ಸುಂಟಿಕೊಪ್ಪ, NEWS DESK ನ.29: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್, ಮಡಿಕೇರಿ ತಾಲೂಕು, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸುಂಟಿಕೊಪ್ಪ ವಲಯ ಹಾಗೂ ಸ್ವಸಹಾಯ ಸಂಘಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟದ ಪದಗ್ರಹಣ ಕಾರ್ಯಕ್ರಮ ನ.30ರಂದು (ಸೋಮವಾರ) ಸುಂಟಿಕೊಪ್ಪದ ಮಂಜನಾಥಯ್ಯ ಮೀನಾಕ್ಷಮ್ಮ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಉದ್ಘಾಟಿಸಲಿದ್ದು, ಸುಂಟಿಕೊಪ್ಪ ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಅಧ್ಯಕ್ಷೆ ಲೀಲಾ ಮೇದಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಪ್ರವಚನ ಹಾಗೂ ಆಶೀರ್ವಚನವನ್ನು ಕೊಡಗಿನ ಭಾರತ ಭಾವೈಕ್ಯ ಕೇಂದ್ರದ ಸ್ವಾಮಿ ಸೋಮನಾಥ ನಂದಾಪುರಿ ನೀಡಲಿದ್ದಾರೆ. ದಾಖಲಾತಿ ಹಸ್ತಾಂತರವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ವಿಠಲ ಸಾಲಿಯಾನ್ ನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶ್ರೀರಾಮ ಸೇವಾ ಸಮಿತಿಯ ಅಧ್ಯಕ್ಷ ಎಸ್.ಬಿ. ಶಂಕರ್, ಅಮೃತ ಕಾಫಿ ಕ್ಯೂರಿಂಗ್ ವರ್ಕ್ಸ್ ಮಾಲೀಕ ಸುಂದರರಾಮಸ್ವಾಮಿ ಹಾಗೂ ಕೃಷಿಕ ರಾಮ್ ಗೌತಮ್ ಪಾಲ್ಗೊಳ್ಳಲಿದ್ದಾರೆ.
ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿಯ ಗೌರವಾಧ್ಯಕ್ಷ ಡಿ. ನರಸಿಂಹ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪುರುಷೋತ್ತಮ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
















