ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4824ಕ್ಕೆ ಏರಿಕೆ

October 28, 2020

ಮಡಿಕೇರಿ ಅ. 28 : ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ 8 ಗಂಟೆ ವೇಳೆಗೆ 22 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
8 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 14 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 10 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 6 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 7 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಆರ್.ಟಿ.ಪಿ.ಸಿ.ಆರ್ ಮತ್ತು 5 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 5 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 2 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 3 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4824 ಆಗಿದ್ದು, 4493 ಮಂದಿ ಗುಣಮುಖರಾಗಿದ್ದಾರೆ. 263
ಸಕ್ರಿಯ ಪ್ರಕರಣಗಳಿದ್ದು, 68 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 218 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

error: Content is protected !!