ಕೊಡಗಿನಲ್ಲಿ ಕೋವಿಡ್ : ಸೋಂಕಿತರ ಸಂಖ್ಯೆ 4866

October 30, 2020

ಮಡಿಕೇರಿ ಅ.29 : ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8 ಗಂಟೆ ವೇಳೆಗೆ 25 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ.
23 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಮೂಲಕ ಹಾಗೂ 2 ಪ್ರಕರಣಗಳು ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಮಡಿಕೇರಿ ತಾಲೂಕಿನಲ್ಲಿ 4 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿವೆ. ಈ ಪೈಕಿ 4 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 09 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 09 ಪ್ರಕರಣಗಳು ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ವಿರಾಜಪೇಟೆ ತಾಲೂಕಿನಲ್ಲಿ 12 ಹೊಸ ಕೋವಿಡ್-19 ಪ್ರಕರಣಗಳು ಕಂಡುಬಂದಿದೆ. ಈ ಪೈಕಿ 10 ಪ್ರಕರಣ ಆರ್.ಟಿ.ಪಿ.ಸಿ.ಆರ್ ಮೂಲಕ ಮತ್ತು 2 ಪ್ರಕರಣ ರ್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 4866 ಆಗಿದ್ದು, 4565 ಮಂದಿ ಗುಣಮುಖರಾಗಿದ್ದಾರೆ. 233
ಸಕ್ರಿಯ ಪ್ರಕರಣಗಳಿದ್ದು, 68 ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 187 ಆಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.