ಜವಾಹರ್ ನವೋದಯ ವಿದ್ಯಾಲಯ : 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

29/10/2020

ಮಡಿಕೇರಿ ಅ.29 : ಗಾಳಿಬೀಡು ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿಗೆ 2021-22 ನೇ ಸಾಲಿನ ಶೈಕ್ಷಣಿಕ ಸಾಲಿಗೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು. ಕೊಡಗು ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ, ಸರ್ಕಾರಿ ಅನುದಾನಿತ ಶಾಲೆಗಳಲ್ಲಿ 2020-21 ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು ನವೋದಯ ವಿದ್ಯಾಲಯ ಸಮಿತಿಯ ವೆಬ್‍ಸೈಟ್ http://cbseitms.in/nvsregn/index.aspx ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್, 15 ಕೊನೆಯ ದಿನವಾಗಿದೆ. 2021 ರ ಏಪ್ರಿಲ್, 10 ರಂದು ಪರೀಕ್ಷೆ ನಡೆಯಲಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬಹುದು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಿ.ಎಂ.ಐಸಾಕ್ ಅವರು ತಿಳಿಸಿದ್ದಾರೆ.