ಜಿಲ್ಲಾ ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಆಚರಣೆ

28/10/2020

ಮಡಿಕೇರಿ ಅ.28 : ಜಿಲ್ಲಾಡಳಿತದ ವತಿಯಿಂದ 65 ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯು ನ.1 ರಂದು ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಸರ್ಕಾರಿ ಜಮೀನುಗಳ ಸಂರಕ್ಷಣಾ ಸಮಿತಿ ಅಧ್ಯಕ್ಷರು ಹಾಗೂ ಶಾಸಕರಾದ ಕೆ.ಜಿ.ಬೋಪಯ್ಯ, ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್, ಸಂಸದರಾದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುನೀಲ್ ಸುಬ್ರಮಣಿ, ವೀಣಾ ಅಚ್ಚಯ್ಯ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಮಡಿಕೇರಿ ತಾ.ಪಂ.ಅಧ್ಯಕ್ಷರಾದ ತೆಕ್ಕಡೆ ಶೋಭಾ ಮೋಹನ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಬಿ.ಎಸ್.ಲೋಕೇಶ್ ಸಾಗರ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ ಇತರರು ಪಾಲ್ಗೊಳ್ಳಲಿದ್ದಾರೆ.