ಕೋವಿಡ್ ಅಟ್ಟಹಾಸ ಕೊಂಚ ಕಡಿಮೆ

October 24, 2020

ಬೆಂಗಳೂರು ಅ.24 : ರಾಜ್ಯದಲ್ಲಿ ಕೊರೋನಾ ವೈರಸ್ ಅಟ್ಟಹಾಸ ಕೊಂಚ ಕಡಿಮೆಯಾಗುತ್ತಿದ್ದು ಶುಕ್ರವಾರ 5,356 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 7,93,907ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 51 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 10,821ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇಂದು ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 2,688 ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸಿಲಿಕಾನ್ ಸಿಟಿಯ ಸೋಂಕಿತರ ಸಂಖ್ಯೆ 3,21,054ಕ್ಕೆ ಏರಿಕೆಯಾಗಿದೆ. ನಗರದಲ್ಲಿ ಇಂದು 21 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ.
ಇಂದು 8,749 ಮಂದಿ ಆಸ್ಪತ್ಪೆಯಿಂದ ಡಿಸ್ಚಾರ್ಜ್ ಆಗಿದ್ದು, ಗುಣಮುಖರಾದವರ ಸಂಖ್ಯೆ 6,93,584ಕ್ಕೆ ಏರಿಕೆಯಾಗಿದೆ. 89,483 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಪೈಕಿ 936 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.