಳಾಂತರಿಸಬೇಕು. ಜನರ ಜೀವಕ್ಕೆ ಅಪಾಯ ಉಂಟುಮಾಡುವ ಕಾಡಾನೆಗಳ ಬಗ್ಗೆ ಅರಣ್ಯ ಇಲಾಖೆ ವಿಶೇಷ ಗಮನಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ, ಇಂತಹ ಘಟನೆಗಳು ಮರುಕಳಿಸದಂತೆ ಶಾಶ್ವತ ಪರಿಹಾರ ರೂಪಿಸಬೇಕು. ಕಾಡಾನೆಗಳ ಸಂಚಾರ ನಿಯಂತ್ರಣಕ್ಕೆ ರೈಲು ಹಳಿ ತಡೆಗೋಡೆ, ಸೋಲಾರ್ ಬೇಲಿ, ಕಂದಕಗಳ ದುರಸ್ತಿ ಹಾಗೂ ತ್ವರಿತ ಪ್ರತಿಕ್ರಿಯಾ ತಂಡಗಳನ್ನು ಬಲಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕೊಡಗಿನಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಬಂದು ತೋಟಗಳು ಹಾಗೂ ಗ್ರಾಮಗಳೊಳಗೆ ಸಂಚರಿಸುತ್ತಿರುವುದರಿಂದ ಬೆಳೆಗಾರರು, ಕೃಷಿ ಕಾರ್ಮಿಕರು ಮತ್ತು ಗ್ರಾಮೀಣ ಜನರು ಪ್ರತಿನಿತ್ಯ ಜೀವಭಯದಲ್ಲೇ ಕೆಲಸ ಮಾಡುವಂತಾಗಿದೆ. ಮಾನವ–ಕಾಡಾನೆ ಸಂಘರ್ಷದ ತೀವ್ರತೆಯನ್ನು ಅಂಕಿ-ಅಂಶಗಳೇ ಸ್ಪಷ್ಟಪಡಿಸುತ್ತಿದ್ದು, ಈ ವರ್ಷವೊಂದರಲ್ಲೇ ಕೊಡಗಿನಲ್ಲಿ ಕಾಡಾನೆ ದಾಳಿಗೆ 9 ಮಂದಿ ಮೃತಪಟ್ಟಿರುವುದು ವರದಿಯಾಗಿದೆ. ಮಾನವ ಜೀವಹಾನಿಯ ಜೊತೆಗೆ ಕಾಡಾನೆಗಳ ಸಾವಿನ ಸಂಖ್ಯೆಯೂ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ವರದಿಯ ಪ್ರಕಾರ, 2014ರಿಂದ 2025ರವರೆಗೆ ಕೊಡಗಿನಲ್ಲಿ ಕಾಡಾನೆ ದಾಳಿಯಿಂದ 70 ಮಾನವ ಜೀವಹಾನಿಗಳು ಸಂಭವಿಸಿವೆ. ಈ ಘಟನೆಗಳಲ್ಲಿ ಶೇ.90ಕ್ಕೂ ಹೆಚ್ಚು ಮಂದಿ ಕಾಡಾನೆಗಳ ಇರುವಿಕೆಯ ಬಗ್ಗೆ ಅರಿವಿಲ್ಲದ ಸಂದರ್ಭದಲ್ಲಿ ದಾಳಿಗೆ ಸಿಲುಕಿರುವುದು ಗಮನಾರ್ಹವಾಗಿದೆ ಎಂದು ಶಿವಕುಮಾರ್ ನಾಣಯ್ಯ ತಿಳಿಸಿದ್ದಾರೆ.

ಜನರ ಜೀವ ರಕ್ಷಣೆಗೆ ಸರ್ಕಾರ ಹಾಗೂ ಅರಣ್ಯ ಇಲಾಖೆ ತಕ್ಷಣ ಕಾರ್ಯಪ್ರವೃತ್ತವಾಗಬೇಕು. ಕಾಡಾನೆ ದಾಳಿಯಿಂದ ಕೊಡಗಿನ ಜನರು ಮತ್ತಷ್ಟು ಬಲಿಯಾಗುವ ಮುನ್ನ ಸೂಕ್ತ ಮತ್ತು ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ. 28: ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ನಿರಂತರವಾಗಿ ಮುಂದುವರಿದಿದ್ದು, ಅಮಾಯಕರು ಜೀವ ಕಳೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ,…

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026

ಕರ್ಣಂಗೇರಿ ಗ್ರಾಮದಲ್ಲಿ ಪ್ರಜಾಸೇವಾ ಕಾರ್ಯಕ್ರಮ; ಶಾಸಕ ಡಾ. ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ, ಭೂಮಿ ಪೂಜೆ ಹಾಗೂ ಕಾಮಗಾರಿಗಳ ಪರಿಶೀಲನೆ

ನವೆಂಬರ್ 28, 2026

ಕೂರ್ಗ್ ಪ್ಲಾಂಟರ್ಸ್ ಅಸೋಸಿಯೇಷನ್‌ನ 147ನೇ ವಾರ್ಷಿಕ ಮಹಾಸಭೆ; ಪಶ್ಚಿಮಘಟ್ಟ ಸಂರಕ್ಷಣೆಯೊಂದಿಗೆ ಸ್ಥಳೀಯರ ಜೀವನವೂ ರಕ್ಷಣೆಯಾಗಬೇಕು: ಸಂಸದ ಯದುವೀರ್ ಒಡೆಯರ್

ನವೆಂಬರ್ 28, 2026

ಆಶಾ ಕಾರ್ಯಕರ್ತೆಯರ ಕುರಿತು ಯು.ಟಿ.ಖಾದರ್ ಹೇಳಿಕೆಗೆ ಚೆಪ್ಪುಡಿರ ರಾಕೇಶ್ ದೇವಯ್ಯ ಖಂಡನೆ

ನವೆಂಬರ್ 28, 2026

ಮಡಿಕೇರಿಯಲ್ಲಿ ಡಿ.4ರಿಂದ 6ರವರೆಗೆ 5ನೇ ವರ್ಷದ ಕೊಡವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿ; 12 ತಂಡಗಳ ನಡುವೆ ರೋಚಕ ಹಣಾಹಣಿ; ಪ್ರಥಮ ಬಹುಮಾನ ₹2 ಲಕ್ಷ, ಸುಮಾರು 250 ಆಟಗಾರರು ಭಾಗಿ

ನವೆಂಬರ್ 28, 2026

ಸಮಾಜಘಾತುಕ ಶಕ್ತಿಗಳ ಬಗ್ಗೆ ಮಾತನಾಡಿದ್ದೇನೆ, ಮಲಯಾಳಿ ಸಮುದಾಯವನ್ನು ಗುರಿ ಮಾಡಿಲ್ಲ : ಪ್ರತಾಪ್ ಸಿಂಹ ಸ್ಪಷ್ಟನೆ

ನವೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.