ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4692ಕ್ಕೆ ಏರಿಕೆ

October 24, 2020

ಮಡಿಕೇರಿ ಅ. 24 : ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ 8 ಗಂಟೆ ವೇಳೆಗೆ 37 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
33 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 04 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 22 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 20 ಆರ್.ಟಿ.ಪಿ.ಸಿ.ಆರ್ ಮತ್ತು 02 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಆರ್.ಟಿ.ಪಿ.ಸಿ.ಆರ್ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 1 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4692 ಆಗಿದ್ದು, 4226 ಮಂದಿ ಗುಣಮುಖರಾಗಿದ್ದಾರೆ. 401
ಸಕ್ರಿಯ ಪ್ರಕರಣಗಳಿದ್ದು, 65 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 280 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!