ಕೊಡಗಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖ

28/10/2020

ಮಡಿಕೇರಿ ಅ. 28 : ಕೊಡಗು ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದೆ. ಕಳೆದ ಒಂದು ತಿಂಗಳಿನಿಂದ ಪ್ರತಿದಿನ 100 ರಿಂದ 130 ಜನರಲ್ಲಿ ಕಾಣಿಸಿಕೊಳ್ಳುತ್ತಿದ್ದ ಸೋಂಕು ಇದೀಗ 20 ರಿಂದ 40 ಕ್ಕೆ ಇಳಿಕೆಯಾಗಿದೆ. ಸಾವಿನ ಪ್ರಮಾಣವೂ ಕಡಿಮೆಯಾಗಿದ್ದು, ಕಳೆದ ಮೂರು ದಿನಗಳಿಂದ ಯಾವುದೇ ಸಾವಿನ ಪ್ರಕರಣ ಸಂಭವಿಸಿಲ್ಲ.

ಕೋವಿಡ್ ಸೋಂಕು ನಿಯಂತ್ರಣದಲ್ಲಿದ್ದರೂ ಸಾರ್ವಜನಿಕರು ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮನವಿ ಮಾಡಿದ್ದಾರೆ.