ಇಂಜಿನಿಯರ‍್ಸ್ ದಿನ : ಕುಶಾಲನಗರ ರೋಟರಿ ಸಂಸ್ಥೆಯಿಂದ ವಿನಯ್ ಕುಮಾರ್‍ಗೆ ಸನ್ಮಾನ

29/10/2020

ಮಡಿಕೇರಿ ಅ. 29 : ಕುಶಾಲನಗರದ ರೋಟರಿ ಸಂಸ್ಥೆ ವತಿಯಿಂದ ಇಂಜಿನಿಯರ್ಸ್ ದಿನವನ್ನು ಆಚರಿಸಲಾಯಿತು.
ಈ ಸಂದರ್ಭ ಗಣ್ಯರು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ಸಾಧನೆಯನ್ನು ನೆನಪಿಸಿಕೊಂಡರು.
ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪದ ಸಂದರ್ಭ ಸಾರ್ವಜನಿಕರಿಗೆ ತೊಂದರೆಯಾಗದ ರೀತಿಯಲ್ಲಿ ಸಮರ್ಪಕವಾಗಿ ವಿದ್ಯುತ್ ಪೂರೈಸಲು ಕಾರ್ಯ ನಿರ್ವಹಿಸಿದ ಕುಶಾಲನಗರ ಸೆಸ್ಕ್ ನ ಅಸಿಸ್ಟೆಂಟ್ ಇಂಜಿನಿಯರ್ ವಿನಯ್ ಕುಮಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.