ಕೊಡಗಿನಲ್ಲಿ ಕೋವಿಡ್ : 4,476 ಮಂದಿ ಗುಣಮುಖ

October 27, 2020

ಮಡಿಕೇರಿ ಅ.27 : ಕೊಡಗು ಜಿಲ್ಲೆಯಲ್ಲಿ ಮಂಗಳವಾರ 29 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4802 ಆಗಿದ್ದು, 4,476 ಮಂದಿ ಗುಣಮುಖರಾಗಿದ್ದಾರೆ. 259 ಸಕ್ರಿಯ ಪ್ರಕರಣಗಳಿದ್ದು, 67 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 229 ಆಗಿದೆ ಎಂದು ಮಾಹಿತಿ ನೀಡಿದ್ದಾರೆ.
ಇಂದು 26 ಪ್ರಕರಣಗಳು ಆರ್‍ಟಿಪಿಸಿಆರ್ ಮೂಲಕ ಹಾಗೂ 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣಗಳು ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. 03 ರ್ಯಾಪಿಡ್ ಆಂಟಿಜನ್ ಪರೀಕ್ಷೆ.
ಸೋಮವಾರಪೇಟೆ ತಾಲೂಕಿನಲ್ಲಿ 14 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 14 ಆರ್‍ಟಿಪಿಸಿಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ವಿರಾಜಪೇಟೆ ತಾಲೂಕಿನಲ್ಲಿ 09 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 09 ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. ಹೊರ ಜಿಲ್ಲೆಯವರ ಪೈಕಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಈ ಪೈಕಿ 2 ಪ್ರಕರಣ ಆರ್‍ಟಿಪಿಸಿಆರ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.

error: Content is protected !!