ಸರಳ ದಸರಾ ಆಚರಣೆ : ಸಾರ್ವಜನಿಕರು, ದಸರಾ ಸಮಿತಿ ಹಾಗೂ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸಿದ ಜಿಲ್ಲಾಧಿಕಾರಿ

27/10/2020

ಮಡಿಕೇರಿ ಅ.27 : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕವಾಗಿ ಕೋವಿಡ್-19 ಮಾರ್ಗಸೂಚಿಯಂತೆ ಆಚರಿಸಿರುವುದಕ್ಕೆ ಸಾರ್ವಜನಿಕರು, ದಸರಾ ಸಮಿತಿ ಹಾಗೂ ಪೊಲೀಸ್ ಇಲಾಖೆಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಕೃತಜ್ಞತೆ ಸಲ್ಲಿಸಿದ್ದಾರೆ.
ಕೋವಿಡ್-19 ನಿರ್ದೇಶನಗಳನ್ನು ಪಾಲಿಸುವ ಮೂಲಕ ಜಿಲ್ಲಾಡಳಿತದೊಂದಿಗೆ ಸಹಕರಿಸಿದ್ದಕ್ಕೆ ಜಿಲ್ಲಾಡಳಿತ ಕೃತಜ್ಞತೆ ಸಲ್ಲಿಸುತ್ತದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.