ಚಕ್ರ ಬಡ್ಡಿ ಮನ್ನಾ ಯೋಜನೆ

October 28, 2020

ಮುಂಬೈ ಅ.28 : ಲಾಕ್‍ಡೌನ್‍ಅವಧಿಯಲ್ಲಿ ಸಾಲಗಾರರ ಚಕ್ರ ಬಡ್ಡಿ ಮನ್ನಾ ಮಾಡುವ ಸರ್ಕಾರದ ಯೋಜನೆ ಕುರಿತು ಭಾರತೀಯ ರಿಸರ್ವ್‍ಬ್ಯಾಂಕ್(ಆರ್‍ಬಿಐ) ಮಂಗಳವಾರ ಅಧಿಸೂಚನೆ ಹೊರಡಿಸಿದೆ.

ಜೊತೆಗೆ, ಎಲ್ಲಾ ಸಾಲ ನೀಡುವ ಸಂಸ್ಥೆಗಳಿಗೆ ನಿಗದಿತ ಸಮಯದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಆರ್ ಬಿಐ ಸೂಚನೆ ನೀಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಆರ್‍ಬಿಐ, ಸರ್ಕಾರ ಅಕ್ಟೋಬರ್ 23, 2020 ರಂದು ನಿಗದಿತ ಸಾಲ ಖಾತೆಗಳಲ್ಲಿ (2020 ಮಾ.1 ರಿಂದ ಆ.31) ಸಾಲಗಾರರಿಗೆ ಆರು ತಿಂಗಳ ಕಾಲ ಚಕ್ರ ಬಡ್ಡಿ ಮತ್ತು ಸರಳ ಬಡ್ಡಿ ನಡುವಿನ ವ್ಯತ್ಯಾಸವನ್ನು ಎಕ್ಸ್-ಗ್ರೇಷಿಯಾ ಪಾವತಿ ನೀಡುವ ಯೋಜನೆ ಪ್ರಕಟಿಸಿದೆ.
ಇದರ ಅನುಸಾರ ಮಾ.1 ರಿಂದ ಆ.31ರವರೆಗಿನ ಅವಧಿಗೆ ಆಯಾ ಸಾಲ ನೀಡುವ ಸಂಸ್ಥೆಗಳಿಂದ ಸರಳ ಬಡ್ಡಿ ಮತ್ತು ಸಂಯುಕ್ತ ಬಡ್ಡಿ ನಡುವಿನ ವ್ಯತ್ಯಾಸವನ್ನು ಜಮಾ ಮಾಡುವ ಮೂಲಕ ಕೆಲವು ವರ್ಗದ ಸಾಲಗಾರರಿಗೆ ಎಕ್ಸ್-ಗ್ರೇಷಿಯಾ ಪಾವತಿ ಕಡ್ಡಾಯಗೊಳಿಸುತ್ತದೆ” ಎಂದಿದೆ.

error: Content is protected !!