ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 4802ಕ್ಕೆ ಏರಿಕೆ

October 27, 2020

ಮಡಿಕೇರಿ ಅ. 27 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 29 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
26 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 14 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 9 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 2 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4802 ಆಗಿದ್ದು, 4476 ಮಂದಿ ಗುಣಮುಖರಾಗಿದ್ದಾರೆ. 259
ಸಕ್ರಿಯ ಪ್ರಕರಣಗಳಿದ್ದು, 67 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 229 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!