Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ

ನವೆಂಬರ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಮಡಿಕೇರಿ, NEWS DESK ನ.29: ಕ್ರೀಡೆ, ಸೇನೆ, ಕಾಫಿ ಹಾಗೂ ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸಾಧನೆ ಮಾಡಿರುವ ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಕಲ್ಪಿಸಬೇಕೆಂದು ಸಮಾಜ ಸೇವಕ ಅವರೆಮಾದಂಡ ಶರಣ್ ಪೂಣಚ್ಚ ಮನವಿ ಮಾಡಿದ್ದಾರೆ.

ಪ್ರಸ್ತಾವಿತ ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಪ್ರಕ್ರಿಯೆಯಡಿ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಸಂಖ್ಯೆ 28ರಿಂದ 42ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ. ಈ ಸಂದರ್ಭದಲ್ಲಿ ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೊಡಗು ಜಿಲ್ಲೆಯು ತನ್ನದೇ ಆದ ವಿಶಿಷ್ಟ ಸಂಸ್ಕೃತಿ, ಭೌಗೋಳಿಕ ಪರಿಸರ ಹಾಗೂ ವೈಶಿಷ್ಟ್ಯಗಳನ್ನು ಹೊಂದಿದೆ. ಗುಡ್ಡಗಾಡು ಪ್ರದೇಶವಾಗಿರುವ ಜಿಲ್ಲೆಯಲ್ಲಿ ಹಲವು ಸ್ಥಳೀಯ ಸಮಸ್ಯೆಗಳಿದ್ದು, ಪ್ರತ್ಯೇಕ ಸಂಸದರನ್ನು ಹೊಂದುವುದರಿಂದ ಈ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪರಿಣಾಮಕಾರಿಯಾಗಿ ಪ್ರಸ್ತಾಪಿಸಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರೆತರೆ ಜಿಲ್ಲೆಯ ಸಂಸದರಿಗೆ ವಿಶೇಷ ಜವಾಬ್ದಾರಿ ಹಾಗೂ ಗೌರವ ದೊರೆಯಲಿದೆ. ಸಂಸದರ ಮೂಲಕ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳು ಮತ್ತು ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ತರುವ ಅವಕಾಶವೂ ಹೆಚ್ಚಲಿದೆ. ಅಲ್ಲದೆ, ಸ್ಥಳೀಯ ಜನರಿಗೆ ತಮ್ಮ ಸಮಸ್ಯೆಗಳನ್ನು ಸಂಸದರ ಗಮನಕ್ಕೆ ತರಲು ಸುಲಭವಾಗಲಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯವರೇ ಸಂಸತ್ ಸದಸ್ಯರಾಗಿ ಆಯ್ಕೆಯಾದರೆ ಸ್ಥಳೀಯ ಶಾಸಕರೊಂದಿಗೆ ಉತ್ತಮ ಸಮನ್ವಯ ಸಾಧಿಸಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಸಹಕಾರದೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗಂಭೀರ ಸಮಸ್ಯೆಯಾಗಿ ಉಳಿದಿರುವ ಮಾನವ-ಆನೆ ಸಂಘರ್ಷಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಕೇಂದ್ರ ಸರ್ಕಾರದ ಪಾತ್ರ ಮಹತ್ವದ್ದಾಗಿದೆ. ಕೊಡಗಿನ ಸಂಸದರು ಈ ವಿಚಾರವನ್ನು ಸಂಸತ್ತಿನಲ್ಲಿ ಪ್ರತ್ಯೇಕವಾಗಿ ಪ್ರಸ್ತಾಪಿಸಿ, ಕೇಂದ್ರದ ಗಮನ ಸೆಳೆಯುವುದರಿಂದ ಸಮಸ್ಯೆ ಪರಿಹಾರಕ್ಕೆ ವೇಗ ದೊರೆಯಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೊಡಗಿನ ಪ್ರಮುಖ ವಾಣಿಜ್ಯ ಬೆಳೆಗಳಾದ ಕಾಫಿ ಮತ್ತು ಕಾಳುಮೆಣಸು ಬೆಳೆಗಾರರು ಬೆಲೆ ಕುಸಿತ, ಹವಾಮಾನ ವೈಪರೀತ್ಯ ಹಾಗೂ ಕಾಡಾನೆ ಹಾವಳಿ ಸೇರಿದಂತೆ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳ ಪರಿಹಾರಕ್ಕಾಗಿ ಸಂಸದರ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯಲು ಹಾಗೂ ನಿಯೋಗ ತೆರಳಲು ಪ್ರತ್ಯೇಕ ಸಂಸದೀಯ ಕ್ಷೇತ್ರ ಸಹಕಾರಿಯಾಗಲಿದೆ ಎಂದು ತಿಳಿಸಿದ್ದಾರೆ.

ಪ್ರವಾಸೋದ್ಯಮ ಕ್ಷೇತ್ರದಲ್ಲಿಯೂ ಕೊಡಗು ದೇಶದ ಪ್ರಮುಖ ಪ್ರವಾಸಿ ತಾಣವಾಗಿ ಗುರುತಿಸಿಕೊಂಡಿದೆ. ಭಾರತದ ಸ್ಕಾಟ್ಲೆಂಡ್ ಹಾಗೂ ಕರ್ನಾಟಕದ ಕಾಶ್ಮೀರ ಎಂದೇ ಪ್ರಸಿದ್ಧವಾಗಿರುವ ಕೊಡಗಿನ ಪ್ರವಾಸೋದ್ಯಮ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಅನುದಾನ ಮತ್ತು ವಿಶೇಷ ಯೋಜನೆಗಳ ಅಗತ್ಯವಿದೆ. ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರೆತರೆ ಈ ನಿಟ್ಟಿನಲ್ಲಿ ಹೆಚ್ಚಿನ ಪ್ರಯತ್ನ ನಡೆಸಲು ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ.

ಕ್ರೀಡಾ ಕ್ಷೇತ್ರದಲ್ಲಿಯೂ ಕೊಡಗು ಅಪಾರ ಸಾಧನೆ ಮಾಡಿದ್ದು, ಹಲವು ಒಲಿಂಪಿಯನ್‌ಗಳನ್ನು ದೇಶಕ್ಕೆ ಕೊಡುಗೆಯಾಗಿ ನೀಡಿದೆ. ಜಿಲ್ಲೆಯ ಕ್ರೀಡಾ ಪ್ರತಿಭೆಗಳಿಗೆ ಹೆಚ್ಚಿನ ಪ್ರೋತ್ಸಾಹ, ಮೂಲಸೌಕರ್ಯ ಹಾಗೂ ಕೇಂದ್ರ ಸರ್ಕಾರದ ಅನುದಾನ ದೊರಕಿಸುವ ನಿಟ್ಟಿನಲ್ಲಿಯೂ ಪ್ರತ್ಯೇಕ ಸಂಸದೀಯ ಕ್ಷೇತ್ರ ಸಹಕಾರಿಯಾಗಲಿದೆ. ಈ ಎಲ್ಲ ಕಾರಣಗಳಿಂದ ಕೊಡಗು ಜಿಲ್ಲೆಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ಕಲ್ಪಿಸುವುದು ಅಗತ್ಯವಾಗಿದೆ ಎಂದು ಶರಣ್ ಪೂಣಚ್ಚ ಮನವಿ ಮಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ನ.29: ಕೊಡಗು ಜಿಲ್ಲೆಯಲ್ಲಿ ಅನೇಕ ಸಣ್ಣ ಭಾಷಿಕ ಸಮುದಾಯಗಳಿದ್ದು, ಅವುಗಳಲ್ಲಿ ಅರೆಭಾಷೆಯೂ ಪ್ರಮುಖ ಸ್ಥಾನ ಹೊಂದಿದೆ.…

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಕ್ಕಳ ಮನೆಗೆ ವಿಶೇಷ ಸೇವಾ ಕಾರ್ಯಕ್ರಮ

ನವೆಂಬರ್ 28, 2026

ವಾಸವಿ ಅಚೀವರ್ಸ್ ಅವಾರ್ಡ್ 2026ಕ್ಕೆ ಬಿ.ಆರ್. ನಾಗೇಂದ್ರ ಪ್ರಸಾದ್ ಆಯ್ಕೆ; ಆರ್ಯವೈಶ್ಯ ಮಂಡಳಿ ಅಧ್ಯಕ್ಷರಿಗೆ ಗೌರವದ ಗರಿ

ನವೆಂಬರ್ 28, 2026

ಕ.ರ.ವೇ. ಸ್ವಾಭಿಮಾನಿ ಸೇನೆಯ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ಅವರಿಗೆ ಗೋವರ್ಧನ ಗೋಪಾಲ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ; ನಾಡು-ನುಡಿ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ ಗೌರವ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.