ಎನ್‍ಡಿಎ ಮೈತ್ರಿಕೂಟಕ್ಕೆ ಭರ್ಜರಿ ಜಯ

27/10/2020

ಪಾಟ್ನಾ ಅ.27 : ಬಿಹಾರ ವಿಧಾನಸಭೆಗೆ ಮೊದಲ ಹಂತದ ಮತದಾನ ಅ.28 ರಂದು ನಡೆಯಲಿದ್ದು, ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿವೆ. ಈ ಮಧ್ಯೆ ಚುನಾವಣಾ ಪೂರ್ವ ನಡೆಸಿದ ಸಮೀಕ್ಷೆ ಹೊರಬಿದ್ದಿದ್ದು, ಎನ್‍ಡಿಎ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ ಎಂದು ಸಿ-ವೋಟರ್ ಸಮೀಕ್ಷೆ ಹೇಳಿದೆ ಕೊರೊನಾ ಬಿಕ್ಕಟ್ಟಿನಲ್ಲಿ ನಡೆಯುತ್ತಿರುವ ಮೊದಲ ವಿಧಾನಸಭೆ ಚುನಾವಣೆಯಾಗಿದ್ದು, ಬಿಹಾರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರಲು ನಿತೀಶ್ ಕುಮಾರ್ ಹರಸಾಹಸ ಪಡುತ್ತಿದ್ದಾರೆ.
ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷಕ್ಕೆ ಬಿಜೆಪಿ ಸಾಥ್ ನೀಡಿದೆ. ಬಿಜೆಪಿ – ಜೆಡಿಯು ಪಕ್ಷಗಳು ಸಮನಾಗಿ ಸೀಟು ಹಂಚಿಕೊಂಡು ಅಖಾಡಕ್ಕಿಳಿದಿವೆ. ಆರ್ ಜೆಡಿ, ಕಾಂಗ್ರೆಸ್, ಎಡಪಕ್ಷಗಳ ಮೈತ್ರಿ ಒಟ್ಟಾಗಿ ಹೋರಾಟಕ್ಕಿಳಿದೆ.