Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಸಂತ ಮೇರಿ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸಂತ ಮೇರಿ ಶಿಕ್ಷಣ ಸಂಸ್ಥೆಯಲ್ಲಿ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭ

ನವೆಂಬರ್ 29, 20262 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಸುಂಟಿಕೊಪ್ಪ, NEWS DESK ನ.29: ಯಾವುದೇ ಕ್ರೀಡೆಯಲ್ಲಿ ರಾಷ್ಟ್ರವನ್ನು ಪ್ರತಿನಿಧಿಸಬೇಕಾದರೆ ತಳಮಟ್ಟದಿಂದಲೇ ತರಬೇತಿ, ಸತತ ಪ್ರಯತ್ನ ಮತ್ತು ಪರಿಶ್ರಮ ಅಗತ್ಯ ಎಂದು ಅಂತರರಾಷ್ಟ್ರೀಯ ಮಾಜಿ ರಗ್ಬಿ ಆಟಗಾರ ಹಾಗೂ ತರಬೇತುದಾರ ಮಾದಂಡ ತಿಮ್ಮಯ್ಯ ಅಭಿಪ್ರಾಯಪಟ್ಟರು.

ಶನಿವಾರ ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯಲ್ಲಿ ನಡೆದ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಕ್ರೀಡೆಯು ದೈಹಿಕ ಮತ್ತು ಮಾನಸಿಕ ಸ್ಥೈರ್ಯವನ್ನು ನೀಡುವುದರ ಜೊತೆಗೆ ಜೀವನದ ಸವಾಲುಗಳನ್ನು ಎದುರಿಸುವ ಶಕ್ತಿಯನ್ನೂ ಒದಗಿಸುತ್ತದೆ. ಪೋಷಕರು ತಮ್ಮ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ, ಅದನ್ನು ಬೆಳೆಸಲು ಅಗತ್ಯವಿರುವ ಎಲ್ಲ ರೀತಿಯ ಅವಕಾಶ ಮತ್ತು ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಕರೆ ನೀಡಿದರು.

ತಮ್ಮ ತಂದೆಯೇ ತನಗೆ ಸ್ಫೂರ್ತಿಯಾಗಿದ್ದು, ತಮ್ಮಲ್ಲಿದ್ದ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಮಾರ್ಗದರ್ಶನ ನೀಡಿದ ಪರಿಣಾಮ ಇಂದು ಈ ಹಂತಕ್ಕೆ ತಲುಪಲು ಸಾಧ್ಯವಾಗಿದೆ ಎಂದು ಸ್ಮರಿಸಿದರು. ಮಕ್ಕಳ ಮೇಲೆ ಹೆಚ್ಚಿನ ಒತ್ತಡ ಹೇರದೆ ಅವರ ಪ್ರತಿಭೆಗೆ ಪ್ರೋತ್ಸಾಹ ಮತ್ತು ಮನ್ನಣೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ಕ್ರೀಡಾ ಕ್ಷೇತ್ರದಲ್ಲಿ ವೈಯಕ್ತಿಕ ಹಾಗೂ ತಂಡದ ವಿಭಾಗಗಳಲ್ಲಿ ಉತ್ತಮ ಸಾಧನೆ ಮಾಡಿ ಮೊದಲ ನಾಲ್ಕು ಸ್ಥಾನಗಳೊಳಗೆ ಗುರುತಿಸಿಕೊಳ್ಳುವ ಗುರಿ ಹೊಂದಿರಬೇಕು. ಇದು ಕ್ರೀಡಾ ಜೀವನದಲ್ಲಿ ಯಶಸ್ಸು ಸಾಧಿಸಲು ಉತ್ತಮ ಮಾರ್ಗವಾಗಿದೆ ಎಂದರು.

ಸಂತ ಮೇರಿ ಸಂಯುಕ್ತ ಶಿಕ್ಷಣ ಸಂಸ್ಥೆಯ ಮಕ್ಕಳ ಶೈಕ್ಷಣಿಕ ಹಾಗೂ ಕ್ರೀಡಾ ಸಾಧನೆಗಳನ್ನು ಶ್ಲಾಘಿಸಿದ ಅವರು, ಇದಕ್ಕಾಗಿ ಶಿಕ್ಷಕರು ಮತ್ತು ಪೋಷಕರನ್ನು ಅಭಿನಂದಿಸಿದರು.

ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಬೆಂಗಳೂರು ಟರ್ಫ್ ಕ್ಲಬ್‌ನ ಮಾಜಿ ಅಧ್ಯಕ್ಷ ಹಾಗೂ ಬೆಟ್ಟಗೇರಿ ಸಮೂಹ ತೋಟಗಳ ಮಾಲೀಕ ಡಿ.ವಿನೋದ್ ಶಿವಪ್ಪ ಅವರು, ಕ್ರೀಡೆಯಲ್ಲಿ ಭಾಗವಹಿಸುವುದೇ ವಿಶೇಷ. ಸೋಲು-ಗೆಲುವಿನ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಕ್ರೀಡಾ ಮನೋಭಾವದಿಂದ ಪಾಲ್ಗೊಳ್ಳಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ತಮ್ಮ ಕ್ರೀಡಾ ಜೀವನದ ಅನುಭವಗಳನ್ನು ಮೆಲುಕು ಹಾಕಿದರು.

ಸಂತ ಮೇರಿ ಶಿಕ್ಷಣ ಸಂಸ್ಥೆಯ ಬೆಳವಣಿಗೆಯಲ್ಲಿ ತಮ್ಮ ಕುಟುಂಬ ನೀಡಿದ ಕೊಡುಗೆಯನ್ನು ಸ್ಮರಿಸಿದ ಅವರು, ಸಂಸ್ಥೆಯು ಇಂದು ಹೆಮ್ಮರವಾಗಿ ಬೆಳೆದಿರುವುದಕ್ಕೆ ಅಪಾರ ಸಂತಸ ವ್ಯಕ್ತಪಡಿಸಿದರು. ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ತಲಾ ₹5 ಸಾವಿರ ನಗದು ಬಹುಮಾನ ನೀಡುವುದಾಗಿ ಘೋಷಿಸಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂತ ಮೇರಿ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕರಾದ ರೇ. ಫಾ. ವಿಜಯಕುಮಾರ್ ಮಾತನಾಡಿ, ಮಕ್ಕಳನ್ನು ಚೆನ್ನಾಗಿ ಬೆಳೆಸುವುದಷ್ಟೇ ಪೋಷಕರ ಜವಾಬ್ದಾರಿಯಲ್ಲ; ಅವರಲ್ಲಿ ಉತ್ತಮ ವ್ಯಕ್ತಿತ್ವವನ್ನು ರೂಪಿಸುವುದೂ ಅಷ್ಟೇ ಮುಖ್ಯ ಎಂದರು.

ಯಾವುದೇ ಕ್ಷೇತ್ರದಲ್ಲಿ ಸಾಧನೆ ಮಾಡುವುದು ಸುಲಭವಲ್ಲ. ಯಶಸ್ಸು ಗಳಿಸಲು ಪರಿಶ್ರಮದ ಹಾದಿಯಲ್ಲಿ ಮುನ್ನಡೆಯಬೇಕು. ಗುರಿ ಸಾಧನೆಗಾಗಿ ಎಷ್ಟು ಶ್ರಮಿಸಿದ್ದೀರಿ ಎಂಬುದಕ್ಕಿಂತ ಸಾಧನೆಯ ಫಲಿತಾಂಶದ ಮೂಲಕವೇ ಜಗತ್ತು ನಿಮ್ಮನ್ನು ಗುರುತಿಸುತ್ತದೆ ಎಂದು ಹೇಳಿದರು.

ವೇದಿಕೆಯಲ್ಲಿ ಸಂತ ಅಂತೋಣಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಜೋವಿಟಾ ವಾಸ್ ಹಾಗೂ ಸಂತ ಮೇರಿ ಸಂಯುಕ್ತ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲ ಸೆಲ್ವರಾಜ್ ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಶಾಲೆಯ ಎನ್‌ಸಿಸಿ ವಿದ್ಯಾರ್ಥಿಗಳು ಅತಿಥಿಗಳಿಗೆ ಪಥಸಂಚಲನದ ಮೂಲಕ ಗೌರವ ವಂದನೆ ಸಲ್ಲಿಸಿದರು. ಬಳಿಕ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಕ್ರೀಡಾಜ್ಯೋತಿ ಬೆಳಗಿಸಲಾಯಿತು.

ಸಂತ ಮೇರಿ ಸಂಯುಕ್ತ ವಿದ್ಯಾಸಂಸ್ಥೆಯ ಕ್ರೀಡಾ ವಾರ್ಷಿಕೋತ್ಸವ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಕ್ಕಳ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದ ಪೋಷಕರು ಮತ್ತು ಸಾರ್ವಜನಿಕರ ಮನಸೂರೆಗೊಂಡವು.

ಈ ಸಂದರ್ಭದಲ್ಲಿ ಮಾದಂಡ ತಿಮ್ಮಯ್ಯ ಮತ್ತು ಡಿ.ವಿನೋದ್ ಶಿವಪ್ಪ ಅವರನ್ನು ಶಿಕ್ಷಣ ಸಂಸ್ಥೆಯ ವತಿಯಿಂದ ರೇ. ಫಾ. ವಿಜಯಕುಮಾರ್ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

ಕುಶಾಲನಗರದಲ್ಲಿ ಬಸವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಆರಂಭ; ಕಳಸ ಮೆರವಣಿಗೆ, ಧಾರ್ಮಿಕ ಕೈಂಕರ್ಯಗಳಿಗೆ ಚಾಲನೆ

ನವೆಂಬರ್ 29, 2026

ಸುಂಟಿಕೊಪ್ಪದಲ್ಲಿ ನ.30ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ

ನವೆಂಬರ್ 29, 2026

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ

ನವೆಂಬರ್ 29, 2026

ಕುಶಾಲನಗರದಲ್ಲಿ ಬಸವೇಶ್ವರ ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ ಆರಂಭ; ಕಳಸ ಮೆರವಣಿಗೆ, ಧಾರ್ಮಿಕ ಕೈಂಕರ್ಯಗಳಿಗೆ ಚಾಲನೆ

ನವೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ, NEWS DESK ನ.29: ಕುಶಾಲನಗರ ಪಟ್ಟಣದ ನಂಜುಂಡೇಶ್ವರ ಬಡಾವಣೆಯಲ್ಲಿ ದಾನಿಗಳು ನೀಡಿರುವ ಜಾಗದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಬಸವೇಶ್ವರ…

ಸುಂಟಿಕೊಪ್ಪದಲ್ಲಿ ನ.30ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ಕಾರ್ಯಕ್ರಮ

ನವೆಂಬರ್ 29, 2026

ಕೊಡಗಿಗೆ ಪ್ರತ್ಯೇಕ ಲೋಕಸಭಾ ಕ್ಷೇತ್ರ ದೊರಕಬೇಕು : ಶರಣ್ ಪೂಣಚ್ಚ ಮನವಿ

ನವೆಂಬರ್ 29, 2026

ಚೆಂಬು ಗ್ರಾಮದಲ್ಲಿ 3ನೇ ಅರೆಭಾಷೆ ಸಾಹಿತ್ಯ ಸಮ್ಮೇಳನ; ಸಣ್ಣ ಭಾಷೆಗಳನ್ನು ಉಳಿಸಿ, ಬೆಳೆಸಲು ಶ್ರಮಿಸಿ: ಎ.ಎಸ್. ಪೊನ್ನಣ್ಣ ಕರೆ

ನವೆಂಬರ್ 29, 2026

ಹಳೇ ವಿದ್ಯಾರ್ಥಿ ಸಂಘದ ಮಹಾಸಭೆ ಮತ್ತು ಸಂತೋಷ ಕೂಟ ಸಮಾರಂಭ | 53 ವಿದ್ಯಾರ್ಥಿಗಳಿಗೆ ಸನ್ಮಾನ; ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಅಭಿವೃದ್ಧಿಗೆ ಹಳೇ ವಿದ್ಯಾರ್ಥಿಗಳು ಕೈಜೋಡಿಸಿ: ಕೆ.ಎ. ಶಶಿಕಿರಣ್

ನವೆಂಬರ್ 29, 2026

ಪ್ರತಾಪ್ ಸಿಂಹ ಹೇಳಿಕೆಗೆ ಸಿಪಿಐ(ಎಂ) ತೀವ್ರ ಖಂಡನೆ; ಮಲಯಾಳಿ ಸಮುದಾಯದ ವಿರುದ್ಧದ ಹೇಳಿಕೆ ಹಿಂಪಡೆಯಲು ಆಗ್ರಹ

ನವೆಂಬರ್ 28, 2026

ಕಳ್ಳಿರ ಬಾಣೆ ಮಂದ್‌ನಲ್ಲಿ ಸಂಭ್ರಮದ ಪುತ್ತರಿ ಕೋಲ್: ಕೊಡವ ಸಂಸ್ಕೃತಿ, ಸಾಂಪ್ರದಾಯಿಕ ಕಲೆಗಳ ಅನಾವರಣ

ನವೆಂಬರ್ 28, 2026

ಕಾರುಗುಂದದಲ್ಲಿ ನ.30ರಂದು ರೈತರ ಹಿತರಕ್ಷಣೆ ಕುರಿತು ತುರ್ತು ಸಭೆ

ನವೆಂಬರ್ 28, 2026

ಕಾಡಾನೆ ದಾಳಿಯಿಂದ ಸರಣಿ ಸಾವು: ಕಾಡಾನೆಗಳ ಸ್ಥಳಾಂತರಕ್ಕೆ ತೇಲಪಂಡ ಶಿವಕುಮಾರ್ ನಾಣಯ್ಯ ಒತ್ತಾಯ

ನವೆಂಬರ್ 28, 2026

ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ₹1 ಕೋಟಿ ಅನುದಾನಕ್ಕೆ ಮನವಿ

ನವೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.