ಕೊಡಗಿನಲ್ಲಿ ಕೋವಿಡ್ : ಸಾವಿನ ಸಂಖ್ಯೆ 66 : ನಿಯಂತ್ರಿತ ಪ್ರದೇಶಗಳು : 280

24/10/2020

ಮಡಿಕೇರಿ ಅ.24 : ಜಿಲ್ಲೆಯಲ್ಲಿ ಸೋಂಕು ದೃಢಪಟ್ಟ ಪ್ರಕರಣಗಳ ಪ್ರಾಥಮಿಕ/ದ್ವಿತೀಯ ಸಂಪರ್ಕದ ಜನರು  ಸಂಪರ್ಕ ತಡೆಯಲ್ಲಿರುವ ಒಟ್ಟು ಜನರು:23457
ಪ್ರಯೋಗಾಲಯ ಪರೀಕ್ಷಾ ವರದಿ ವಿವರ:
ಇಲ್ಲಿಯವರೆಗೆ ಒಟ್ಟು 66447 ಗಂಟಲು ದ್ರವ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ. • ಪಾಸಿಟಿವ್ ಪ್ರಕರಣಗಳು-4692• ನೆಗೆಟಿವ್ ವರದಿ ಬಂದ ಪ್ರಕರಣಗಳು-61282• ವರದಿ ನಿರೀಕ್ಷಿತ ಪ್ರಕರಣಗಳು-473. ಮೃತಪಟ್ಟ ಪ್ರಕರಣಗಳು-66
ದಾಖಲಿರುವ ಪ್ರಕರಣಗಳು:
 ಕೋವಿಡ್ ಆಸ್ಪತ್ರೆ :72ಕೋವಿಡ್ ಕೇರ್ ಸೆಂಟರ್ :28ಹೋಂ ಐಸೋಲೇಶನ್ :191
ಇತರೆ ವಿಷಯಗಳು: 
ಕೊಡಗು ಜಿಲ್ಲೆಯಲ್ಲಿ ಈ ದಿನ ಹೊಸದಾಗಿ  37 ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಹೊಸದಾಗಿ ಈ ದಿನ  15  ನಿಯಂತ್ರಿತ ಪ್ರದೇಶವನ್ನು ತೆರೆಯಲಾಗಿದೆ.  ಈ ಹಿಂದೆ ತೆರೆಯಲಾಗಿದ್ದ ನಿಯಂತ್ರಿತ ಪ್ರದೇಶಗಳ ಪೈಕಿ  25 ಪ್ರದೇಶವನ್ನು  ಸಾರ್ವಜನಿಕರಿಗೆ ಮುಕ್ತಗೊಳಿಸಲಾಗಿದೆ.  
ಕೊಡಗು ಜಿಲ್ಲೆಯಲ್ಲಿ ಈ ದಿನ ಕೋವಿಡ್ ಸೋಂಕಿನಿಂದ ಮತ್ತೊಂದು ಸಾವು ವರದಿಯಾಗಿದ್ದು, ಮಡಿಕೇರಿ ತಾಲ್ಲೂಕು ಕುಂಜಿಲಗೇರಿ ಗ್ರಾಮದ 87 ವರ್ಷದ ಪುರುಷರೊಬ್ಬರು ಮೃತರಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಮೃತರಾದವರ ಸಂಖ್ಯೆ:66 ಕ್ಕೇರಿದೆ.
ಈ ದಿನ 109 ಪ್ರಕರಣಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿರುತ್ತವೆ. 
ಘೋಷ್ವಾರೆ
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ:4692ಆಸ್ಪತ್ರೆಯಿಂದ ಬಿಡುಗಡೆಗೊಂಡ ಪ್ರಕರಣಗಳ ಸಂಖ್ಯೆ:4335ಮೃತರ ಸಂಖ್ಯೆ: 66ಸಕ್ರಿಯ ಪ್ರಕರಣಗಳ ಸಂಖ್ಯೆ:291ಜಿಲ್ಲೆಯಲ್ಲಿರುವ ನಿಯಂತ್ರಿತ ಪ್ರದೇಶಗಳ ಸಂಖ್ಯೆ: 280