ಸಂತ್ರಸ್ತರಿಗೆ 10,000 ಕೋಟಿ ನೆರವು

24/10/2020

ಮುಂಬೈ ಅ.24 : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರೈತರು ಸೇರಿದಂತೆ ರಾಜ್ಯದ ಪ್ರವಾಹ ಪೀಡಿತ ಜನರಿಗೆ 10,000 ಕೋಟಿ ರೂ. ನೆರವು ಘೋಷಿಸಿದ್ದಾರೆ.
ಈ ಸಂಬಂಧ ಮಹಾ ವಿಕಾಸ್ ಅಘಾಡಿ(ಎಂವಿಎ)ಯ ಪ್ರಮುಖ ನಾಯಕರೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಠಾಕ್ರೆ, ದೀಪಾವಳಿಯಿಂದ ಈ ನೆರವು ನೀಡಲಾಗುವುದು ಎಂದು ಹೇಳಿದರು.
ಮಹಾರಾಷ್ಟ್ರ ಸರ್ಕಾರವು ಇನ್ನೂ 38,000 ಕೋಟಿ ರೂಪಾಯಿಯನ್ನು ಕೇಂದ್ರದಿಂದ ಪಡೆಯಬೇಕಾಗಿದೆ ಎಂದು ಠಾಕ್ರೆ ಹೇಳಿದ್ದಾರೆ.
“ನಾನು ಈ ಹಣಕಾಸಿನ ನೆರವಿಗೆ ಪ್ಯಾಕೇಜ್ ಎಂಬ ಪದ ಬಳಸಲು ಇಷ್ಟಪಡುವುದಿಲ್ಲ, ಆದರೆ ನಾವು 10,000 ಕೋಟಿ ರೂಪಾಯಿಗಳ ಸಹಾಯವನ್ನು ನೀಡುತ್ತೇವೆ. ಇದನ್ನು ವಿವಿಧ ಉದ್ದೇಶಗಳಿಗಾಗಿ ಬಳಸಲಾಗುತ್ತದೆ” ಎಂದು ಮಹಾ ಸಿಎಂ ತಿಳಿಸಿದರು.