ಲಸಿಕೆಗಾಗಿ ತಜ್ಞರ ಸಮಿತಿ ರಚನೆ

28/10/2020

ಬೆಂಗಳೂರು ಅ.28 : ಕೊರೋನಾ ಲಸಿಕೆ ಲಭ್ಯವಾದ ನಂತರ ಪ್ರತಿಯೊಬ್ಬರಿಗೂ ತಲುಪಿಸಲು ಪೂರ್ವಸಿದ್ಧತೆಗಳು ನಡೆಯುತ್ತಿದ್ದು ಸರಬರಾಜು, ಸಂಗ್ರಹಣೆ ಸೇರಿದಂತೆ ಎಲ್ಲಾ ಪ್ರಕ್ರಿಯೆಗಳ ಬಗ್ಗೆ ಸಲಹೆ ನೀಡಲು ತಜ್ಞರ ಸಮಿತಿ ರಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.

ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೋನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳ ಜೊತೆಗಿನ ಸಭೆಯ ನಂತ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಥಮ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ನಂತರ ವಯೋವೃದ್ಧರು ಮತ್ತು ಇತರೆ ಸಹ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ ಲಸಿಕೆ ನೀಡಲಾಗುವುದು ಎಂದರು.