ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 4,841

29/10/2020

ಮಡಿಕೇರಿ ಅ. 28 : ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8 ಗಂಟೆ ವೇಳೆಗೆ 17 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
9 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 8 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 15 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 8 ಆರ್.ಟಿ.ಪಿ.ಸಿ.ಆರ್ ಮತ್ತು 7 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 2 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 1 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4841 ಆಗಿದ್ದು, 4541 ಮಂದಿ ಗುಣಮುಖರಾಗಿದ್ದಾರೆ. 232
ಸಕ್ರಿಯ ಪ್ರಕರಣಗಳಿದ್ದು, 68 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 199 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.