ವಿರಾಜಪೇಟೆಯಲ್ಲಿ ಪೊಲೀಸರಿಂದ ಕೋವಿಡ್ ಜನ ಜಾಗೃತಿ ಕಾರ್ಯಕ್ರಮ

24/10/2020

ಮಡಿಕೇರಿ ಅ. 24 : ವಿರಾಜಪೇಟೆ ನಗರ ಪೊಲೀಸ್ ಠಾಣೆಯ ವತಿಯಿಂದ ವಿರಾಜಪೇಟೆ ನಗರದಲ್ಲಿ ಕೋವಿಡ್ ಜನ ಜಾಗೃತಿ ಕಾರ್ಯಕ್ರಮ ನಡೆಯಿತು.
ಸಾರ್ವಜನಿಕರು ಮನೆಯಿಂದ ಹೊರ ಬರುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಕೋವಿಡ್‍ನಿಂದ ಪರಾಗುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ವಿರಾಜಪೇಟೆ ನಗರ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಪಾಲ್ಗೊಂಡಿದ್ದರು.