ಅ.31 ರಂದು ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಸಂಸ್ಮರಣೆ

ಮಡಿಕೇರಿ ಅ.27 : ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಹುತಾತ್ಮ ದಿನಾಚರಣೆಯು ಅಕ್ಟೋಬರ್, 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿನ ಗುಡ್ಡಮನೆ ಅಪ್ಪಯ್ಯ ಗೌಡ ಸ್ಮಾರಕದಲ್ಲಿ ಪುಷ್ಪ ನಮನ ಸಲ್ಲಿಸುವ ಕಾರ್ಯಕ್ರಮ ನಡೆಯಲಿದೆ.
ವಸತಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ, ಮಡಿಕೇರಿ ಶಾಸಕರಾದ ಮಂಡೇಪಂಡ ಪಿ.ಅಪ್ಪಚ್ಚು ರಂಜನ್, ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಮತ್ತು ವಿರಾಜಪೇಟೆ ಶಾಸಕರಾದ ಕೊಂಬಾರನ ಜಿ.ಬೋಪಯ್ಯ, ಜಿ.ಪಂ. ಅಧ್ಯಕ್ಷರಾದ ಬಿ.ಎ.ಹರೀಶ್, ಮೈಸೂರು-ಕೊಡಗು ಲೋಕಸಭಾ ಸದಸ್ಯರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಮಂಡೇಪಂಡ ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಮಡಿಕೇರಿ ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡಮಿಯ ಅಧ್ಯಕ್ಷರಾದ ಲಕ್ಷ್ಮೀ ನಾರಾಯಣ ಕಜೆಗದ್ದೆ, ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಅಧ್ಯಕ್ಷರಾದ ಅಮ್ಮಾಟಂಡ ಪಾರ್ವತಿ ಅಪ್ಪಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷರಾದ ಸೂರ್ತಲೆ ಸೋಮಣ್ಣ, ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮ್ದಾಸ್, ರಿಜಿಸ್ಟ್ರಾರ್ ಚಿನ್ನಸ್ವಾಮಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ ಇತರರು ಪಾಲ್ಗೊಳ್ಳಲಿದ್ದಾರೆ.
